ಯುಎಪಿಎಯಡಿ ಪ್ರಕರಣ ದಾಖಲಿಸಲು ಪ್ರತಿಭಟನೆ ಆಯೋಜನೆ ಕಾರಣವಷ್ಠೇ ಸಾಕಾಗುತ್ತದೆಯೆ? ಪ್ರತಿಭಟನೆ ಆಯೋಜನೆ ಮಾತ್ರಕ್ಕೆ ಯುಎಪಿಎ ದಾಖಲಿಸಬಹುದಾ? ಎಂದು ದೆಹಲಿ ಹೈಕೋರ್ಟ್ ಪ್ರಶ್ನಿಸಿದೆ.
ದೆಹಲಿ ಹಿಂಸಾಚಾರಕ್ಕೆ ಪಿತೂರಿ ಪ್ರಕರಣದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ವಿದ್ಯಾರ್ಥಿ ಹೋರಾಟಗಾರ ಶಾರ್ಜೀಲ್ ಇಮಾಮ್ ಸೇರಿದಂತೆ ಇತರರ ಜಾಮೀನು ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ಶಾಲಿಂದರ್ ಕೌರ್ ಅವರ ಪೀಠವು ದೆಹಲಿ ಪೊಲೀಸರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಮಿತ್ ಪ್ರಸಾದ್ ಅವರಿಗೆ ಈ ಮಹತ್ವದ ಪ್ರಶ್ನೆಯನ್ನು ಕೇಳಿದೆ.
ಯುಎಪಿಎ ವಿಧಿಸಲು ಪ್ರತಿಭಟನೆ ಆಯೋಜಿಸುವುದಷ್ಟೆ ಸಾಕಾಗುತ್ತದೆಯೆ? ಆರೋಪಿಗಳು ಹಿಂಸಾತ್ಮಕ ಕೃತ್ಯವನ್ನು ಯೋಜಿಸಿ ಅದನ್ನು ಕಾರ್ಯಗತಗೊಳಿಸಿದ್ದಾರೆ ಎಂಬುದಕ್ಕೆ ಪುರಾವೆಗಳಿದ್ದರೆ, ಭಯೋತ್ಪಾದನಾ ವಿರೋಧಿ ಕಾನೂನಿನ ನಿಬಂಧನೆಗಳನ್ನು ಅನ್ವಯಿಸಬಹುದು ಎಂದು ನ್ಯಾಯಾಲಯ ಹೇಳಿದೆ. ಆದರೆ ವಾಟ್ಸಾಪ್ ಗುಂಪು ಮೂಲಕ ಪ್ರತಿಭಟನೆಗಳನ್ನುಆಯೋಜಿಸುತ್ತಿದ್ದಾರೆ ಎಂಬುದು ನಿಮ್ಮ ವಾದವಾಗಿದೆ, ಅದು ಯುಎಪಿಎ ದಾಖಲಾತಿಗೆ ಸಾಕಾಗುತ್ತದೆಯೆ ಎಂದು ಪೀಠ ಕೇಳಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರದ ಹಗ್ಗ ಜಗ್ಗಾಟ, ಹಳಿ ತಪ್ಪುತ್ತಿರುವ ಆಡಳಿತ, ಭ್ರಮನಿರಸನಗೊಂಡ ಜನ
ಯುಎಪಿಎ ವಿಧಿಸಲು ಕೇವಲ ಪ್ರತಿಭಟನೆಗಳನ್ನು ಆಯೋಜಿಸುವುದು ಸಾಕೆ? ಅಥವಾ ಅಂತಹ ಪ್ರತಿಭಟನಾ ಸ್ಥಳಗಳು ಹಿಂಸಾಚಾರಕ್ಕೆ ಕಾರಣವಾಗಿವೆಯೆ? ಎಂದು ನ್ಯಾಯಾಲಯ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಪ್ರಶ್ನಿಸಿದೆ.
ʼಆರೋಪಿಗಳು ಮುಂಭಾಗಕ್ಕೆ ಶಾಂತಿಯುತ ಪ್ರತಿಭಟನೆಗಳು ಮಾಡುತ್ತಿದ್ದರು, ಆದರೆ ಸಾಮೂಹಿಕ ಹಿಂಸಾಚಾರವೇ ಅವರ ಉದ್ದೇಶವಾಗಿತ್ತುʼ ಎಂದು ಪ್ರಸಾದ್ ಈ ವೇಳೆ ವಾದಿಸಿದ್ದಾರೆ.