ಭಾರತದ ಚುನಾವಣೆ ತಿರುವು ಪಡೆಯುತ್ತಿದೆಯೆ? ಹಿರಿಯ ಪತ್ರಕರ್ತ ಎನ್ ರಾಮ್ ಪ್ರಶ್ನೆ

Date:

ಲೋಕಸಭೆ ಚುನಾವಣೆಯ ಮೂರು ಹಂತಗಳ ಮತದಾನ ಪೂರ್ಣಗೊಂಡಿದ್ದು ಬಹುತೇಕ 284 ಕ್ಷೇತ್ರಗಳ ಮತದಾನ ಮುಕ್ತಾಯವಾಗಿದೆ. ಈ ಹಂತದಲ್ಲಿ ಭಾರತದ ಚುನಾವಣೆ ತಿರುವು ಪಡೆಯುತ್ತಿರುವ ಬಗ್ಗೆ ಹಿರಿಯ ಪತ್ರಕರ್ತ ಎನ್ ರಾಮ್ ಪ್ರಶ್ನಿಸಿದ್ದಾರೆ.

- Advertisement -

ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಷೇರು ಮಾರುಕಟ್ಟೆಗಳು, ಮಾನದಂಡ ಸೂಚ್ಯಂಕಗಳು ಸೇರಿದಂತೆ ಇತರ ಸೂಚ್ಯಂಕಗಳ ನಡುವೆ ಖಂಡಿತವಾಗಿಯೂ ಭಾರತದ ಚುನಾವಣೆ ತಿರುವು ಪಡೆಯುತ್ತಿರುವುದನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇಂಡಿಯಾ ಒಕ್ಕೂಟ ಹೆಚ್ಚು ಪಕ್ಷಗಳೊಂದಿಗೆ ಮೈತ್ರಿ ಹೊಂದಿಲ್ಲ. ಆದರೆ ಈ ಒಕ್ಕೂಟವು ಆಂತರಿಕ ವಿರೋಧಾಭಾಸಗಳೊಂದಿಗಿನ ಕಾರ್ಯತಂತ್ರದ ರಾಜಕೀಯ ವ್ಯವಸ್ಥೆಯನ್ನು ಹೊಂದಿದೆ. ಇದು ಕ್ಷೇತ್ರಗಳ ಮೇಲೂ ಪರಿಣಾಮ ಬೀರುತ್ತಲಿದ್ದು, ಕೆಲ ರಾಜ್ಯಗಳಲ್ಲಿ ಮೈತ್ರಿ ಉತ್ತಮ ಸ್ಥಿತಿಯಲ್ಲಿದೆ. ಅದಲ್ಲದೆ ಅಭಿಪ್ರಾಯ ಸಮೀಕ್ಷೆಗಳು ಊಹಿಸಿರುವುದಕ್ಕಿಂತ ಗಮನಾರ್ಹವಾಗಿ ಉತ್ತಮವಾಗಿವೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ

ಇಂಗ್ಲೆಂಡ್ ಮಾಜಿ ಪ್ರಧಾನಿ ವಿನ್‌ಸ್ಟನ್‌ ಚರ್ಚಿಲ್ ಅವರು ಹೇಳಿಕೆಯನ್ನು ಇದೇ ಸಂದರ್ಭದಲ್ಲಿ ಎನ್ ರಾಮ್ ಉಲ್ಲೇಖಿಸಿದ್ದಾರೆ.

ಎರಡನೆಯ ಮಹಾಯುದ್ಧದ ಅಂತ್ಯದಲ್ಲಿ ಹಿರಿಯ ಬ್ರಿಟಿಷ್ ಜನರಲ್‌ಗೆ ವಿನ್‌ಸ್ಟನ್‌ ಚರ್ಚಿಲ್ ಅವರು ಹೇಳಿದ್ದ ಪ್ರಸಿದ್ಧ ಮಾತೊಂದು ಇಲ್ಲಿ ನೆನಪಿಗೆ ಬರುತ್ತದೆ. “ಮಿತ್ರರಾಷ್ಟ್ರಗಳೊಂದಿಗೆ ಹೋರಾಡುವುದಕ್ಕಿಂತ ಒಂದೇ ಒಂದು ಕೆಟ್ಟ ವಿಷಯವೆಂದರೆ ಅದು ಅವರಿಲ್ಲದೆ ಹೋರಾಡುವುದು!” ಎಂದು ಹೇಳಿದ್ದಾರೆ.

ಯೂಟ್ಯೂಬರ್ ಧ್ರುವ್ ರಾಠೀ ಕೂಡ ಪ್ರಸ್ತುತ ರಾಜಕೀಯ ಸನ್ನಿವೇಶದ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಸಮುದ್ರದ ಅಲೆಯಬ್ಬರ ಮಗ್ಗುಲು ಬದಲಿಸಿದೆ…ಬೀಸಲಿದೆ ಚಂಡಮಾರುತವೊಂದು. ಒಂದೊಂದಾಗಿ ಹುಸಿ ಪ್ರಚಾರಕ್ಕೆ ಕಡಿವಾಣ ಬೀಳುತ್ತಿದೆ ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...