ಮೋಶಾ ಆಡಳಿತ ಬಿತ್ತಿದ ಭಯ ತೊಲಗಿದ್ದು ಒಂದು ಅದ್ಭುತ: ನೇಹಾ ಬೋರಾ

Date:

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ (ಮೋಶಾ) ಅವರ ಆಡಳಿತಾವಧಿಯಲ್ಲಿ ದೇಶದಲ್ಲಿದ್ದ ಭಯ ಮತ್ತು ಆತಂಕದ ವಾತಾವರಣವು ಸದ್ಯ ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳು ಹಾಗೂ ನಾಗರಿಕರ ಜಾಗೃತಿಯಿಂದಾಗಿ ಈ ಭಯವು ತೊಲಗುತ್ತಿರುವುದು ಒಂದು ಅದ್ಭುತ ಸಂಗತಿ ಎಂದು ಅಖಿಲ ಭಾರತ ವಿದ್ಯಾರ್ಥಿಗಳ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ಹಾಗೂ ಯುವ ಹೋರಾಟಗಾರ್ತಿ ನೇಹಾ ಬೋರಾ ಹೇಳಿದ್ದಾರೆ.

- Advertisement -

ವಿದ್ಯಾರ್ಥಿ ಸಂಘಟನೆಗಳು ಹಾಗೂ ಸಾರ್ವಜನಿಕ ಚಳವಳಿಗಳ ಕುರಿತು ಮಾತನಾಡಿದ ನೇಹಾ ಬೋರಾ, “ಕೇಂದ್ರ ಸರ್ಕಾರದ ನೀತಿಗಳು, ತನಿಖಾ ಸಂಸ್ಥೆಗಳ ಮೇಲಿನ ಒತ್ತಡ, ಪ್ರಜಾಸತ್ತಾತ್ಮಕ ಧ್ವನಿಗಳ ಹತೋಟಿಯಿಂದಾಗಿ ಕಳೆದ ಕೆಲವು ವರ್ಷಗಳಲ್ಲಿ ದೇಶದಲ್ಲಿ ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಒಂದು ರೀತಿಯ ಭಯದ ವಾತಾವರಣ ಸೃಷ್ಟಿಯಾಗಿತ್ತು. ಆದರೆ, ಇತ್ತೀಚೆಗೆ ವಿದ್ಯಾರ್ಥಿ ಸಮುದಾಯ ಮತ್ತು ಸಾರ್ವಜನಿಕರು ತಮ್ಮ ಹಕ್ಕುಗಳಿಗಾಗಿ ಬೀದಿಗಿಳಿದು ಧ್ವನಿ ಎತ್ತುತ್ತಿರುವುದು ಪ್ರಜಾಪ್ರಭುತ್ವದ ನಿಜವಾದ ಶಕ್ತಿಯನ್ನು ತೋರಿಸಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಇದನ್ನೂ ಓದಿ: CEC ಗ್ಯಾನೇಶ್‌ ಕುಮಾರ್‌ ವಿರುದ್ಧ ಭುಗಿಲೆದ್ದ ಆಕ್ರೋಶ; ತೀವ್ರಗೊಂಡ ಮೋಶಾ ದಮನ ಕ್ರಮಗಳು

ಕೇಂದ್ರದ ಮೋಶಾ ಸರ್ಕಾರವು ಬಿತ್ತಿದ್ದ ಭಯದ ವಾತಾವರಣವು ದೇಶದ ಪ್ರಜಾಸತ್ತಾತ್ಮಕ ಮೌಲ್ಯಗಳನ್ನೇ ಹತ್ತಿಕ್ಕುವ ಹಂತಕ್ಕೆ ತಲುಪಿತ್ತು. ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ, ವಿದ್ಯಾರ್ಥಿ ಚಳವಳಿಗಳ ಮೇಲಿನ ದಬ್ಬಾಳಿಕೆ, ಸಾಂವಿಧಾನಿಕ ಹಕ್ಕುಗಳನ್ನು ಪ್ರತಿಪಾದಿಸುವವರನ್ನು ಗುರಿಯಾಗಿಸಿಕೊಂಡಿದ್ದರಿಂದ ಜನಸಾಮಾನ್ಯರು ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿದ್ದವರು ಭಯದಲ್ಲೇ ದಿನ ದೂಡುವಂತಾಗಿತ್ತು” ಎಂದು ಹೇಳಿದ್ದಾರೆ.

Advertisements

“ಆದರೆ, ಮೋಶಾ ಆಡಳಿತ ಬಿತ್ತಿದ್ದ ಭಯದ ವಾತಾವರಣವನ್ನು ಮೆಟ್ಟಿ ನಿಂತು ಯುವಜನತೆ ಮತ್ತು ವಿದ್ಯಾರ್ಥಿಗಳು ಹೋರಾಟದ ಹಾದಿ ಹಿಡಿದಿರುವುದು, ಈ ಭಯದ ನಿವಾರಣೆಯಾಗುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಿಕ್ಕ ದೊಡ್ಡ ಜಯ” ಎಂದೂ ತಿಳಿಸಿದ್ದಾರೆ.

ಅಖಿಲ ಭಾರತ ವಿದ್ಯಾರ್ಥಿಗಳ ಸಂಘವು (AISA) ದೇಶಾದ್ಯಂತ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಹಕ್ಕುಗಳ ರಕ್ಷಣೆ, ಸಾಂವಿಧಾನಿಕ ಮೌಲ್ಯಗಳ ಪುನರುಜ್ಜೀವನ ಮತ್ತು ಮುಕ್ತ ಶೈಕ್ಷಣಿಕ ವಾತಾವರಣಕ್ಕಾಗಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಿದೆ ಎಂದು ನೇಹಾ ಬೋರಾ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಖಾಸಗಿ ಬಸ್ ಬೆಂಕಿಗಾಹುತಿ!

ಶಿವಮೊಗ್ಗ- ಸಾಗರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು,...

ವಿರೋಧಿಗಳಿಂದ ‘ಸ್ಟಿಂಗ್ ಆಪರೇಷನ್’ ಅಸ್ತ್ರ: ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ 'ಕುಟುಕು ಕಾರ್ಯಾಚರಣೆ' (ಸ್ಟಿಂಗ್ ಆಪರೇಷನ್) ವಿವಾದ ಕಾವು...

ಶಿವಮೊಗ್ಗ | ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಅರಣ್ಯ ಇಲಾಖೆ ಸಿಬ್ಬಂದಿ ಬಂಧನ

ಶಿವಮೊಗ್ಗ ನಗರದ ವಾದಿ-ಹುದಾ ಸಮೀಪ 8 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ...