ಕೇರಳದಲ್ಲಿ ಲೋಕಸಭಾ ಚುನಾವಣಾ ದಿನಾಂಕ ಬದಲಿಸಲು ಮುಸ್ಲಿಂ ಸಂಘಟನೆಗಳಿಂದ ಚುನಾವಣಾ ಆಯೋಗಕ್ಕೆ ಮನವಿ

Date:

ಐಯುಎಂಎಲ್ ಹಾಗೂ ಕೆಲವು ಪ್ರಮುಖ ಮುಸ್ಲಿಂ ಧಾರ್ಮಿಕ ಸಂಘಟನೆಗಳು ಕೇರಳ ದಲ್ಲಿ ಶುಕ್ರವಾರ ಘೋಷಿಸಲಾಗಿರುವ ಲೋಕಸಭಾ ಚುನಾವಣಾ ದಿನಾಂಕವನ್ನು ಬದಲಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿವೆ.

ಇಸ್ಲಾಂ ವಿದ್ವಾಂಸರ ವೇದಿಕೆ ದಿ ಸಂಸ್ಥಾ ಜಮಿಯತುಲ್‌ ಉಲ್ಮಾ, ಆಲ್‌ ಇಂಡಿಯಾ ಸುನ್ನಿ ಜಮಿಯತುಲ್ ಉಲಾಮ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕಾಂತಪುರಂ ಎ ಪಿ ಅಬೂಬ್‌ಕರ್ ಮುಸ್ಲಿಯಾರ್ ಒಳಗೊಂಡ ನಾಯಕರು ಶುಕ್ರವಾರದ ದಿನಾಂಕವನ್ನು ಬದಲಿಸುವಂತೆ ಕೋರಿದ್ದಾರೆ.

ಶುಕ್ರವಾರ ಚುನಾವಣಾ ದಿನಾಂಕ ಹಮ್ಮಿಕೊಂಡರೆ ಇಸ್ಲಾಂ ಧಾರ್ಮಿಕ ನಂಬಿಕೆಯಂತೆ ಮಸೀದಿಗೆ ಹೋಗಿ ಪ್ರಾರ್ಥನೆ ಸಲ್ಲಿಸುವ ಮುಸ್ಲಿಂ ಮತದಾರರು ಹಾಗೂ ಚುನಾವಣೆಗೆ ನಿಯೋಜನೆಗೊಳ್ಳುವ ಮುಸ್ಲಿಂ ಸಮುದಾಯದ ಅಧಿಕಾರಿಗಳು ಕರ್ತವ್ಯ ನಿಭಾಯಿಸುವುದಕ್ಕೆ ಅನಾನುಕೂಲವಾಗುತ್ತದೆ ಎಂದು ಈ ಸಂಘಟನೆಗಳ ಕಳವಳ ವ್ಯಕ್ತಪಡಿಸಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಚ್ಚಿಟ್ಟ ಮಾಧ್ಯಮಗಳು ಬಿಚ್ಚಿಟ್ಟ ಸಾಮಾಜಿಕ ಮಾಧ್ಯಮಗಳು

ಐಯುಎಂಎಲ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ಎಂ ಎ ಸಲೀಮ್ ಸುದ್ದಿಗಾರರೊಂದಿಗೆ ಮಾತನಾಡಿ, ಸಮುದಾಯದ ಕಾಳಜಿಯ ಹಿತದೃಷ್ಟಿಯಿಂದ ಪಕ್ಷವು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಿದೆ ಎಂದು ತಿಳಿಸಿದ್ದಾರೆ.

ಕೇರಳದಲ್ಲಿ ಏಪ್ರಿಲ್ 26ರಂದು ಶುಕ್ರವಾರ ನಡೆಯುವ ಎರಡನೇ ಹಂತದ ಚುನಾವಣೆಯಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 19ರಂದು ನಡೆಯುವ ಮೊದಲ ಹಂತದ ಚುನಾವಣೆ ಕೂಡ ಶುಕ್ರವಾರವೇ ನಡೆಯಲಿದೆ. ಈ ದಿನಾಂಕದಂದು ತಮಿಳುನಾಡಿನ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.

ಐಯುಎಂಎಲ್ ಕಾಂಗ್ರೆಸ್‌ನ ಮಿತ್ರ ಪಕ್ಷವಾಗಿದ್ದು, ಕೇರಳ ಹಾಗೂ ತಮಿಳುನಾಡಿನಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ.

ಶುಕ್ರವಾರ ನಡೆಯುವ ಚುನಾವಣೆ ಬಗ್ಗೆ ಕೇರಳದ ಬಿಜೆಪಿ ನಾಯಕರು ಕೂಡ ಕಳವಳ ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಚುನಾವಣೆ | ಇನ್ನುಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು...

‘ತಾರಕ್ ಮೆಹ್ತಾ’ ನಟ ಗುರುಚರಣ್ ಸಿಂಗ್ ನಾಪತ್ತೆ; ಅಪಹರಣ ಪ್ರಕರಣ ದಾಖಲು

ಅತ್ಯಂತ ಜನಪ್ರಿಯ ಭಾರತೀಯ ಟಿವಿ ಶೋ ಆದ 'ತಾರಕ್ ಮೆಹ್ತಾ ಕಾ...

2ನೇ ಹಂತದ ಚುನಾವಣೆ | ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು; ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಗಿದಿದೆ. 13 ರಾಜ್ಯಗಳ...