J&K | 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಹತ್ಯೆ; ಕಣಿವೆಯಲ್ಲಿ ಸಿಡಿದ ಜನಾಕ್ರೋಶ

Date:

ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ನಿನ್ನೆ (ಮೇ.24) 12 ವರ್ಷದ ಬಾಲಕಿಯೊಬ್ಬಳನ್ನು ಅತ್ಯಾಚಾರ ಮಾಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಇಡೀ ಕಣಿವೆ ರಾಜ್ಯವನ್ನು ತಲ್ಲಣಗೊಳಿಸಿದೆ. ಬಾಲಕಿಯ ಮೃತದೇಹ ಆಕೆಯ ಮನೆಯಿಂದ ಕೇವಲ 200 ಮೀಟರ್ ದೂರದಲ್ಲಿ ಪತ್ತೆಯಾಗಿದ್ದು, ಕೃತ್ಯದ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಪರಾಧಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಸ್ಥಳೀಯರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

- Advertisement -

ವರದಿಗಳ ಪ್ರಕಾರ, ಬುದ್ಗಾಮ್ ಜಿಲ್ಲೆಯ ಗಲ್ವಾನ್‌ಪೋರಾ ಗ್ರಾಮದ ಈ ಬಾಲಕಿಯು ಶನಿವಾರ ಸಂಜೆ ಧಾರ್ಮಿಕ ತರಗತಿಗೆ (ಮದರಸಾ) ಹೋಗಲೆಂದು ಸಂಜೆ 4 ಗಂಟೆಗೆ ಮನೆಯಿಂದ ಹೊರಟಿದ್ದಳು. ಆದರೆ, ತರಗತಿ ಮುಗಿದರೂ ಆಕೆ ಮನೆಗೆ ಮರಳದೆ ನಾಪತ್ತೆಯಾಗಿದ್ದಳು. ಭಾನುವಾರ ಮುಂಜಾನೆ ಸುಮಾರು 7:15ರ ವೇಳೆಗೆ ಗ್ರಾಮದ ಹತ್ತಿರದ ಜಮೀನಿನಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಬಾಲಕಿಯು ತನ್ನೊಂದಿಗೆ ಕೊಂಡೊಯ್ದಿದ್ದ ಪವಿತ್ರ ಕುರಾನ್ ಗ್ರಂಥವೂ ಮೃತದೇಹದ ಬಳಿಯೇ ಬಿದ್ದಿರುವುದು ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಘಟನಾ ಸ್ಥಳಕ್ಕೆ ಧಾವಿಸಿದ ಬುದ್ಗಾಮ್ ಎಸ್‌ಎಸ್‌ಪಿ ಹರಿಪ್ರಸಾದ್ ಕೆ ಕೆ ಮಾಹಿತಿ ನೀಡಿ, “ಮೇಲ್ನೋಟಕ್ಕೆ ಇದು ಅತ್ಯಾಚಾರ ಮತ್ತು ಕೊಲೆಯ ಪ್ರಕರಣ ಎಂದು ಕಂಡುಬಂದಿದೆ. ಎಲ್ಲಾ ವೈದ್ಯಕೀಯ ಮತ್ತು ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದೆ. ಪ್ರಕರಣದ ನಿಷ್ಪಕ್ಷಪಾತ, ಪಾರದರ್ಶಕ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಲಾಗಿದೆ” ಎಂದು ತಿಳಿಸಿದ್ದಾರೆ. ತನಿಖೆಗೆ ಅಡ್ಡಿಯಾಗುವ ಹಾಗೂ ಜನರಲ್ಲಿ ಗೊಂದಲ ಮೂಡಿಸುವ ಯಾವುದೇ ಅಪೂರ್ಣ ಮಾಹಿತಿ ಅಥವಾ ವದಂತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಬಾರದು ಎಂದು ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧದ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಈ ಅಮಾನುಷ ಘಟನೆಯನ್ನು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತೀವ್ರವಾಗಿ ಖಂಡಿಸಿದ್ದಾರೆ. ಬಾಲಕಿಯ ಮರಣಕ್ಕೆ ತೀವ್ರ ಸಂತಾಪ ಸೂಚಿಸಿರುವ ಅವರು, “ಈ ಘಟನೆಯು ಅತ್ಯಂತ ಆಘಾತಕಾರಿ ಮತ್ತು ತೀವ್ರ ಬೇಸರ ತರಿಸಿದೆ. ನಮ್ಮ ಸಣ್ಣ ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿರುವಾಗ ನಾವು ಸಮಾಜವಾಗಿ ಎತ್ತ ಸಾಗುತ್ತಿದ್ದೇವೆ ಎಂಬುದನ್ನು ನಾವೆಲ್ಲರೂ ಗಂಭೀರವಾಗಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಕ್ಷಣ ಇದಾಗಿದೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ತನಿಖಾ ಸಂಸ್ಥೆಗಳಿಗೆ ಸರ್ಕಾರದಿಂದ ಸಂಪೂರ್ಣ ಬೆಂಬಲ ನೀಡಲಾಗುವುದು ಮತ್ತು ತಪ್ಪಿತಸ್ಥರಿಗೆ ಕಾನೂನಿನಡಿಯಲ್ಲಿ ಮಾದರಿ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕರು ಹಾಗೂ ಶಿಕ್ಷಣ ಸಚಿವೆ ಸಕೀನಾ ಯಾತೂ ಅವರು ಸಂತ್ರಸ್ತ ಕುಟುಂಬದ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದು, ಶೀಘ್ರ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ. ರಾಜಕೀಯ ನಾಯಕರು ಮತ್ತು ನಾಗರಿಕರು ಒಕ್ಕೊರಲಿನಿಂದ ಈ ಮೃಗೀಯ ಕೃತ್ಯ ಎಸಗಿದ ಕಾಮುಕರನ್ನು ತಕ್ಷಣವೇ ಗಲ್ಲಿಗೇರಿಸಬೇಕೆಂದು ಆಗ್ರಹಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ ಗ್ರಾಮಸ್ಥರು

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್‌; ದುಬಾರಿ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆ?

ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ...