ಗುಜರಾತ್: ದಲಿತ ವ್ಯಕ್ತಿ ಮೇಲೆ ಹಲ್ಲೆ ಮಾಡಿ ಜೈಲು ಸೇರಿದ್ದ ಬಿಜೆಪಿ ಶಾಸಕಿ ಪುತ್ರನಿಗೆ ಉನ್ನತ ಹುದ್ದೆ

Date:

ದಲಿತ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕಿ ಪುತ್ರನಿಗೆ ಉನ್ನತ ಹುದ್ದೆ ನೀಡಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ.

- Advertisement -

ಬಿಜೆಪಿ ಶಾಸಕಿ ಗೀತಾಬಾ ಜಡೇಜಾ ಅವರ ಪುತ್ರ ಜ್ಯೋತಿರಾದಿತ್ಯಸಿಂಹ ಜಡೇಜಾ ಅಲಿಯಾಸ್ ಗಣೇಶ್, ರಾಜ್‌ಕೋಟ್‌ ನಗರದ ಗೊಂಡಲ್ ಪಟ್ಟಣದ ಗೊಂಡಲ್ ನಾಗರಿಕ ಸಹಕಾರಿ ಬ್ಯಾಂಕ್ ಚುನಾವಣೆಯಲ್ಲಿ ಜೈಲಿನಲ್ಲಿದ್ದುಕೊಂಡೇ ಸ್ಪರ್ಧಿಸಿ ಗೆಲುವನ್ನು ಸಾಧಿಸಿದ್ದ. ಇದಾದ ಕೆಲವೇ ಗಂಟೆಗಳಲ್ಲಿ ಜುನಾಗಢ್‌ನ ದಲಿತ ಸಮುದಾಯದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮತ್ತು ಅಪಹರಣ ಪ್ರಕರಣದಲ್ಲಿ ಗಣೇಶ್‌ಗೆ ಹೈಕೋರ್ಟ್ ಜಾಮೀನು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ನಾಲ್ಕು ತಿಂಗಳ ಹಿಂದೆ ಎನ್‌ಎಸ್‌ಯುಐ ಜುನಾಗಢ ನಗರ ಘಟಕದ ಅಧ್ಯಕ್ಷ ಸಂಜಯ್ ಅಲಿಯಾಸ್ ಚಂದು ಸೋಲಂಕಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗೊಂಡಲ್ ಪಟ್ಟಣದ ನಿವಾಸಿ ಗಣೇಶ್ ಮತ್ತು ಇತರ 10 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಲ್ಲಿ ಅಭಿವೃದ್ಧಿ, ಮಾಧ್ಯಮಗಳಲ್ಲಿ ಬ್ರ್ಯಾಂಡ್ ಬೆಂಗಳೂರು

ಎಫ್ಐಆರ್ ಪ್ರಕಾರ, ಆರೋಪಿಗಳು ಸೋಲಂಕಿಯನ್ನು ಕಾರಿನಲ್ಲಿ ಅಪಹರಿಸಿ, ಗೊಂಡಾಲ್‌ಗೆ ಕರೆದೊಯ್ದು ಹಲ್ಲೆ ನಡೆಸಿ, ಬಂದೂಕು ತೋರಿಸಿ ಬೆದರಿಸಿದ್ದಾರೆ. ಆರೋಪಕ್ಕೆ ಸಂಬಂಧಿಸಿ ಗಣೇಶ್ ಮತ್ತು ಇತರ ಸಹಚರರ ವಿರುದ್ಧ ಕೊಲೆಯತ್ನ, ಅಪಹರಣ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಪ್ರಕರಣದಲ್ಲಿ ಜೂ. 5 ರಂದು ಗಣೇಶ್‌ನನ್ನು ಬಂಧಿಸಲಾಗಿತ್ತು. ಕೋರ್ಟ್ ಗಣೇಶ್ ಸೇರಿ ಇತರರಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಜುನಾಗಢ ಜಿಲ್ಲಾ ಕಾರಾಗೃಹದಲ್ಲಿ ಅವರನ್ನು ಇರಿಸಲಾಗಿತ್ತು.

ಜೈಲಿನಲ್ಲಿದ್ದುಕೊಂಡೇ ಗಣೇಶ್ ಗೊಂಡಲ್ ನಾಗರಿಕ ಸಹಕಾರಿ ಬ್ಯಾಂಕ್‌ನ ನಿರ್ದೇಶಕರ ಮಂಡಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವನ್ನು ಸಾಧಿಸಿದ್ದ. ಸಹಕಾರಿ ಬ್ಯಾಂಕ್‌ನ ನಿರ್ದೇಶಕರ ಮಂಡಳಿಯಲ್ಲಿ ಈತನಿಗೆ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...