ಸೆರೆವಾಸದಲ್ಲಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ರಾಜೀನಾಮೆ

Date:

ಉದ್ಯೋಗಕ್ಕಾಗಿ ಹಣ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ 8 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

ಬಂಧನ ಹಾಗೂ ಅನಾರೋಗ್ಯದ ಹಿನ್ನೆಲೆ ತಮ್ಮ ಸಚಿವ ಸ್ಥಾನದ ಖಾತೆಗಳನ್ನು ಕಳೆದುಕೊಂಡಿರುವ ಬಾಲಾಜಿ ತಮ್ಮ ರಾಜೀನಾಮೆ ಆದೇಶದ ಅಂಗೀಕಾರಕ್ಕಾಗಿ ಕಾಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮದ್ರಾಸ್ ಹೈಕೋರ್ಟ್‌ ಜಾಮೀನು ಅರ್ಜಿಯನ್ನು ಕಾಯ್ದಿರಿಸಿದ ಕೆಲವು ದಿನಗಳ ನಂತರದಲ್ಲಿ ಸಚಿವರು ರಾಜೀನಾಮೆ ನೀಡಿದ್ದಾರೆ. ಪರಿಹಾರ ಅರ್ಜಿಯು ನಿರರ್ಥಕವೆಂದು ಇತ್ತೀಚಿನ ವಾದಗಳಲ್ಲಿ ಸಾಬೀತಾಗಿತ್ತು.

ಈ ಹಿಂದಿನ ವಿಚಾರಣೆಯಲ್ಲಿ ಮದ್ರಾಸ್ ಹೈಕೋರ್ಟ್, 230ಕ್ಕೂ ಹೆಚ್ಚು ದಿನ ಜೈಲಿನಲ್ಲಿರುವ ಸೆಂಥಿಲ್ ಬಾಲಾಜಿ ಅವರು ಸಚಿವರಾಗಿ ಹೇಗೆ ಮುಂದುವರೆಯುತ್ತಾರೆ ಎಂಬುದನ್ನು ಪ್ರಶ್ನಿಸಿತ್ತು. ಕೋರ್ಟ್ ಸಚಿವ ಸ್ಥಾನದ ಮುಂದುವರಿಕೆಯನ್ನು ಸರಿಯಾದ ಕ್ರಮವಲ್ಲ ಎಂದು ಅಭಿಪ್ರಾಯಪಟ್ಟಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತು ತಪ್ಪಿದ ಮೋದಿ; ಮತ್ತೆ ಎದ್ದು ನಿಂತ ಅನ್ನದಾತರು

ಜಯಲಲಿತಾ ಮುಖ್ಯಮಂತ್ರಿಯಾಗಿದ್ದ 2011 ರಿಂದ 2015ರ ಅವಧಿಯಲ್ಲಿ ಸಾರಿಗೆ ಸಚಿವರಾಗಿದ್ದ ಸೆಂಧಿಲ್ ಬಾಲಾಜಿ ಉದ್ಯೋಗಕ್ಕಾಗಿ ಹಣ ಹಗರಣದ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿದ್ದಾರೆ.

ಸೆಂಥಿಲ್ ಬಾಲಾಜಿ ಬಂಧನದ ಕ್ರಮವನ್ನು ಎತ್ತಿ ಹಿಡಿದಿದ್ದ ಮದ್ರಾಸ್ ಹೈಕೋರ್ಟ್ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಜಾರಿ ನಿರ್ದಾಶನಾಲಯಕ್ಕೆ ನೋಟಿಸ್ ಜಾರಿಗೊಳಿಸಿತ್ತು. ಬಾಲಾಜಿ ಅವರು ಕಳೆದ ವರ್ಷ ಜೂನ್ 14ರಂದು ಬಂಧನವಾದ ನಂತರ ರಾಜ್ಯಪಾಲ ಆರ್‌ಎನ್‌ ರವಿ ಸಂಪುಟದಿಂದ ವಜಾ ಮಾಡಿದ್ದರು. ಕೆಲವು ದಿನಗಳ ನಂತರ ತಮ್ಮ ನಿರ್ಧಾರವನ್ನು ವಾಪಸ್‌ ತೆಗೆದುಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...