ರಾಜಸ್ಥಾನ | ಅನುಕಂಪದ ಸರ್ಕಾರಿ ನೌಕರಿಗಾಗಿ ತಾಯಿಯನ್ನೇ ಕೊಲ್ಲಿಸಿದ ಪುತ್ರಿ

Date:

ರಾಜಸ್ಥಾನದ ಜೈಪುರದಲ್ಲಿ ಇತ್ತೀಚೆಗೆ ನಡೆದಿದ್ದ ರಸ್ತೆ ಅಪಘಾತವೊಂದು ವಾಸ್ತವದಲ್ಲಿ ಪೂರ್ವಯೋಜಿತ ಕೊಲೆ ಎಂಬುದು ಪೊಲೀಸ್ ತನಿಖೆಯಿಂದ ಬಯಲಾಗಿದೆ. ಅನುಕಂಪದ ಆಧಾರದ ಮೇಲಿನ ಸರ್ಕಾರಿ ಉದ್ಯೋಗ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯ ಆಸೆಗಾಗಿ ಮಗಳೇ ಸುಪಾರಿ ಹಂತಕರಿಗೆ ಹಣ ನೀಡಿ, ಹೆತ್ತ ತಾಯಿಯನ್ನು ಕಾರು ಹತ್ತಿಸಿ ಕೊಲೆ ಮಾಡಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

- Advertisement -

ಮೃತ ಮಹಿಳೆಯನ್ನು ನೀರಜ್ ಶರ್ಮಾ ಎಂದು ಗುರುತಿಸಲಾಗಿದೆ. ಇವರು ತಮ್ಮ ಮಗಳು ಆಯುಷಿ ಶರ್ಮಾ (24) ಹಾಗೂ 16 ವರ್ಷದ ಬುದ್ಧಿಮಾಂದ್ಯ ಮಗನೊಂದಿಗೆ ಜೈಪುರದ ಏರ್‌ಪೋರ್ಟ್ ಕಾಲೋನಿಯಲ್ಲಿ ವಾಸವಿದ್ದರು. ನೀರಜ್ ಅವರ ಪತಿ ವಿಜಯ್ ಶರ್ಮಾ ಜೈಪುರ ನ್ಯಾಯಾಲಯದಲ್ಲಿ ಎಲ್‌ಡಿಸಿ ಆಗಿ ಕೆಲಸ ಮಾಡುತ್ತಿದ್ದರು. ಒಂದು ವರ್ಷದ ಹಿಂದೆ ವಿಜಯ್ ಶರ್ಮಾ ಮೃತಪಟ್ಟ ಬಳಿಕ, ಆ ನೌಕರಿಯನ್ನು ಅನುಕಂಪದ ಆಧಾರದ ಮೇಲೆ ನೀರಜ್ ಶರ್ಮಾ ಅವರಿಗೆ ನೀಡಲಾಗಿತ್ತು. ಆದರೆ, ಎಲ್‌ಎಲ್‌ಬಿ ವ್ಯಾಸಂಗ ಮಾಡುತ್ತಿದ್ದ ಪುತ್ರಿ ಆಯುಷಿಗೆ ಆ ನೌಕರಿ ತನಗೆ ಬೇಕೆಂಬ ಹಂಬಲವಿತ್ತು. ತಾಯಿ ಆ ಕೆಲಸವನ್ನು ಒಪ್ಪಿಕೊಂಡಿದ್ದು ಇಬ್ಬರ ನಡುವಿನ ವೈಷಮ್ಯಕ್ಕೆ ಕಾರಣವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ತಾಯಿಯನ್ನು ಹತ್ಯೆಗೈದು ಆಸ್ತಿ ಹಾಗೂ ಸರ್ಕಾರಿ ನೌಕರಿಯನ್ನು ತನ್ನದಾಗಿಸಿಕೊಳ್ಳಲು ಆಯುಷಿ ಸಂಚು ರೂಪಿಸಿದ್ದಳು. ಇದಕ್ಕಾಗಿ ಆಕೆ ತನ್ನ ಚಿಕ್ಕಪ್ಪನ ಮಗ ಬಲರಾಮ್ ಮತ್ತು ಆತನ ತಂದೆ ಮೋಹನ್ ಶರ್ಮಾ ಅವರೊಂದಿಗೆ ಸೇರಿ ಯೋಜನೆ ಸಿದ್ಧಪಡಿಸಿದ್ದಳು. ಈ ಕೃತ್ಯಕ್ಕೆ ಸಹಾಯ ಮಾಡಿದರೆ ಆಗ್ರಾ ರಸ್ತೆಯಲ್ಲಿರುವ 5 ಕೋಟಿ ರೂ. ಬೆಲೆಬಾಳುವ ಜಮೀನು ಮತ್ತು ಭರತ್‌ಪುರದಲ್ಲಿರುವ ಸುಮಾರು 5 ಕೋಟಿ ರೂ. ಮೌಲ್ಯದ ಜಮೀನನ್ನು ನೀಡುವುದಾಗಿ ಆಕೆ ಬಲರಾಮ್‌ಗೆ ಆಮಿಷ ಒಡ್ಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ತಾಯಿಯನ್ನು ವಾಹನ ಹತ್ತಿಸಿ ರಸ್ತೆ ಅಪಘಾತದಂತೆ ಬಿಂಬಿಸಲು ಆರೋಪಿಗಳು ನಿರ್ಧರಿಸಿದ್ದರು. ಹತ್ಯೆಗೂ ಒಂದು ತಿಂಗಳ ಮೊದಲು, ಹೇಮಂತ್ ಶರ್ಮಾ ಎಂಬಾತನ ಮೂಲಕ ‘ಥಾರ್’ ಎಸ್‌ಯುವಿ ವಾಹನವನ್ನು ನೀರಜ್ ಅವರ ಮೇಲೆ ಹತ್ತಿಸಲು ಯತ್ನಿಸಲಾಗಿತ್ತು. ಈ ವೇಳೆ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಇದರಿಂದ ಎಚ್ಚೆತ್ತುಕೊಂಡ ನೀರಜ್, ಮನೆಯಿಂದ ಆಚೆ ಹೋಗುವುದನ್ನು ಕಡಿಮೆ ಮಾಡಿದ್ದರಲ್ಲದೆ, ತಮ್ಮ ಮನೆಯ ಸುತ್ತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಕೊಂಡಿದ್ದರು.

ಮೊದಲ ಯತ್ನ ವಿಫಲವಾದ ಬಳಿಕ, ಹೇಮಂತ್‌ ಶರ್ಮಾನಿಗೆ 7 ಲಕ್ಷ ರೂ.ಗಳ ಸುಪಾರಿ ನೀಡಲಾಗಿತ್ತು. ಆತ 35,000 ರೂ. ಕೊಟ್ಟು ಹರಿಯಾಣ ನೋಂದಣಿಯ ಸ್ಕಾರ್ಪಿಯೋ ಕಾರನ್ನು ಬಾಡಿಗೆಗೆ ಪಡೆದು, ಆಕಾಶ್ ಮತ್ತು ಅರವಿಂದ್ ಎಂಬುವವರಿಗೆ ಕೃತ್ಯ ಎಸಗುವ ಜವಾಬ್ದಾರಿ ವಹಿಸಿದ್ದನು. ಜುಲೈ 4 ರಂದು, ನೀರಜ್ ಅವರು ತಮ್ಮ ಬುದ್ಧಿಮಾಂದ್ಯ ಮಗನ ಫಿಸಿಯೋಥೆರಪಿ ಚಿಕಿತ್ಸೆ ಮುಗಿಸಿ ಮನೆಗೆ ಮರಳುತ್ತಿದ್ದಾಗ, ಆಯುಷಿ ಕರೆ ಮಾಡಿ ತುರ್ತು ಕೆಲಸವಿದೆ ಎಂದು ಬೇಗನೆ ಮನೆಗೆ ಬರುವಂತೆ ತಾಯಿಗೆ ತಿಳಿಸಿದ್ದಳು.

ಅವರು 60 ಅಡಿ ಅಗಲದ ರಸ್ತೆಯ ತೀರಾ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದಾಗ, 100 ಕಿ.ಮೀ.ಗೂ ಅಧಿಕ ವೇಗದಲ್ಲಿ ಬಂದ ಸ್ಕಾರ್ಪಿಯೋ ಕಾರು ಉದ್ದೇಶಪೂರ್ವಕವಾಗಿ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸುಮಾರು 100 ಮೀಟರ್ ದೂರಕ್ಕೆ ಎಸೆಯಲ್ಪಟ್ಟ ನೀರಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಾವು ರಸ್ತೆ ಅಪಘಾತದಿಂದ ಸಂಭವಿಸಿದೆ ಎಂದು ನಂಬಿಸಲು ಆಯುಷಿ ಯತ್ನಿಸಿದ್ದಳು. ಆದರೆ, ಆಕೆಯ ವರ್ತನೆಯ ಬಗ್ಗೆ ಮೊದಲೇ ಅನುಮಾನಗೊಂಡಿದ್ದ ನೀರಜ್ ಅವರ ಸಹೋದರ, ಅಪಘಾತದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಪೊಲೀಸರಿಗೆ ಮನವಿ ಮಾಡಿದ್ದರು. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ವಾಹನ ಸಂಚಾರವಿಲ್ಲದ ಖಾಲಿ ರಸ್ತೆಯ ಬದಿಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಗೆ ಉದ್ದೇಶಪೂರ್ವಕವಾಗಿ ಕಾರು ಡಿಕ್ಕಿ ಹೊಡೆಸಿರುವುದು ಸ್ಪಷ್ಟವಾಗಿದೆ. ಕಾರು ಬಾಡಿಗೆಗೆ ಪಡೆದಿದ್ದ ಹೇಮಂತ್ ಶರ್ಮಾನನ್ನು ವಿಚಾರಣೆಗೊಳಪಡಿಸಿದಾಗ ಆತ ಮೋಹನ್ ಶರ್ಮಾ ಹೆಸರು ಬಾಯ್ಬಿಟ್ಟಿದ್ದಾನೆ. ಈ ಆಧಾರದ ಮೇಲೆ ಆಯುಷಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆಯ ಸಂಪೂರ್ಣ ರಹಸ್ಯ ಬಯಲಾಗಿದೆ.

ತಾನು ಎಸಗಿದ ಕೃತ್ಯದ ಬಗ್ಗೆ ಆಯುಷಿ ವಿಚಾರಣೆ ವೇಳೆ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಮತ್ತೋರ್ವ ಪ್ರಮುಖ ಆರೋಪಿ ಬಲರಾಮ್ ಸದ್ಯ ತಲೆಮರೆಸಿಕೊಂಡಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...