ದ್ವಿಶತಕ | 60 ವರ್ಷಗಳ ದಾಖಲೆ ಮುರಿದು ಹೊಸ ದಾಖಲೆ ಬರೆದ ಜೈಸ್ವಾಲ್

Date:

ಇಂಗ್ಲೆಂಡ್‌ ಕ್ರಿಕೆಟ್‌ ತಂಡದ ವಿರುದ್ಧ ನಡೆಯುತ್ತಿರುವ ದ್ವಿತೀಯ ಟೆಸ್ಟ್‌ ಅಬ್ಬರ ಬ್ಯಾಟಿಂಗ್‌ ಮಾಡಿರುವ ಭಾರತ ತಂಡದ ಯಶಸ್ವಿ ಜೈಸ್ವಾಲ್ 60 ವರ್ಷಗಳ ದಾಖಲೆ ಮುರಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅತೀ ಹೆಚ್ಚು ರನ್‌ಗಳಿಸಿದ ಭಾರತೀಯ ಬ್ಯಾಟರ್‌ ಎಂಬ ಹೆಗ್ಗಳಿಕೆ ಪಡೆದಿದ್ದು, ತಮ್ಮ ಹೆಸರಿನಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ವಿಶಾಖ ಪಟ್ಟಣದ ಡಾ. ವೈ ಎಸ್‌ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಮತ್ತು ಭಾರತ ತಂಡಗಳ ನಡುವೆ ದ್ವಿತೀಯ ಟೆಸ್ಟ್‌ ಪಂದ್ಯ ನಡೆಯುತ್ತಿದೆ. ಪಂದ್ಯದಲ್ಲಿ ಆರಂಭಿಕ ಆಟಗಾರನಾಗಿ ಸ್ಕ್ರೀಜ್‌ಗೆ ಇಳಿದ ಜೈಸ್ವಾಲ್‌, ಶತಕ ಸಿಡಿಸಿದ್ದಾರೆ. ಮೊದಲ ದಿನದಾಟದ ಮುಕ್ತಾಯದ ವೇಳೆಗೆ ಅಜೇಯರಾಗಿ 179 ರನ್‌ ಗಳಿಸಿ, ಹೊಸ ದಾಖಲೆ ಬರೆದಿದ್ದಾರೆ.

ಈ ಹಿಂದೆ, 1964ರಲ್ಲಿ ಇದೇ ಇಂಗ್ಲೆಂಡ್‌ ತಂಡ ವಿರುದ್ಧ ಚೆನ್ನೈನಲ್ಲಿ ನಡೆದಿದ್ದ ಟೆಸ್ಟ್‌ ಪಂದ್ಯದಲ್ಲಿ ಮೊದಲ ದಿನದಾಟದಲ್ಲಿ ಬುಧಿ ಅವರು 170 ರನ್‌ ಗಳಿಸಿ, ದಾಖಲೆ ಬರೆದಿದ್ದರು. ಇದೀಗ, ಆ ದಾಖಲೆಯನ್ನು ಜೈಸ್ವಾಲ್ ಮುರಿದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶುಕ್ರವಾರ ನಡೆದ ಪಂದ್ಯದಲ್ಲಿ 151 ಎಸೆತಗಳಿಗೆ ಜೈಸ್ವಾಲ್‌ ಶತಕ ಬಾರಿಸಿದ್ದರು. ಬಳಿಕ, ಮೊದಲ ದಿನದಾಟ ಮುಗಿಯುವ ಹೊತ್ತಿಗೆ 257 ಎಸತಗಳನ್ನು ಎದುರಿಸಿ, 5 ಸಿಕ್ಸ್‌ ಹಾಗೂ 17 ಫೋರ್‌ಗಳೊಂದಿಗೆ 179 ರನ್‌ ಗಳಿಸಿ, ಹೊಸ ದಾಖಲೆ ಬರೆದಿದ್ದರು. ಎರಡನೇ ದಿನವೂ ಆಟ ಮುಂದುವರೆಸಿದ ಜೈಸ್ವಾಲ್ 209 ರನ್‌ಗಳಿಸಿ ಔಟಾಗಿದ್ದಾರೆ.

ದ್ವಿತೀಯ ಟೆಸ್ಟ್‌ನಲ್ಲಿ ಭಾರತ ತಂಡ 396 ರನ್‌ಗಳಿಗೆ ಆಲ್‌ಔಟ್ ಆಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿಎಂಸಿಗೆ ಈಗಲೂ ಮೈತ್ರಿ ಬಾಗಿಲು ತೆರೆದಿದೆ: ಕಾಂಗ್ರೆಸ್ ಮುಖಂಡ

ಇಂಡಿಯಾ ಒಕ್ಕೂಟಕ್ಕೆ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿಲ್ಲ. ಪಶ್ಚಿಮ ಬಂಗಾಳದಲ್ಲಿ ಎಲ್ಲ 42...

ರೈತ ಹೋರಾಟ | ಸರ್ಕಾರದ ದಮನಕ್ಕೆ ಬಗ್ಗದ ‘ದೆಹಲಿ ಚಲೋ’; ಈವರೆಗೆ 6 ರೈತರು ಸಾವು

ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಮತ್ತು ರೈತ ಸಾಲ ಮನ್ನಾಕ್ಕಾಗಿ ಆಗ್ರಹಿಸಿದ...

ಪ್ರಜಾಪ್ರಭುತ್ವ, ಸತ್ಯ ಉಳಿಸುವಲ್ಲಿ ಮಾಧ್ಯಮ ವಿಫಲವಾದ್ರೆ ಮುಂದೇನು?

ದೇಶದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ...

ಲೋಕಸಭೆ ಚುನಾವಣೆಗೆ 195 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಲೋಕಸಭೆ ಚುನಾವಣೆಗೆ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ....