ಜಮ್ಮು ಮತ್ತು ಕಾಶ್ಮೀರ | ಕಮರಿಗೆ ಉರುಳಿದ ಸೇನಾ ವಾಹನ; 10 ಸೈನಿಕರು ಸಾವು

Date:

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಸೇನಾ ವಾಹನವು ರಸ್ತೆಯಿಂದ ಜಾರಿ 200 ಅಡಿ ಆಳದ ಕಮರಿಗೆ ಬಿದ್ದಿದೆ. ಪರಿಣಾಮ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ.

- Advertisement -

ಒಟ್ಟು 17 ಸಿಬ್ಬಂದಿಯನ್ನು ಹೊತ್ತು ಸೇನಾ ವಾಹನವು ಎತ್ತರದ ಪೋಸ್ಟ್ ಕಡೆಗೆ ಭದೇರ್ವಾ-ಚಂಬಾ ರಸ್ತೆಯ ಖನ್ನಿ ಟಾಪ್‌ನಲ್ಲಿ ತೆರಳುತ್ತಿತ್ತು. ಈ ವೇಳೆ, ವಾಹನವು ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಘಟನಾ ಸ್ಥಳಕ್ಕೆ ಸೇನೆ, ಪೊಲೀಸರು ಹಾಗೂ ಸ್ಥಳೀಯ ನಿವಾಸಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. 7 ಮಂದಿ ಗಾಯಗೊಂಡಿದ್ದ ಸೈನಿಕರನ್ನು ರಕ್ಷಿಸಿ ಮಿಲಿಟರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ರಕ್ಷಣಾ ಕಾರ್ಯಚರಣೆ ಆರಂಭವಾಗುವ ವೇಳೆಗೆ 10 ಮಂದಿ ಸೈನಿಕರು ಸಾವನ್ನಪ್ಪಿದ್ದರು ಎಂದು ಹೇಳಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮಗಳು ಶಾಂತಿ ಮತ್ತು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲು ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ, ಸೈನಿಕರನ್ನು ನಾನಾ ಭಾಗಗಳಿಗೆ ನಿಯೋಜಿಸಲಾಗುತ್ತಿದೆ. ನಿಯೋಜನೆಗೊಂಡ ಸೈನಿಕರ ತಂಡವೊಂದು ವಾಹನದಲ್ಲಿ ತೆರಳುವಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...