ಜಮ್ಮು-ಕಾಶ್ಮೀರ | ಕಂದಕಕ್ಕೆ ಉರುಳಿದ ಬಸ್‌; 36 ಮಂದಿ ದುರ್ಮರಣ

Date:

ಬಸ್‌ವೊಂದು ಕಂದಕಕ್ಕೆ ಉರುಳಿಬಿದ್ದಿದ್ದು 36 ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದೆ.

- Advertisement -

ಬುಧವಾರ ಬೆಳಗ್ಗೆ ದೋಡಾ ಜಿಲ್ಲೆಯ ಅಸ್ಸಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 55 ಮಂದಿ ಪ್ರಯಾಣಿಸುತ್ತಿದ್ದ ಬಸ್ಸು ಕಂದಕಕ್ಕೆ ಉರುಳಿದೆ. ಅಪಘಾತದಲ್ಲಿ 36 ಮಂದಿ ಮೃತಪಟ್ಟಿದ್ದು, 19 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಆರು ಜನರ ಸ್ಥಿತಿ ಗಂಭೀರವಾಗಿದೆ ಎಂದು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಸ್ಥಳೀಯರು, ಪೊಲೀಸರು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ದೋಡಾ ಮತ್ತು ಕಿಶ್ತ್ವಾರ್‌ನಲ್ಲಿರುವ ಸರ್ಕಾರಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತಿದೆ, ಗಾಯಾಳುಗಳನ್ನು ವಿಮಾನದ ಮೂಲಕ ಸಾಗಿಸಲು ಹೆಲಿಕಾಪ್ಟರ್ ಸೇವೆಯನ್ನು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ಬಸ್‌ ಕಿಶ್ತ್‌ವಾರ್‌ನಿಂದ ಜಮ್ಮುವಿಗೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣತಪ್ಪಿ, ದೋಡಾ ಅಸ್ಸಾರ್ ಪ್ರದೇಶದ ಟ್ರುಂಗಲ್ ಬಳಿ 300 ಮೀಟರ್‌ಗಳಷ್ಟು ಆಳದ ಕಂದಕಕ್ಕೆ ಉರುಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ | ಮತದಾರರ ಪಟ್ಟಿಯಲ್ಲಿ ಭಾರೀ ಅಕ್ರಮ ಆರೋಪ; 16 ಸಾವಿರಕ್ಕೂ ಹೆಚ್ಚು ಹೆಸರುಗಳ ಪರಿಶೀಲನೆಗೆ EC ಆದೇಶ

ಉತ್ತರ ಪ್ರದೇಶದ ಪಿಲಿಭಿತ್ ಸದರ್ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ...

ಅಭಿವೃದ್ಧಿ ಹೆಸರಲ್ಲಿ 23 ಲಕ್ಷ ಮರಗಳಿಗೆ ಕುತ್ತು; ಅರುಣಾಚಲದ ಜಲವಿದ್ಯುತ್‌ ಯೋಜನೆ ಅನುಮತಿ ಕೋರಿದ NHPC

ಅರುಣಾಚಲ ಪ್ರದೇಶದಲ್ಲಿ 1,720 ಮೆಗಾವ್ಯಾಟ್ ಸಾಮರ್ಥ್ಯದ ಕಮಲಾ ಜಲವಿದ್ಯುತ್ ಯೋಜನೆ ಅನುಷ್ಠಾನಗೊಳಿಸಲು...

ಸೋನಿಯಾ ಗಾಂಧಿ ಇನ್‌ಸ್ಟಾಗ್ರಾಮ್‌ಗೆ ಪದಾರ್ಪಣೆ: ‘ಬಿಲಾಂಗಿಂಗ್’ ಆತ್ಮಕಥೆಯ ಮೊದಲ ನೋಟ ಬಿಡುಗಡೆ

ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಾಮಾಜಿಕ ಜಾಲತಾಣ...

ಎಪ್‌ಸ್ಟೀನ್ ಫೋಟೊ ಬಾಂಬ್‌! ಮೋದಿ-ಪುರಿ ವಿರುದ್ಧ ವಿಪಕ್ಷಗಳ ವಾಗ್ದಾಳಿ

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಅಮೆರಿಕದ ಕುಖ್ಯಾತ ಅಪರಾಧಿ ಜೆಫ್ರಿ ಎಪ್‌ಸ್ಟೀನ್...