ಜಮ್ಮು ಕಾಶ್ಮೀರ ಮೇಘಸ್ಫೋಟ: ಮೃತರ ಸಂಖ್ಯೆ 66ಕ್ಕೆ ಏರಿಕೆ; ಇನ್ನೂ 75 ಮಂದಿ ನಾಪತ್ತೆ

Date:

ಜಮ್ಮು ಕಾಶ್ಮೀರ ಮೇಘಸ್ಫೋಟ ಪ್ರಕರಣದಲ್ಲಿ ಮೃತರ ಸಂಖ್ಯೆ ಏರಿಕೆಯಾಗಿದ್ದು 66ಕ್ಕೆ ತಲುಪಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಆರನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಇನ್ನೂ 75 ಮಂದಿ ನಾಪತ್ತೆಯಾಗಿದ್ದಾರೆ. ಇಂದು ಮಹಿಳೆಯ ಕೊಳೆತ ಶವಗಳು ಪತ್ತೆಯಾಗಿವೆ ಎನ್ನಲಾಗಿದೆ.

- Advertisement -

ಕುಸಿದ ಮನೆಯ ಅವಶೇಷಗಳ ಅಡಿಯಲ್ಲಿ ಮತ್ತೊಂದು ದೇಹದ ಭಾಗವನ್ನು ಸ್ನಿಫರ್ ನಾಯಿಗಳು ಪತ್ತೆ ಹಚ್ಚಿದೆ. ಆದರೆ ದುರಂತದ ಮೊದಲ ದಿನದಂದು ಪತ್ತೆಯಾದ ಶವದ ಭಾಗ ಇದಾಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರದವರೆಗೆ 167 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ 75 ಮಂದಿ ನಾಪತ್ತೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ | ಮತ್ತೆ ಮೇಘಸ್ಫೋಟ: ನಾಲ್ವರ ಸಾವು, ಆರು ಮಂದಿಗೆ ಗಾಯ

ಆಗಸ್ಟ್ 14ರಂದು ಹಿಮಾಲಯದ ಮಾತಾ ಚಂಡಿ ದೇಗುಲಕ್ಕೆ ಹೋಗುವ ಮಚೈಲ್ ಮಾತಾ ಯಾತ್ರಾ ಮಾರ್ಗದಲ್ಲಿ ಮೇಘಸ್ಫೋಟದಿಂದಾಗಿ ಹಠಾತ್ ಪ್ರವಾಹ ಉಂಟಾಗಿ ನೂರಾರು ಜನರು ನಾಪತ್ತೆಯಾಗಿದ್ದಾರೆ, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ. ರಕ್ಷಣಾ, ಶೋಧ ಕಾರ್ಯಾಚರಣೆ ಮುಂದುವರೆದಿದೆ. ಮೃತರಲ್ಲಿ ಮೂವರು ಸಿಐಎಸ್‌ಎಫ್ ಸಿಬ್ಬಂದಿ ಮತ್ತು ಜಮ್ಮು-ಕಾಶ್ಮೀರ ಪೊಲೀಸರ ಒಬ್ಬರು ವಿಶೇಷ ಪೊಲೀಸ್ ಅಧಿಕಾರಿ (ಎಸ್‌ಪಿಒ) ಸೇರಿದ್ದಾರೆ.

“ಇಂದು ಬೆಳಿಗ್ಗೆ ಮತ್ತೊಂದು ಮೃತದೇಹ ಪತ್ತೆಯಾಗಿದ್ದು ರಕ್ಷಣಾ ಕಾರ್ಯಾಚರಣೆ ಪುನರಾರಂಭವಾಗಿದೆ. ಮೇಘಸ್ಫೋಟದ ಪರಿಣಾಮ ಪ್ರದೇಶವು ಅಸ್ತವ್ಯಸ್ತವಾಗಿದೆ. ಇದರಿಂದಾಗಿ ರಕ್ಷಣಾ ಕಾರ್ಯ ಸಮಯ ತೆಗೆದುಕೊಳ್ಳುತ್ತಿದೆ. ನಾವು ಕೆಳ ಭಾಗಕ್ಕೆ ತಂಡವನ್ನು ಕಳುಹಿಸುತ್ತಿದ್ದೇವೆ” ಎಂದು ಎಸ್‌ಡಿಆರ್‌ಎಫ್ ಉಪ ಪೊಲೀಸ್ ವರಿಷ್ಠಾಧಿಕಾರಿ ಮಸೂಫ್ ಅಹ್ಮದ್ ಮಿರ್ಜಾ ಹೇಳಿದ್ದಾರೆ.

ಇನ್ನು ಈ ಬಗ್ಗೆ ಸೋಮವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸೇನೆಯ ಜಮ್ಮು ಮೂಲದ ವೈಟ್ ನೈಟ್ ಕಾರ್ಪ್ಸ್, “ಐದು ತಂಡಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ತೊಡಗಿವೆ. ಹೆಚ್ಚುವರಿ ವೈದ್ಯಕೀಯ ತಂಡಗಳನ್ನು ನಿಯೋಜಿಸಿ ಕಾರ್ಯಾಚರಣೆ ವೇಗಗೊಳಿಸಲಾಗುವುದು” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...

ವರ್ಷಗಳಿಂದ ನೀರಿಲ್ಲದೆ ಸೊರಗಿದ ಗ್ರಾಮ; ಹತಾಶೆಯಿಂದ ಊರನ್ನೇ ಬಿಕರಿಗಿಟ್ಟ ನಿವಾಸಿಗಳು

ಒಂದೆಡೆ ನೀರಾವರಿ ಯೋಜನೆ, ಇನ್ನೊಂದೆಡೆ ನೀರಿಗಾಗಿ ಪರದಾಡುವ ರೈತರು. ಯೋಜನೆ ಆರಂಭವಾಗಿ...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...