ಕದನ ವಿರಾಮ | ಜಮ್ಮು ಕಾಶ್ಮೀರದಲ್ಲಿ ಕಳೆದ ರಾತ್ರಿ ಶಾಂತಿ ನೆಲೆಸಿತ್ತು, ಯಾವುದೇ ದಾಳಿ ನಡೆದಿಲ್ಲ: ಭಾರತೀಯ ಸೇನೆ

Date:

ಜಮ್ಮು ಕಾಶ್ಮೀರದಲ್ಲಿ ಕಳೆದ ರಾತ್ರಿ ಶಾಂತಿ ನೆಲೆಸಿತ್ತು. ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ಮಿಲಿಟರಿಗಳ ನಡುವೆ ಯಾವುದೇ ದಾಳಿ, ಪ್ರತಿದಾಳಿ ನಡೆದಿಲ್ಲ ಎಂದು ಭಾರತೀಯ ಸೇನೆ ಸೋಮವಾರ ಬೆಳಿಗ್ಗೆ ತಿಳಿಸಿದೆ.

- Advertisement -

ಸುಮಾರು 26 ಭಾರತೀಯರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಹೆಸರಲ್ಲಿ ಭಾರತೀಯ ಸೇನೆ ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಭಾರತ- ಪಾಕ್ ಸಂಘರ್ಷ ಉಲ್ಬಣ: ಶಮನಕ್ಕೆ ಅಮೆರಿಕ ಪ್ರಯತ್ನ

ಇದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿಕೊಂಡಿತ್ತು. ಆದರೆ ಪಾಕಿಸ್ತಾನ ಈ ಕದನ ವಿರಾಮವನ್ನು ಕೆಲವೇ ಗಂಟೆಗಳಲ್ಲಿ ಉಲ್ಲಂಘಿಸಿತ್ತು. ಈ ದಾಳಿಗೆ ಪ್ರತಿದಾಳಿ ನಡೆಸುವುದಾಗಿ ಭಾರತ ಎಚ್ಚರಿಕೆ ನೀಡಿದೆ. ಅದಾದ ಬಳಿಕ ದಾಳಿ ನಿಂತಿದೆ. ಭಾನುವಾರ ಕದನ ವಿರಾಮ ಉಲ್ಲಂಘನೆಯ ಯಾವುದೇ ಘಟನೆಗಳು ವರದಿಯಾಗಿಲ್ಲ.

ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಒಪ್ಪಂದಕ್ಕೆ ಬಂದ ಎರಡು ದಿನಗಳ ನಂತರ ಜಮ್ಮು ಕಾಶ್ಮೀರ ಮತ್ತು ಅಂತಾರಾರಾಷ್ಟ್ರೀಯ ಗಡಿಯಾದ್ಯಂತ ರಾತ್ರಿ ಬಹುತೇಕ ಶಾಂತಿ ನೆಲೆಸಿತ್ತು. ಇತ್ತೀಚಿನ ದಿನಗಳಲ್ಲಿ ಮೊದಲ ಶಾಂತಿಯುತ ರಾತ್ರಿ ಇದಾಗಿದೆ ಎಂದು ಸೇನೆಯು ಸಂಕ್ಷಿಪ್ತ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನು ಮೇ 7ರಂದು ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರದಲ್ಲಿ 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಇದರಲ್ಲಿ ಐವರು ಮೋಸ್ಟ್ ವಾಂಟೆಂಡ್ ಭಯೋತ್ಪಾದಕರೂ ಸೇರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...