ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ: ಮೊದಲ ಹಂತದ 24 ಕ್ಷೇತ್ರಗಳಲ್ಲಿ ಮತದಾನ ಆರಂಭ

Date:

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಇಂದು ಬೆಳಗ್ಗೆ 7 ಗಂಟೆಯಿಂದ ಮೊದಲ ಹಂತದಲ್ಲಿ 24 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಮೊದಲ ಹಂತದಲ್ಲಿ 64 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು 7.14 ಲಕ್ಷಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

- Advertisement -

ಭಾರೀ ಭದ್ರತೆಯ ನಡುವೆ ಚಿನಾಬ್ ಕಣಿವೆ ಜಿಲ್ಲೆಗಳಾದ ದೋಡಾ, ಕಿಸ್ತ್ವಾರ, ರಾಂಬನ್, ಅನಂತನಾಗ್, ಪುಲ್ವಾಮಾ, ಕುಲ್ಗಾಮ್ ಮತ್ತು ಶೋಪಿಯಾನ್ ಕ್ಷೇತ್ರಗಳಲ್ಲಿ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಒಂದು ದಶಕದ ಅವಧಿಯಲ್ಲಿ ಇಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವುದು ಇದೇ ಮೊದಲು. ಕಣಿವೆ ರಾಜ್ಯಕ್ಕೆ ಸಂವಿಧಾನದ 370ನೆಯ ವಿಧಿಯ ಅಡಿಯಲ್ಲಿ ನೀಡಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರವು 2019ರ ಆಗಸ್ಟ್‌ನಲ್ಲಿ ಹಿಂಪಡೆದು, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರದಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಪ್ರಧಾನಿಯಾಗಿ ನೂರು ದಿನ: ಹಿನ್ನಡೆಯೋ, ಮುನ್ನಡೆಯೋ?

ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನಮಾನ ಕೊಡಿಸುವುದಾಗಿ ಭರವಸೆ ನೀಡಿರುವ ಕಾಂಗ್ರೆಸ್ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿದ್ದು, ಮುಂದೆ ಇಲ್ಲಿ ಸರ್ಕಾರ ರಚಿಸಲು ಈ ಮೈತ್ರಿಕೂಟವು ಪ್ರಬಲ ಪೈಪೋಟಿ ನೀಡುತ್ತಿದೆ.

ಜಮ್ಮು ಪ್ರದೇಶದಲ್ಲಿ ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳಲು ಬಿಜೆಪಿ ಉದ್ದೇಶಿಸಿದೆ. 2014ರಲ್ಲಿ ನಡೆದ ವಿಧಾನಸಭಾ
ಚುನಾವಣೆಯಲ್ಲಿ ಬಿಜೆಪಿಯು ಈ ಭಾಗದ 37 ಸ್ಥಾನಗಳ ಪೈಕಿ 25 ಸ್ಥಾನಗಳಲ್ಲಿ ಗೆದ್ದಿತ್ತು. ಬಹುಮತ ಪಡೆಯಲು
ಬಿಜೆಪಿಯು ಸಣ್ಣ ಪಕ್ಷಗಳಾದ ಪೀಪಲ್ಸ್ ಕಾನ್ಫರೆನ್ಸ್, ಅಪ್ನಿ ಪಾರ್ಟಿಯನ್ನು ನೆಚ್ಚಿಕೊಳ್ಳಬೇಕಾಗಬಹುದು. ಎರಡನೆಯ ಹಾಗೂ ಮೂರನೆಯ ಹಂತದ ಮತದಾನವು ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ನಡೆಯಲಿದೆ. ಅಕ್ಟೋಬರ್ 8ಕ್ಕೆ ಮತ ಎಣಿಕೆಯಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...