ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆಸಿದ ಶಂಕಿತ ಮೂವರು ಪಾಕಿಸ್ತಾನ ಉಗ್ರರ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಈ ಭಯೋತ್ಪಾದಕರ ಬಗ್ಗೆ ಸುಳಿವು ನೀಡಿದರೆ 20 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿಯೂ ಭದ್ರತಾ ಸಂಸ್ಥೆಗಳು ಘೋಷಿಸಿವೆ.
ಏಪ್ರಿಲ್ 22ರಂದು ಪಾಕಿಸ್ತಾನದ ಉಗ್ರ ಸಂಘಟನೆಯು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದನಾ ದಾಳಿ ನಡೆಸಿ 26 ಪ್ರವಾಸಿಗರನ್ನು ಕೊಂದಿದೆ. ಈ ದಾಳಿ ನಡೆಸಿದ ಮೂವರು ಶಂಕಿತ ಪಾಕಿಸ್ತಾನಿ ಭಯೋತ್ಪಾದಕರ ಪೋಸ್ಟರ್‌ಗಳನ್ನು ಭದ್ರತಾ ಪಡೆಗಳು ಅಲ್ಲಲ್ಲಿ ಹಾಕಿವೆ. ‘ಭಯೋತ್ಪಾದನಾ ಮುಕ್ತ ಕಾಶ್ಮೀರ’ ಎಂಬ ಸಂದೇಶವನ್ನು ಹೊಂದಿರುವ ಈ ಪೋಸ್ಟರ್‌ಗಳನ್ನು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಕಾಣಿಸಿಕೊಂಡಿವೆ.
ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಕಾಶ್ಮೀರ ಬುಕಿಂಗ್ ರದ್ದು ಮಾಡಿ ಹಿಮಾಚಲಕ್ಕೆ ತಿರುಗಿದ ಪ್ರವಾಸಿಗರು
ಈ ಭಯೋತ್ಪಾದಕರ ಬಗ್ಗೆ ವಿಶ್ವಾಸಾರ್ಹ ಮಾಹಿತಿ ನೀಡುವವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್‌ನಲ್ಲಿ ಉಲ್ಲೇಖಿಸಲಾಗಿದೆ. ಹಾಗೆಯೇ ಮಾಹಿತಿದಾರರ ಗುರುತನ್ನು ಕಟ್ಟುನಿಟ್ಟಾಗಿ ಗೌಪ್ಯವಾಗಿಡಲಾಗುವುದು ಎಂದೂ ಏಜೆನ್ಸಿಗಳು ಭರವಸೆ ನೀಡಿವೆ.
ಲಷ್ಕರ್-ಎ-ತೈಬಾ (ಎಲ್‌ಇಟಿ) ಸೇರಿದ ಮೂವರು ಭಯೋತ್ಪಾದಕರ ಚಿತ್ರವನ್ನು ಸದ್ಯ ಬಿಡುಗಡೆ ಮಾಡಲಾಗಿದೆ. ಅನಂತ್‌ನಾಗ್ ನಿವಾಸಿ ಆದಿಲ್ ಹುಸೇನ್ ಥೋಕರ್ ಮತ್ತು ಇಬ್ಬರು ಪಾಕಿಸ್ತಾನಿ ಪ್ರಜೆಗಳಾದ ಅಲಿ ಭಾಯಿ ಯಾನೆ ತಲ್ಹಾ ಭಾಯಿ ಮತ್ತು ಹಾಶಿಮ್ ಮೂಸಾ ಯಾನೆ ಸುಲೇಮಾನ್ ಶಂಕಿತ ಉಗ್ರರಾಗಿದ್ದಾರೆ.
ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಮೂವರು ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ
ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಒಂದು ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಪಹಲ್ಗಾಮ್ ದಾಳಿಯ ಹೊಣೆ ಹೊತ್ತುಕೊಂಡಿದೆ. ಈಗಾಗಲೇ ಈ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಲ್ಲಿ ದಾಳಿ ನಡೆಸಿವೆ.
VIDEO | Pulwama, Jammu and Kashmir: Police release photos of three Pahalgam terror attack suspects, announce reward of Rs 20 lakh.#PahalgamTerroristAttack
— Press Trust of India (@PTI_News) May 13, 2025
(Full video available on PTI Videos – https://t.co/n147TvqRQz) pic.twitter.com/etPzPhWyRE
ಅದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಅಧಿಕೃತವಾಗಿ ಯುದ್ಧ ಆರಂಭಿಸುವುದಕ್ಕೂ ಮುನ್ನವೇ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಲಾಗಿದೆ. ಸದ್ಯ ಗಡಿಯಲ್ಲಿ ಗುಂಡಿನ ಸದ್ದು ಕಡಿಮೆಯಾಗಿದೆ. ಆದರೆ ಭಯೋತ್ಪಾದನೆ ವಿರುದ್ಧದ ಆಪರೇಷನ್ ಸಿಂಧೂರ ಮುಂದುವರೆದಿದೆ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.
