ಪಹಲ್ಗಾಮ್ ದಾಳಿ | ಮೂವರು ಶಂಕಿತ ಪಾಕ್ ಉಗ್ರರ ಚಿತ್ರ ಬಿಡುಗಡೆ; ಸುಳಿವು ನೀಡಿದರೆ 20 ಲಕ್ಷ ರೂ. ಬಹುಮಾನ

Date:

ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆಸಿದ ಶಂಕಿತ ಮೂವರು ಪಾಕಿಸ್ತಾನ ಉಗ್ರರ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಈ ಭಯೋತ್ಪಾದಕರ ಬಗ್ಗೆ ಸುಳಿವು ನೀಡಿದರೆ 20 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿಯೂ ಭದ್ರತಾ ಸಂಸ್ಥೆಗಳು ಘೋಷಿಸಿವೆ.

- Advertisement -

ಏಪ್ರಿಲ್ 22ರಂದು ಪಾಕಿಸ್ತಾನದ ಉಗ್ರ ಸಂಘಟನೆಯು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದನಾ ದಾಳಿ ನಡೆಸಿ 26 ಪ್ರವಾಸಿಗರನ್ನು ಕೊಂದಿದೆ. ಈ ದಾಳಿ ನಡೆಸಿದ ಮೂವರು ಶಂಕಿತ ಪಾಕಿಸ್ತಾನಿ ಭಯೋತ್ಪಾದಕರ ಪೋಸ್ಟರ್‌ಗಳನ್ನು ಭದ್ರತಾ ಪಡೆಗಳು ಅಲ್ಲಲ್ಲಿ ಹಾಕಿವೆ. ‘ಭಯೋತ್ಪಾದನಾ ಮುಕ್ತ ಕಾಶ್ಮೀರ’ ಎಂಬ ಸಂದೇಶವನ್ನು ಹೊಂದಿರುವ ಈ ಪೋಸ್ಟರ್‌ಗಳನ್ನು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಕಾಣಿಸಿಕೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಕಾಶ್ಮೀರ ಬುಕಿಂಗ್ ರದ್ದು ಮಾಡಿ ಹಿಮಾಚಲಕ್ಕೆ ತಿರುಗಿದ ಪ್ರವಾಸಿಗರು

ಈ ಭಯೋತ್ಪಾದಕರ ಬಗ್ಗೆ ವಿಶ್ವಾಸಾರ್ಹ ಮಾಹಿತಿ ನೀಡುವವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್‌ನಲ್ಲಿ ಉಲ್ಲೇಖಿಸಲಾಗಿದೆ. ಹಾಗೆಯೇ ಮಾಹಿತಿದಾರರ ಗುರುತನ್ನು ಕಟ್ಟುನಿಟ್ಟಾಗಿ ಗೌಪ್ಯವಾಗಿಡಲಾಗುವುದು ಎಂದೂ ಏಜೆನ್ಸಿಗಳು ಭರವಸೆ ನೀಡಿವೆ.

ಲಷ್ಕರ್-ಎ-ತೈಬಾ (ಎಲ್‌ಇಟಿ) ಸೇರಿದ ಮೂವರು ಭಯೋತ್ಪಾದಕರ ಚಿತ್ರವನ್ನು ಸದ್ಯ ಬಿಡುಗಡೆ ಮಾಡಲಾಗಿದೆ. ಅನಂತ್‌ನಾಗ್ ನಿವಾಸಿ ಆದಿಲ್ ಹುಸೇನ್ ಥೋಕರ್ ಮತ್ತು ಇಬ್ಬರು ಪಾಕಿಸ್ತಾನಿ ಪ್ರಜೆಗಳಾದ ಅಲಿ ಭಾಯಿ ಯಾನೆ ತಲ್ಹಾ ಭಾಯಿ ಮತ್ತು ಹಾಶಿಮ್ ಮೂಸಾ ಯಾನೆ ಸುಲೇಮಾನ್ ಶಂಕಿತ ಉಗ್ರರಾಗಿದ್ದಾರೆ.

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಮೂವರು ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ

ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಒಂದು ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಪಹಲ್ಗಾಮ್ ದಾಳಿಯ ಹೊಣೆ ಹೊತ್ತುಕೊಂಡಿದೆ. ಈಗಾಗಲೇ ಈ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಲ್ಲಿ ದಾಳಿ ನಡೆಸಿವೆ.

ಅದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಅಧಿಕೃತವಾಗಿ ಯುದ್ಧ ಆರಂಭಿಸುವುದಕ್ಕೂ ಮುನ್ನವೇ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಲಾಗಿದೆ. ಸದ್ಯ ಗಡಿಯಲ್ಲಿ ಗುಂಡಿನ ಸದ್ದು ಕಡಿಮೆಯಾಗಿದೆ. ಆದರೆ ಭಯೋತ್ಪಾದನೆ ವಿರುದ್ಧದ ಆಪರೇಷನ್ ಸಿಂಧೂರ ಮುಂದುವರೆದಿದೆ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...