ಜಮ್ಮು-ಕಾಶ್ಮೀರ | ನಾಪತ್ತೆಯಾಗಿದ್ದ ಇಬ್ಬರು ಪೊಲೀಸರು ಶವವಾಗಿ ಪತ್ತೆ!

Date:

ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ದಚ್ಚನ್‌ನ ಎತ್ತರದ ಅರಣ್ಯ ಪ್ರದೇಶದಲ್ಲಿ ಬುಧವಾರ ನಾಪತ್ತೆಯಾಗಿದ್ದ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು (SPO) ಗುರುವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಮೃತದೇಹಗಳ ಮೇಲೆ ಹಲವು ಗುಂಡೇಟಿನ ಗುರುತುಗಳಿದ್ದು, ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳು ನಾಪತ್ತೆಯಾಗಿರುವುದು ಈ ಕೃತ್ಯದ ಹಿಂದೆ ಭಯೋತ್ಪಾದಕರ ಕೈವಾಡವಿರುವುದನ್ನು ಪುಷ್ಟೀಕರಿಸಿದೆ.

- Advertisement -

ಹುತಾತ್ಮರಾದ ಪೊಲೀಸರನ್ನು ಸ್ಥಳೀಯ ಪೊಲೀಸ್ ಇಲಾಖೆಯ ವಿಶೇಷ ಕಾರ್ಯಾಚರಣೆ ಗುಂಪಿನ (SOG) ಸಿಬ್ಬಂದಿ ಬಾಬಿ ಚಂದ್ (57) ಮತ್ತು ರಶ್ಪಾಲ್ ಕುಮಾರ್ (45) ಎಂದು ಗುರುತಿಸಲಾಗಿದೆ. ಇವರಿಬ್ಬರೂ ದಚ್ಚನ್‌ನ ಕಿಯಾರ್ ಗ್ರಾಮದ ಶಿಬಿರದಲ್ಲಿ ನಿಯೋಜನೆಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಬುಧವಾರ ಮಧ್ಯಾಹ್ನ ಗಸ್ತು ಕರ್ತವ್ಯಕ್ಕೆ ತೆರಳಿದ್ದ ಬಾಬಿ ಚಂದ್ ಮತ್ತು ರಶ್ಪಾಲ್ ಕುಮಾರ್, ಕಿಯಾರ್ ಶಿಬಿರದಿಂದ ಧರ್ನಾ-ಮರ್ವಾ ಬಳಿಯ ಸೇನಾ ನೆಲೆಗೆ ಪ್ರಯಾಣಿಸುತ್ತಿದ್ದ ವೇಳೆ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ಆರಂಭದಲ್ಲಿ ಅವರ ಮೊಬೈಲ್ ಫೋನ್‌ಗಳು ಸಂಪರ್ಕಕ್ಕೆ ಸಿಗುತ್ತಿದ್ದವಾದರೂ, ನಂತರ ಸ್ವಿಚ್ ಆಫ್ ಆಗಿದ್ದವು. ಇದೇ ಸಮಯದಲ್ಲಿ ದಚ್ಚನ್ ಅರಣ್ಯ ಪ್ರದೇಶದಲ್ಲಿ ಗುಂಡಿನ ಸದ್ದು ಕೇಳಿಬಂದಿದ್ದು, ಮೊಬೈಲ್ ನೆಟ್‌ವರ್ಕ್ ಕೂಡ ಸ್ಥಗಿತಗೊಂಡಿತ್ತು ಎಂದು ಮೂಲಗಳು ತಿಳಿಸಿವೆ.

ಸಿಬ್ಬಂದಿ ನಿಗದಿತ ಸ್ಥಳಕ್ಕೆ ತಲುಪದ ಹಿನ್ನೆಲೆಯಲ್ಲಿ ಆತಂಕಗೊಂಡ ಪೊಲೀಸರು ಮತ್ತು ಭಾರತೀಯ ಸೇನೆಯ ‘ರಾಷ್ಟ್ರೀಯ ರೈಫಲ್ಸ್’ ಪಡೆಗಳು ದುರ್ಗಮ ಪರ್ವತ ಹಾಗೂ ದಟ್ಟ ಅರಣ್ಯ ಪ್ರದೇಶದಲ್ಲಿ ಬೃಹತ್ ಜಂಟಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು. ಗುರುವಾರ ಮುಂಜಾನೆ 8 ಗಂಟೆ  ಸುಮಾರಿಗೆ ಇಬ್ಬರೂ ಅಧಿಕಾರಿಗಳ ಮೃತದೇಹಗಳನ್ನು ಅರಣ್ಯ ಪ್ರದೇಶದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಕಿಶ್ತ್ವಾರ್ ಶಾಸಕಿ ಶಗುನ್ ಪರಿಹಾರ್ ಮಾಹಿತಿ ನೀಡಿದ್ದಾರೆ. ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಅವರು, ಇದೊಂದು ದುರದೃಷ್ಟಕರ ಘಟನೆ ಎಂದಿದ್ದಾರೆ.

ಕಿಶ್ತ್ವಾರ್ ಜಿಲ್ಲೆಯ ದುರ್ಗಮ ಅರಣ್ಯ ಪ್ರದೇಶಗಳಲ್ಲಿ ಅಡಗಿರುವ ಉಗ್ರರನ್ನು ಮಟ್ಟಹಾಕಲು ಭದ್ರತಾ ಪಡೆಗಳು ನಿರಂತರ ಕಾರ್ಯಾಚರಣೆ ನಡೆಸುತ್ತಿವೆ. ಇತ್ತೀಚಿನ ವರ್ಷಗಳಲ್ಲಿ ನಡೆದ ಕಾರ್ಯಾಚರಣೆಗಳಲ್ಲಿ ಹಲವು ಉಗ್ರರನ್ನು ಹತ್ಯೆ ಮಾಡುವ ಮೂಲಕ ಅವರ ಜಾಲವನ್ನು ದುರ್ಬಲಗೊಳಿಸಲಾಗಿದೆ. ಆದರೂ, ಇಲ್ಲಿನ  ದಟ್ಟ ಕಾಡುಗಳು ಭದ್ರತಾ ಪಡೆಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿವೆ.

ಅಧಿಕೃತ ಅಂಕಿಅಂಶಗಳ ಪ್ರಕಾರ, ಕಿಶ್ತ್ವಾರ್ ಜಿಲ್ಲೆಯಲ್ಲಿ ಭಯೋತ್ಪಾದಕ ಸಂಬಂಧಿತ ಘಟನೆಗಳಲ್ಲಿ 2024ರಲ್ಲಿ ಮೂವರು ಭದ್ರತಾ ಸಿಬ್ಬಂದಿ ಹಾಗೂ ಇಬ್ಬರು ನಾಗರಿಕರು ಪ್ರಾಣ ಕಳೆದುಕೊಂಡಿದ್ದರು. 2025ರಲ್ಲಿ ಮೂವರು ಉಗ್ರರು ಮತ್ತು ಓರ್ವ ಸೇನಾ ಯೋಧ ಸಾವನ್ನಪ್ಪಿದ್ದರೆ, ಪ್ರಸಕ್ತ 2026ನೇ ಸಾಲಿನಲ್ಲಿ ಈವರೆಗೆ ನಾಲ್ವರು ಉಗ್ರರು ಹಾಗೂ ಓರ್ವ ಸೇನಾ ಯೋಧ ಹತರಾಗಿದ್ದರು. ಇದೀಗ ಇಬ್ಬರು ಎಸ್‌ಪಿಒಗಳ ಹತ್ಯೆಯೊಂದಿಗೆ ಜಿಲ್ಲೆಯಲ್ಲಿ ಮತ್ತೆ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಕಳೆದ ಅಕ್ಟೋಬರ್ 4ರಂದು ಕಿಶ್ತ್ವಾರ್ ಜಿಲ್ಲಾಧಿಕಾರಿ ಪಂಕಜ್ ಕುಮಾರ್ ಶರ್ಮಾ ಅವರು ಮರ್ವಾ, ವಾರ್ವಾನ್ ಮತ್ತು ದಚ್ಚನ್‌ನಂತಹ ಕುಗ್ರಾಮಗಳ ನಿವಾಸಿಗಳೊಂದಿಗೆ ಸಭೆ ನಡೆಸಿ, ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನಿಂದ ನಿಲ್ಲುವಂತೆ ಮತ್ತು ಶಂಕಿತ ಉಗ್ರರ ಚಲನವಲನಗಳ ಬಗ್ಗೆ ತಕ್ಷಣ ಮಾಹಿತಿ ನೀಡುವಂತೆ ಮನವಿ ಮಾಡಿದ್ದರು. “ಈ ಪ್ರದೇಶಗಳಲ್ಲಿ ಪ್ರವಾಸೋದ್ಯಮಕ್ಕೆ ಅಪಾರ ಅವಕಾಶಗಳಿವೆ. ಆದರೆ ಸಕ್ರಿಯ ಉಗ್ರರಿಂದ ಪ್ರವಾಸಿಗರ ಆಗಮನಕ್ಕೆ ದೊಡ್ಡ ಅಡ್ಡಿಯಾಗಿದೆ. ಸುಸ್ಥಿರ ಅಭಿವೃದ್ಧಿಗೆ ಶಾಂತಿ ಮತ್ತು ಭದ್ರತೆ ಅಗತ್ಯ” ಎಂದು ಅವರು ಪ್ರತಿಪಾದಿಸಿದ್ದರು. ಜಿಲ್ಲಾಡಳಿತದ ಈ ಪ್ರಯತ್ನಗಳ ನಡುವೆಯೇ ನಡೆದಿರುವ ಈ ಹತ್ಯೆ, ಸ್ಥಳೀಯ ಭದ್ರತಾ ವ್ಯವಸ್ಥೆಯ ಮೇಲೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸದ್ಯ ಪರಾರಿಯಾಗಿರುವ ಉಗ್ರರಿಗಾಗಿ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಪಾವಳಿ: ಬೆಂಗಳೂರಿನ ವಾಯು ಗುಣಮಟ್ಟ ಮಾಪನದಲ್ಲಿ ‘ಅಪೂರ್ಣ ದತ್ತಾಂಶ’ದ ದೋಷ

ನಗರದ ವಾಯುಮಾಲಿನ್ಯ ಮಟ್ಟವನ್ನು ಅಳೆಯಲು ಬೆಂಗಳೂರಿನಲ್ಲಿ 14 ನಿರಂತರ ವಾಯು ಗುಣಮಟ್ಟ...

ವಿಜಯನಗರ | ಬೈಕ್‌ಗೆ ಕಾರು ಡಿಕ್ಕಿ: ಒಂದೂವರೆ ವರ್ಷದ ಮಗು ಸೇರಿ ಮೂವರ ಸಾವು

ಹೊಸಪೇಟೆ: ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು...

ಬೀದರ್‌ | ಕಬ್ಬಿನ ಗದ್ದೆಗೆ ಬೆಂಕಿ : 7.5 ಎಕರೆ ಕಬ್ಬು ಬೆಂಕಿಗಾಹುತಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಕಟಾವಿಗೆ ಬಂದಿದ್ದ ಜಿಲ್ಲೆಯ...

ಸಿಂಧನೂರು | ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕುಡಿಯುವ ನೀರಿಗೂ ತತ್ವಾರ; ರೋಗಿಗಳ ಪರದಾಟ!

ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ...