ಆನ್ ಲೈನ್‌ನಲ್ಲಿ ‘ಜನನಾಯಗನ್ʼ ಸಿನೆಮಾದ ತುಣುಕುಗಳ ಸೋರಿಕೆ : ಆರು ಮಂದಿ ಬಂಧನ

Date:

ನಟ, ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ನಟನೆಯ ಸಿನೆಮಾ ‘ಜನನಾಯಗನ್’ ಅನ್ನು HD ಗುಣಮಟ್ಟದಲ್ಲಿ ಆನ್ ಲೈನ್ ನಲ್ಲಿ ಸೋರಿಕೆ ಮಾಡಿದ ಆರೋಪದ ಮೇಲೆ ತಮಿಳುನಾಡು ಸೈಬರ್ ಅಪರಾಧ ಘಟಕದ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧಿಸಿದಂತೆ ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

- Advertisement -

‘ಜನನಾಯಗನ್’ ಸಿನೆಮಾವನ್ನು ಪರವಾನಗಿ ಇಲ್ಲದೆ ವಿವಿಧ ಡಿಜಿಟಲ್ ಮಾಧ್ಯಮಗಳ ವೇದಿಕೆಯಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಸಿನೆಮಾ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ನೀಡಿದ ದೂರಿನ ಆಧಾರದ ಮೇಲೆ ಆರು ಮಂದಿಯನ್ನು ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಸಿನೆಮಾವನ್ನು ಆನ್ ಲೈನ್ ನಲ್ಲಿ ಹಂಚಿಕೊಳ್ಳುವುದನ್ನು ತಪ್ಪಿಸುವುದಕ್ಕಾಗಿ ನಡೆಯುತ್ತಿರುವ ಪ್ರಯತ್ನದಲ್ಲಿ ಪೊಲೀಸರು ಪೈರಸಿ ಸಿನೆಮಾಗಳನ್ನು ಪ್ರದರ್ಶಿಸುತ್ತಿದ್ದ ಸುಮಾರು 300 ಲಿಂಕ್ ಗಳನ್ನು ಡಿಲಿಟ್‌ ಮಾಡಿದ್ದಾರೆ. ಏಪ್ರಿಲ್ 9ರಂದು ನಟ ವಿಜಯ್ ನಟನೆಯ ‘ಜನನಾಯಗನ್ ಸಿನೆಮಾದ ಕೆಲವು ತುಣುಕುಗಳು ಹಾಗೂ ಇನ್ನೂ ಕೆಲವು ಪ್ರಕರಣಗಳಲ್ಲಿ ಸಂಪೂರ್ಣ ಸಿನೆಮಾ ಅಂತರ್ಜಾಲದಲ್ಲಿ ಸೋರಿಕೆಯಾಗಿತ್ತು. ಈ ಸಂಬಂಧಿಸಿದಂತೆ ಇಲ್ಲಿಯವರೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸೈಬರ್ ಅಪರಾಧ ಘಟಕ ವಿಸ್ಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿ : 92 ಲಕ್ಷ ಜನರ ಅಸ್ತಿತ್ವವನ್ನೇ ಅಳಿಸಿಹಾಕಿ ನಡೆಸುವ ಚುನಾವಣೆ ಹೇಗೆ ‘ನ್ಯಾಯಯುತ’ವಾಗಲು ಸಾಧ್ಯ?

ದೂರನ್ನು ಆಧರಿಸಿ ರಾಜ್ಯ ಸೈಬರ್ ಅಪರಾಧ ತನಿಖಾ ಕೇಂದ್ರದಲ್ಲಿ ಪ್ರಕರಣ ದಾಖಲಾಗಿತ್ತು. ಭಾರತೀಯ ನ್ಯಾಯ ಸಂಹಿತೆಯ(BNS) ವಿವಿಧ ಸೆಕ್ಷನ್ ಗಳು, ಮಾಹಿತಿ ತಂತ್ರಜ್ಞಾನ ಕಾಯ್ದೆ ಹಕ್ಕು ಸ್ವಾಮ್ಯ ಕಾಯ್ದೆ ಮತ್ತು ಸಿನಿಮಾಟೋಗ್ರಾಫ್ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಕೊಳ್ಳಲಾಗಿದೆ.

ಈ ಸಂಬಂಧಿಸಿದಂತೆ ವಿಶೇಷ ತಂಡಗಳನ್ನು ರಚಿನೆ ಮಾಡಲಾಗಿದೆ. ಈ ತಂಡಗಳು ಡಿಜಿಟಲ್ ವಿಧಿವಿಜ್ಞಾನ ವಿಶ್ಲೇಷಣೆ ನಡೆಸಿ, URLಗಳ ಗುರುತು ಪತ್ತೆ ಹಚ್ಚುವಿಕೆ ಮತ್ತು ಉಲ್ಲಂಘನೆಯತ್ತ ಗಮನ ಹರಿಸಲಿವೆ ಹಾಗೂ ಪೈರಸಿ ಪ್ರತಿಗಳ ಅಪ್ಲೋಡ್ ಮತ್ತು ಹಂಚುವಿಕೆಯಲ್ಲಿ ಭಾಗಿಯಾಗಿರುವವರನ್ನು ಪತ್ತೆ ಹಚ್ಚಲಿವೆ.

ಆರೋಪಿಗಳು ಕ್ಲೌಡ್ ಸ್ಟೋರೇಜ್ ವೇದಿಕೆಗಳನ್ನು ಬಳಸಿದ್ದಾರೆ ಮತ್ತು ಪೈರಸಿ ತುಣುಕುಗಳನ್ನು ಪ್ರಸಾರ ಮಾಡಲು ಡ್ರೈವ್ ಲಿಂಕ್ ಗಳನ್ನು ಹಂಚಿದ್ದಾರೆ ಎನ್ನುವ ಸಂಗತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಗಳಿಂದ ಡಿಜಿಟಲ್ ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸದ್ಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...