ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ನಾಯಕರಾದ ಸೌರವ್, ರಾಂಕಾ, ಅಜಿಂಕ್ಯ ಬಂಧನ; ಇಂದು ನ್ಯಾಯಾಲಯಕ್ಕೆ ಹಾಜರು

Date:

ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪ್ರಮುಖ ನಾಯಕರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ಯಾವುದೇ ಪೂರ್ವಾನುಮತಿ ಇಲ್ಲದೆ ಅನಧಿಕೃತವಾಗಿ ಪ್ರವೇಶಿಸಲು ಯತ್ನಿಸಿದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದು, ಶೀಘ್ರದಲ್ಲೇ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ.

- Advertisement -

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೇಶದಲ್ಲಿ ಹಲವಾರು ದಿನಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ದೆಹಲಿ ಪೊಲೀಸರು ಅವಕಾಶವೇ ನೀಡುತ್ತಿಲ್ಲ. ಹಲವು ವರ್ಷಗಳಿಂದ ಪ್ರತಿಭಟನೆ ನಡೆಸಲು ಜಂತರ್ ಮಂತರ್‌ನಲ್ಲಿ ಮಾತ್ರ ಅವಕಾಶವಿತ್ತು. ಆದರೆ ಈಗ ದಿಢೀರ್ ಆಗಿ ಪೊಲೀಸರು ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅವಕಾಶ ರದ್ದುಗೊಳಿಸಿ, ಬೇರೆ ಎರಡು ಪ್ರದೇಶಗಳಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು...

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಇದನ್ನೂ ಓದಿ: ಜಂತರ್ ಮಂತರ್‌ನಲ್ಲಿ ಧ್ವಜಾರೋಹಣ: ರಾಷ್ಟ್ರಧ್ವಜ ಹಾರಿಸುವುದು ಅಪರಾಧವೇ – ಸಿಜೆಪಿ ನಾಯಕ ದೀಪ್ಕೆ ಪ್ರಶ್ನೆ

ಈ ಎಲ್ಲ ಬೆಳವಣಿಗೆ ಬಳಿಕ ಸಿಜೆಪಿ ನಾಯಕರು ರಾಷ್ಟ್ರೀಯ ಧ್ವಜ ಹಿಡಿದು ಮತ್ತು ಪ್ರತಿಭಟನಾ ಫಲಕಗಳನ್ನು ಪ್ರದರ್ಶಿಸುತ್ತಾ ಈ ಪ್ರದೇಶದೊಳಗೆ ಪ್ರವೇಶಿಸಲು ಯತ್ನಿಸಿದರು. ಈ ಹಿಂದೆ ಕೂಡ ಪ್ರತಿಭಟನೆಯ ಸಂದರ್ಭದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಭವಿಷ್ಯದಲ್ಲಿ ಕಾನೂನು ಉಲ್ಲಂಘಿಸುವುದಿಲ್ಲ ಎಂಬ ಮುಚ್ಚಳಿಕೆಯ ಮೇಲೆ ಬಿಡುಗಡೆ ಮಾಡಲಾಗಿತ್ತು. ಈಗ ಮತ್ತೆ ಆದೇಶಗಳನ್ನು ಮೀರಿ ಪ್ರದೇಶಕ್ಕೆ ಪ್ರವೇಶಿಸಲು ಯತ್ನಿಸಿದ ಆರೋಪದಲ್ಲಿ ಪೊಲೀಸರು ಅವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಪೊಲೀಸರು ಈ ನಾಯಕರ ವಿರುದ್ಧ ಅನುಮತಿಯಿಲ್ಲದೆ ಪ್ರವೇಶಿಸಿದ ಆರೋಪ (ಅತಿಕ್ರಮಣ), ಸರ್ಕಾರದ ಕರ್ತವ್ಯಕ್ಕೆ ಅಡ್ಡಿಪಡಿಸಿದ, ಈ ಹಿಂದಿನ ಮುಚ್ಚಳಿಕೆಯ ನಿಯಮಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಕ್ರಮ ಕೈಗೊಂಡಿದ್ದಾರೆ. ಇಂದು ಹಿರಿಯ ದಂಡಾಧಿಕಾರಿಗಳ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದು, ನ್ಯಾಯಾಲಯದ ನಿರ್ದೇಶನದಂತೆ ಮುಂದಿನ ಕ್ರಮ ಜರುಗಲಿದೆ.

ಇತ್ತ ಸಿಜೆಪಿಯ ಕಾನೂನು ತಂಡವು ಪೊಲೀಸರ ಈ ಕ್ರಮವನ್ನು ಖಂಡಿಸಿದ್ದು, ಇದು ಪ್ರತಿಭಟಿಸುವ ಮೂಲಭೂತ ಹಕ್ಕನ್ನು ದಮನ ಮಾಡುವ ಯತ್ನ ಎಂದು ಆರೋಪಿಸಿದೆ. “ಭಾರತದಲ್ಲಿ ರಾಷ್ಟ್ರಧ್ವಜ (ತ್ರಿವರ್ಣ ಧ್ವಜ) ಹಾರಿಸುವುದು ಯಾವಾಗದಿಂದ ಅಪರಾಧವಾಯಿತು?” ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರನ್ನು ನೇರವಾಗಿ ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿ; ಅಧಿಕಾರಿಗಳಿಗೆ ವಿ.ರಶ್ಮಿ ಮಹೇಶ ಸೂಚನೆ

ಬಾಗಲಕೋಟೆ ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ...

ಅಲ್ಲಾವುದ್ದೀನನ ಅದ್ಭುತ ದೀಪದಂತೆ ಜಿಎಸ್‌ಎಸ್;‌ ʼಹಣತೆಯಿಂದ ಹಣತೆಗೆʼ ಸಂವಾದದಲ್ಲಿ ಮೇಷ್ಟ್ರು ನೆನಪು

ಒಂದು ಹಣತೆಯಿಂದ ಮತ್ತೊಂದು ಹಣತೆಯನ್ನು ಹಚ್ಚಿದಾಗ ಮೊದಲ ಹಣತೆಯ ಬೆಳಕು ಕಡಿಮೆಯಾಗುವುದಿಲ್ಲ,...

ಪ್ರಜಾಪ್ರಭುತ್ವ ರಕ್ಷಣೆಗೆ ಹೋರಾಟ ನಿಲ್ಲದು: ‘ಇಂಡಿಯಾ’ ಒಕ್ಕೂಟ ನಾಯಕರೊಂದಿಗೆ ರಾಹುಲ್ ಗಾಂಧಿ ಚಹಾಕೂಟ

ದೇಶದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ದೊಡ್ಡ...

ಸಿಜೆಐಗೆ ವಿಪಕ್ಷಗಳು ಬರೆದ ಪತ್ರದಲ್ಲಿ ಏನಿದೆ?

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ...