ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ನಾಯಕರಾದ ಸೌರವ್, ರಾಂಕಾ, ಅಜಿಂಕ್ಯಗೆ 5 ದಿನ ನ್ಯಾಯಾಂಗ ಬಂಧನ

Date:

ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ಯಾವುದೇ ಪೂರ್ವಾನುಮತಿ ಇಲ್ಲದೆ ಅನಧಿಕೃತವಾಗಿ ಪ್ರವೇಶಿಸಲು ಯತ್ನಿಸಿದ ಆರೋಪದಲ್ಲಿ ಬಂಧಿತರಾಗಿರುವ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪ್ರಮುಖ ನಾಯಕರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಅವರಿಗೆ ನ್ಯಾಯಾಲಯವು ಐದು ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ.

- Advertisement -

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೇಶದಲ್ಲಿ ಹಲವಾರು ದಿನಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ದೆಹಲಿ ಪೊಲೀಸರು ಅವಕಾಶವೇ ನೀಡುತ್ತಿಲ್ಲ. ಹಲವು ವರ್ಷಗಳಿಂದ ಪ್ರತಿಭಟನೆ ನಡೆಸಲು ಜಂತರ್ ಮಂತರ್‌ನಲ್ಲಿ ಮಾತ್ರ ಅವಕಾಶವಿತ್ತು. ಆದರೆ ಈಗ ದಿಢೀರ್ ಆಗಿ ಪೊಲೀಸರು ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅವಕಾಶ ರದ್ದುಗೊಳಿಸಿ, ಬೇರೆ ಎರಡು ಪ್ರದೇಶಗಳಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಇದನ್ನೂ ಓದಿ: ಜಂತರ್ ಮಂತರ್‌ನಲ್ಲಿ ಧ್ವಜಾರೋಹಣ: ರಾಷ್ಟ್ರಧ್ವಜ ಹಾರಿಸುವುದು ಅಪರಾಧವೇ – ಸಿಜೆಪಿ ನಾಯಕ ದೀಪ್ಕೆ ಪ್ರಶ್ನೆ

ಈ ಎಲ್ಲ ಬೆಳವಣಿಗೆ ಬಳಿಕ ಸಿಜೆಪಿ ನಾಯಕರು ರಾಷ್ಟ್ರೀಯ ಧ್ವಜ ಹಿಡಿದು ಮತ್ತು ಪ್ರತಿಭಟನಾ ಫಲಕಗಳನ್ನು ಪ್ರದರ್ಶಿಸುತ್ತಾ ಈ ಪ್ರದೇಶದೊಳಗೆ ಪ್ರವೇಶಿಸಲು ಯತ್ನಿಸಿದರು. ಈ ಹಿಂದೆ ಕೂಡ ಪ್ರತಿಭಟನೆಯ ಸಂದರ್ಭದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಭವಿಷ್ಯದಲ್ಲಿ ಕಾನೂನು ಉಲ್ಲಂಘಿಸುವುದಿಲ್ಲ ಎಂಬ ಮುಚ್ಚಳಿಕೆಯ ಮೇಲೆ ಬಿಡುಗಡೆ ಮಾಡಲಾಗಿತ್ತು. ಈಗ ಮತ್ತೆ ಆದೇಶಗಳನ್ನು ಮೀರಿ ಪ್ರದೇಶಕ್ಕೆ ಪ್ರವೇಶಿಸಲು ಯತ್ನಿಸಿದ ಆರೋಪದಲ್ಲಿ ಪೊಲೀಸರು ಅವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದರು.

ಪೊಲೀಸರು ಈ ನಾಯಕರ ವಿರುದ್ಧ ಅನುಮತಿಯಿಲ್ಲದೆ ಪ್ರವೇಶಿಸಿದ ಆರೋಪ (ಅತಿಕ್ರಮಣ), ಸರ್ಕಾರದ ಕರ್ತವ್ಯಕ್ಕೆ ಅಡ್ಡಿಪಡಿಸಿದ, ಈ ಹಿಂದಿನ ಮುಚ್ಚಳಿಕೆಯ ನಿಯಮಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಕ್ರಮ ಕೈಗೊಂಡಿದ್ದಾರೆ. ಇಂದು ಹಿರಿಯ ದಂಡಾಧಿಕಾರಿಗಳ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು ಇದೀಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತ ಸಿಜೆಪಿಯ ಕಾನೂನು ತಂಡವು ಪೊಲೀಸರ ಈ ಕ್ರಮವನ್ನು ಖಂಡಿಸಿದ್ದು, ಇದು ಪ್ರತಿಭಟಿಸುವ ಮೂಲಭೂತ ಹಕ್ಕನ್ನು ದಮನ ಮಾಡುವ ಯತ್ನ ಎಂದು ಆರೋಪಿಸಿದೆ. “ಭಾರತದಲ್ಲಿ ರಾಷ್ಟ್ರಧ್ವಜ (ತ್ರಿವರ್ಣ ಧ್ವಜ) ಹಾರಿಸುವುದು ಯಾವಾಗದಿಂದ ಅಪರಾಧವಾಯಿತು?” ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರನ್ನು ನೇರವಾಗಿ ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನುಡಿ 2026 | ಇತಿಹಾಸ ಸುಮ್ಮನಿರುವವರನ್ನು ಕ್ಷಮಿಸುವುದಿಲ್ಲ: ಪ್ರಕಾಶ್ ರಾಜ್

ಇತಿಹಾಸ ತಪ್ಪು ಮಾಡಿದವರನ್ನು ಕ್ಷಮಿಸುತ್ತದೆ. ಆದರೆ ಸುಮ್ಮನಿರುವವರನ್ನು ಯಾವತ್ತೂ ಕ್ಷಮಿಸುವುದಿಲ್ಲ ಎಂದು...

ಉತ್ತರ ಕನ್ನಡ |ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಹರ್ಷಲ್ ಬೊಯರ್

ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು,...

ಸಮಾನತೆ, ಕಾಯಕ-ದಾಸೋಹದ ತತ್ವಗಳಿಗೆ ಸಾಕ್ಷಿಯಾದ ನೆಲ ಬಸವಕಲ್ಯಾಣ

ಬಸವಕಲ್ಯಾಣ ಸಮಾನತೆ, ಕಾಯಕ ಮತ್ತು ದಾಸೋಹದ ತತ್ವಗಳನ್ನು ಸಾರುವ ಪವಿತ್ರ ಭೂಮಿಯಾಗಿದ್ದು,...

ಕಾರವಾರ |ಅರಣ್ಯದಲ್ಲಿ ಅಕ್ರಮ ಮದ್ಯ ಸಾಗಾಟ : 64 ಸಾವಿರ ಮೌಲ್ಯದ ಮದ್ಯ ಜಪ್ತಿ

ಮೈಂಗಿಣಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗೋವಾ ರಾಜ್ಯದ ಮದ್ಯ ಸಾಗಾಟ ಮಾಡುತ್ತಿದ್ದ...