ಜಂತರ್ ಮಂತರ್ ಪ್ರತಿಭಟನೆ: ಮಹಿಳೆಯರ ಮೇಲಿನ ದೌರ್ಜನ್ಯ ಆರೋಪಗಳ ತನಿಖೆಗೆ ಆದ್ಯತೆ ನೀಡಲು ಸುಪ್ರೀಂ ಸೂಚನೆ

Date:

ಇತ್ತೀಚೆಗೆ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೊಲೀಸರು ಎಸಗಿದ್ದಾರೆನ್ನಲಾದ ದೌರ್ಜನ್ಯಗಳ ಕುರಿತು ತನಿಖೆ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಯು, ಮಹಿಳಾ ಪ್ರತಿಭಟನಾಕಾರರು ನೀಡಿರುವ ಲೈಂಗಿಕ ದೌರ್ಜನ್ಯದ ದೂರುಗಳಿಗೆ ಮೊದಲ ಆದ್ಯತೆ ನೀಡುವಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸೋಮವಾರ ಸೂಚಿಸಿದ್ದಾರೆ.

- Advertisement -

​ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಮುಂದೆ ಹಿರಿಯ ವಕೀಲೆ ಶೋಭಾ ಗುಪ್ತಾ ಅವರು ಈ ವಿಚಾರವನ್ನು ಪ್ರಸ್ತಾಪಿಸಿದರು. “ಕೆಲವು ಯುವತಿಯರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ಇಂತಹ ಪ್ರಕರಣಗಳು ವರದಿಯಾಗಿವೆ. ಹೀಗಾಗಿ ನ್ಯಾಯಾಲಯವು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ಕೈಗೆತ್ತಿಕೊಳ್ಳಬೇಕು” ಎಂದು ಅವರು ಮನವಿ ಮಾಡಿದರು. ಆದರೆ, ಈ ವಿಷಯವು ಈಗಾಗಲೇ ನ್ಯಾಯಾಲಯದ ಮುಂದಿರುವ ರಿಟ್ ಅರ್ಜಿಯ ಭಾಗವಾಗಿದೆ ಎಂದು ಪೀಠವು ಗಮನಸೆಳೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

​ಲೈಂಗಿಕ ದೌರ್ಜನ್ಯದ ಪ್ರಕರಣಗಳನ್ನು ಪ್ರತ್ಯೇಕವಾಗಿ ಪರಿಗಣಿಸಬೇಕು ಮತ್ತು ಸಂತ್ರಸ್ತ ಯುವತಿಯರು ನೇರವಾಗಿ ದೂರು ನೀಡಲು ಅನುಕೂಲವಾಗುವಂತೆ ಜಿಲ್ಲಾ ನ್ಯಾಯಾಧೀಶರನ್ನು ಅಥವಾ ವಿಶೇಷ ಅಧಿಕಾರಿಯನ್ನು ನೇಮಿಸಬೇಕು. ದೂರುಗಳಿಗಾಗಿಯೇ ಪ್ರತ್ಯೇಕ ಇ-ಮೇಲ್ ಐಡಿ ಒದಗಿಸಿ ಅದಕ್ಕೆ ವ್ಯಾಪಕ ಪ್ರಚಾರ ನೀಡಬೇಕು ಎಂದು ವಕೀಲೆ ಗುಪ್ತಾ ಅವರು ಪೀಠವನ್ನು ಒತ್ತಾಯಿಸಿದರು.

​ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿಗಳು, “ನಿಮ್ಮ ಕಳಕಳಿಯನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ತನಿಖಾ ಸಮಿತಿಯ ಅಧ್ಯಕ್ಷರಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸುವ ಅಧಿಕಾರ ನೀಡಲಾಗಿದೆ. ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ, ದೂರು ನೀಡುವ ವಿಧಾನವನ್ನು ಪ್ರಕಟಿಸಲಾಗುವುದು. ಆಗ ಸಂತ್ರಸ್ತರು ನೇರವಾಗಿ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಿ ದೂರು ಸಲ್ಲಿಸಬಹುದು. ಜೊತೆಗೆ ಆದ್ಯತೆಯ ಮೇರೆಗೆ ಈ ದೂರುಗಳನ್ನು ಪರಿಶೀಲಿಸಿ ಮಧ್ಯಂತರ ವರದಿ ಸಲ್ಲಿಸುವಂತೆಯೂ ಸಮಿತಿಗೆ ಆದೇಶಿಸಲಾಗಿದೆ” ಎಂದು ಸ್ಪಷ್ಟಪಡಿಸಿದರು.

​ಜಂತರ್ ಮಂತರ್‌ನಲ್ಲಿ ಕಳೆದ ತಿಂಗಳು ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ, ಪೊಲೀಸರ ದೌರ್ಜನ್ಯ ಮತ್ತು ಇತರೆ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್ ಆಗಸ್ಟ್ ೨೦ ರಂದು ಐದು ಸದಸ್ಯರ ಉನ್ನತ ಮಟ್ಟದ ತನಿಖಾ ಸಮಿತಿಯನ್ನು (HPEC) ರಚಿಸಿತ್ತು.
​ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್. ಸುಭಾಷ್ ರೆಡ್ಡಿ ಈ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ರವಿಶಂಕರ್ ಝಾ, ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಶಲಿಂದರ್ ಕೌರ್, ಸಿಬಿಐ ಮಾಜಿ ನಿರ್ದೇಶಕ ರಿಷಿಕುಮಾರ್ ಶುಕ್ಲಾ ಮತ್ತು ಮೇಘಾಲಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಎಲ್.ಆರ್. ಬಿಷ್ಣೋಯಿ ಅವರು ಈ ಸಮಿತಿಯ ಇತರ ಸದಸ್ಯರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...