ತ್ಯಾಜ್ಯ ನಿರ್ವಹಣೆಗೆ ಜಪಾನ್ ಮಾದರಿ: ಓಸಾಕಾದ ಮೈಶಿಮಾ ಘಟಕಕ್ಕೆ ಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಭೇಟಿ!

Date:

ರಾಜ್ಯದ ನಗರಗಳಲ್ಲಿ ತಲೆದೋರಿರುವ ಘನತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಉನ್ನತ ಮಟ್ಟದ ನಿಯೋಗವು ಮಂಗಳವಾರ ಜಪಾನ್‌ನ ಓಸಾಕಾದಲ್ಲಿರುವ ವಿಶ್ವಪ್ರಸಿದ್ಧ ‘ಮೈಶಿಮಾ ತ್ಯಾಜ್ಯ ದಹನ ಘಟಕ’ಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿತು.

- Advertisement -

‘ತ್ಯಾಜ್ಯದಿಂದ ವಿದ್ಯುತ್’ ಉತ್ಪಾದಿಸುವ ಜಾಗತಿಕ ಮಟ್ಟದ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಯೋಜಿತ ನಗರ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯ ಕಾರ್ಯವೈಖರಿಯನ್ನು ನಿಯೋಗವು ಈ ಸಂದರ್ಭದಲ್ಲಿ ಕೂಲಂಕಷವಾಗಿ ಪರಿಶೀಲಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ...

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ ಅನರ್ಹ ವ್ಯಕ್ತಿಯನ್ನೂ ಸೇರಿಸಿಲ್ಲ ಎಂದು ಚುನಾವಣಾ ಆಯೋಗ ಹೇಳುತ್ತದೆ. ಆದರೆ, ಮತದಾರರ ಪಟ್ಟಿಯಲ್ಲಿರುವ ಅಂಕಿಅಂಶಗಳು ಮತ್ತು ದಾಖಲೆಗಳು ಬೇರೆಯದ್ದೇ ಕಥೆ...

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ, ಬೆದರಿಕೆ, ವಂಚನೆ ಅಥವಾ ಆಮಿಷದ ಮೂಲಕ ಧಾರ್ಮಿಕ ನಂಬಿಕೆಯನ್ನು ಬದಲಾಯಿಸುವುದು ಕಾನೂನು ಮತ್ತು ನೈತಿಕತೆಯ ದೃಷ್ಟಿಯಿಂದ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ....

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು;...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಸತತ ಮೂರನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದ್ದು, ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಆರಂಭಿಸಿದೆ. ಮತ್ತೊಂದೆಡೆ ಸಮಾಜವಾದಿ...

ಮೈಶಿಮಾ ಘಟಕದ ವಿಶೇಷತೆ ಏನು?

 ಓಸಾಕಾದ ಮೈಶಿಮಾ ದ್ವೀಪದಲ್ಲಿರುವ ಈ ಘಟಕವು 2001ರಿಂದ ಕಾರ್ಯನಿರ್ವಹಿಸುತ್ತಿದೆ. ಇಲ್ಲಿರುವ ಎರಡು ಬೃಹತ್ ದಹನಕಾರಿ ಘಟಕಗಳ ಮೂಲಕ ಪ್ರತಿದಿನ ಗರಿಷ್ಠ 900 ಟನ್ ಪುರಸಭೆ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಲಾಗುತ್ತದೆ. ಈ ಪ್ರಕ್ರಿಯೆಯ ಮೂಲಕ 32 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದ್ದು, ಘಟಕವು ತನ್ನ ಸ್ವಂತ ವಿದ್ಯುತ್ ಅಗತ್ಯವನ್ನು ಪೂರೈಸಿಕೊಂಡು ಉಳಿದ ವಿದ್ಯುತ್ತನ್ನು ಸಾರ್ವಜನಿಕ ವಿದ್ಯುತ್ ಜಾಲಕ್ಕೆ ಪೂರೈಸುತ್ತಿದೆ.

ಘಟಕದಲ್ಲಿ ಸುಧಾರಿತ ದಹನ ನಿಯಂತ್ರಣ, ನಿರಂತರ ಹೊಗೆ ಹೊರಸೂಸುವಿಕೆ ಮೇಲ್ವಿಚಾರಣೆ ಮತ್ತು ಆಧುನಿಕ ಮಾಲಿನ್ಯ ನಿಯಂತ್ರಣ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ. ಇದರಿಂದ ಪರಿಸರದ ಮೇಲಿನ ದುಷ್ಪರಿಣಾಮವನ್ನು ಸಂಪೂರ್ಣವಾಗಿ ತಡೆಗಟ್ಟಲಾಗಿದೆ.

ತಂತ್ರಜ್ಞಾನದ ಜೊತೆಗೆ ತನ್ನ ವಿಶಿಷ್ಟ ವಿನ್ಯಾಸಕ್ಕೂ ಈ ಘಟಕ ಹೆಸರುವಾಸಿಯಾಗಿದೆ. ಆಸ್ಟ್ರಿಯನ್ ಕಲಾವಿದ ಫ್ರೀಡೆನ್ಸ್‌ರೈಕ್ ಹಂಡರ್ಟ್‌ವಾಸರ್ ಅವರು ವಿನ್ಯಾಸಗೊಳಿಸಿರುವ ಈ ಕಟ್ಟಡವು ವರ್ಣರಂಜಿತ ಹೊರನೋಟ ಮತ್ತು ವ್ಯಾಪಕ ಹಸಿರಿನಿಂದ ಕೂಡಿದ್ದು, ಕಲೆ, ಪರಿಸರ ಮತ್ತು ಕೈಗಾರಿಕಾ ಮೂಲಸೌಕರ್ಯದ ಅಪೂರ್ವ ಸಂಗಮವಾಗಿದೆ. ನಗರದ ತ್ಯಾಜ್ಯ ವಿಲೇವಾರಿ ಕೇಂದ್ರಗಳನ್ನೂ ಪರಿಸರ ಜಾಗೃತಿ ಮೂಡಿಸುವ ಆಕರ್ಷಕ ತಾಣಗಳನ್ನಾಗಿ ರೂಪಿಸಬಹುದು ಎಂಬುದಕ್ಕೆ ಇದು ಸಾಕ್ಷಿಯಾಗಿದೆ.

ಸಿಎಂ ಭೇಟಿಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ನಮ್ಮ ನಗರಗಳ ತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕುವುದು ಹಾಗೂ ಜಾಗತಿಕ ವಿನೂತನ ಪದ್ಧತಿಗಳನ್ನು ಅಧ್ಯಯನ ಮಾಡುವುದು ಈ ಪ್ರವಾಸದ ಮುಖ್ಯ ಉದ್ದೇಶವಾಗಿದೆ” ಎಂದರು. “ನಗರ ಯೋಜನೆ ಮತ್ತು ಪರಿಸರ ನಿರ್ವಹಣೆಯಲ್ಲಿ ಜಾಗತಿಕ ಮನ್ನಣೆ ಪಡೆದ ಇಂತಹ ಮಾದರಿಗಳನ್ನು ಅಳವಡಿಸಿಕೊಳ್ಳುವುದು ಸರ್ಕಾರದ ಗುರಿಯಾಗಿದೆ. ಈ ಅಧ್ಯಯನವು ಕರ್ನಾಟಕದ ನಗರಗಳ ಮೂಲಸೌಕರ್ಯವನ್ನು ಬಲಪಡಿಸಲು, ವೈಜ್ಞಾನಿಕ ತ್ಯಾಜ್ಯ ವಿಲೇವಾರಿಯನ್ನು ಉತ್ತೇಜಿಸಲು ಮತ್ತು ಸ್ವಚ್ಛ, ಸುಸ್ಥಿರ ಹಾಗೂ ವಾಸಯೋಗ್ಯ ನಗರಗಳನ್ನು ನಿರ್ಮಿಸಲು ಸಹಕಾರಿಯಾಗಲಿದೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಜಿ.ಪಂ, ತಾ.ಪಂ ಮೀಸಲಾತಿ ಅಂತಿಮ ಪಟ್ಟಿ ಪ್ರಕಟ

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮತ್ತು 12 ತಾಲೂಕುಗಳ ಪಂಚಾಯಿತಿ...

ಬಿಸ್ಲೇರಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ; ಅಂಬಾನಿಯ ‘ಕ್ಯಾಂಪಾ ಶ್ಯೂರ್‌’ ನೀರಿನ ಕತೆ ಏನು?

ನಾವು ಕುಡಿಯುವ ನೀರು ಎಷ್ಟು ಸುರಕ್ಷಿತ? ದಾಹ ತಣಿಸಿಕೊಳ್ಳಲು ನಾವು ನಂಬಿ...

ಈ ದಿನ ಸಂಪಾದಕೀಯ | ದುಷ್ಟರ ದುರಾಸೆಯೂ; ಕಾಡು-ನಾಡು ನಡುವಿನ ಸಂಘರ್ಷವೂ

ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷ ಸಾಮಾನ್ಯ ಸಂಗತಿಯಲ್ಲ. ಇದು ಮುಖ್ಯವಾಗಿ...

ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ: ಬೆಂಗಳೂರು ಮೆಟ್ರೋ ಸ್ಫೋಟಿಸುವ ಸಂದೇಶ

ಬೆಂಗಳೂರಿನ ನಿಗದಿಯಾಗಿರುವ ಗಾಯಕ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮಕ್ಕೆ ಅಪರಿಚಿತರು...