ಆ್ಯಂಬುಲೆನ್ಸ್ ಒದಗಿಸದ ಆಸ್ಪತ್ರೆ: ಮಗುವನ್ನು ‘ಪ್ಲಾಸ್ಟಿಕ್ ಚೀಲ’ದಲ್ಲಿ ಕೊಂಡೊಯ್ದ ಬುಡಕಟ್ಟು ಕುಟುಂಬ

Date:

ಆಸ್ಪತ್ರೆಯು ಆ್ಯಂಬುಲೆನ್ಸ್ ಸೌಲಭ್ಯ ಒದಗಿಸದ ಕಾರಣ ಬುಡಕಟ್ಟು ಕುಟುಂಬವೊಂದು ತನ್ನ ನಾಲ್ಕು ತಿಂಗಳ ಮಗುವಿನ ಮೃತದೇಹವನ್ನು ಆಸ್ಪತ್ರೆಯಿಂದ ತಮ್ಮೂರಿಗೆ ಪ್ಲಾಸ್ಟಿಕ್ ಚೀಲದಲ್ಲಿ ಸಾಗಿಸಿರುವ ಹೃದಯವಿದ್ರಾವಕ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ.

- Advertisement -

ಜಾರ್ಖಂಡ್‌ನ ನೊಮುಂಡಿ ಪ್ರದೇಶದ ಬಲ್ಜೋರಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ನಿವಾಸಿ ದಿಂಬಾ ಚತೊಂಬ ಅವರು ಅನಾರೋಗ್ಯಕ್ಕೊಳಗಾಗಿದ್ದ ತನ್ನ ಮಗುವನ್ನು ಚೈಬಾಸಾದ ಸದರ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ, ಮಗು ಸಾವನ್ನಪ್ಪಿದೆ. ಮಗುವಿನ ಮೃತದೇಹವನ್ನು ತಮ್ಮ ಗ್ರಾಮಕ್ಕೆ ಕೊಂಡೊಯ್ಯಲು ಆ್ಯಂಬುಲೆನ್ಸ್ ಒದಗಿಸುವಂತೆ ಚತೊಂಬ ಅವರು ಕೇಳಿದ್ದಾರೆ. ಆದರೆ, ಆಸ್ಪತ್ರೆ ಆಡಳಿತ ಮಂಡಳಿ ಆ್ಯಂಬುಲೆನ್ಸ್ ಒದಗಿಸಲು ನಿರಾಕರಿಸಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಚತೊಂನ ಅವರ ಬಳಿ ಕೇವಲ 100 ರೂ. ಇದ್ದಿದ್ದರಿಂದ, ಖಾಸಗಿ ವಾಹನವನ್ನು‌ ಬಾಡಿಗೆಗೆ ಪಡೆಯಲಾಗದೆ, ಕುಟುಂಬವು ಪ್ಲಾಸ್ಟಿಕ್ ಚೀಲವೊಂದನ್ನು ಖರೀದಿಸಿ, ಅದರಲ್ಲಿ ಮಗುವಿನ ಮೃತದೇಹವನ್ನು ಇಟ್ಟುಕೊಂಡು ಬಸ್‌ನಲ್ಲಿ ತಮ್ಮೂರಿಗೆ ತೆರಳಿದ್ದಾರೆ ಎಂದು ವರದಿಯಾಗಿದೆ.

ಘಟನೆ ಕುರಿತು ಪಶ್ಚಿಮ ಸಿಂಗ್ ಭೂಮ್ ಜಿಲ್ಲಾಡಳಿತ ತನಿಖೆಗೆ ಆದೇಶಿಸಿದೆ. ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಚಂದನ್ ಕುಮಾರ್ ತಿಳಿಸಿದ್ದಾರೆ. ತನಿಖಟ ವರದಿ ಬಂದ ಬಳಿಕ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಇರ್ಫಾನ್ ಅನ್ಸಾರಿ ಭರವಸೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...

ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ...