ಜಾರ್ಖಂಡ್ ವಿದ್ಯಾರ್ಥಿ ಪ್ರತಿಭಟನೆಗೆ ಬಂಗಾಳದಿಂದ ಬಿಜೆಪಿ ಕಾರ್ಯಕರ್ತರನ್ನು ಕಳಿಸಿದೆ; ಕಾಂಗ್ರೆಸ್ ಆರೋಪ

Date:

ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಬಿಜೆಪಿ ಹೊಸ ರೂಪ ನೀಡಲು ಯತ್ನಿಸುತ್ತಿದೆ. ಬಿಜೆಪಿ ಯುವ ಮೋರ್ಚಾದ ಕೆಲವು ಸದಸ್ಯರನ್ನು ಪಶ್ಚಿಮ ಬಂಗಾಳದಿಂದ ಟ್ರಕ್‌ಗಳಲ್ಲಿ ಜಾರ್ಖಂಡ್‌ಗೆ ಕರೆತರಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

- Advertisement -

ಪ್ರತಿಭಟನೆಯನ್ನು ದೊಡ್ಡದಾಗಿ ಬಿಂಬಿಸಲು ‘ನಕಲಿ ಜನಸಂದಣಿ’ ಸೇರಿಸಿದರೆ, ಕೇಂದ್ರ ಸರ್ಕಾರದ ವಿರುದ್ಧ ಎದ್ದಿರುವ ಸಾರ್ವಜನಿಕ ಆಕ್ರೋಶ ತಣಿಯುತ್ತದೆ ಎಂದು ಬಿಜೆಪಿ ಭಾವಿಸಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಪರೀಕ್ಷಾ ಅಕ್ರಮಗಳ ವಿರುದ್ಧ ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯಲ್ಲಿ ಭಾಗವಹಿಸಲು ಬಿಜೆಪಿ ಯುವಕರನ್ನು ಕಳುಹಿಸುತ್ತಿದೆ ಎಂದು ಆರೋಪಿಸಲಾದ ವೀಡಿಯೊ ತುಣುಕನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರು ‘X’ನಲ್ಲಿ ಹಂಚಿಕೊಂಡಿದ್ದಾರೆ. “ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಕ್ಷುಲ್ಲಕ ರಾಜಕೀಯಕ್ಕೆ ಇದೋ ಮತ್ತೊಂದು ಉದಾಹರಣೆ. ಬಿಜೆಪಿ ಯುವ ಮೋರ್ಚಾದ ಕೆಲವು ಯುವಕರನ್ನು ಪಶ್ಚಿಮ ಬಂಗಾಳದಿಂದ ಟ್ರಕ್‌ಗಳಲ್ಲಿ ಜಾರ್ಖಂಡ್‌ಗೆ ಸಾಗಿಸಲಾಗುತ್ತಿದೆ. ಅಲ್ಲಿ ನಡೆಯುತ್ತಿರುವ ಅಹಿಂಸಾತ್ಮಕ ವಿದ್ಯಾರ್ಥಿ ಚಳವಳಿಗೆ ಬೇರೆ ಬಣ್ಣ ಬಳಿಯಲು ಯತ್ನಿಸಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

“ನಕಲಿ ಜನಸಂದಣಿಯನ್ನು ಕಳುಹಿಸಿ ಚಳವಳಿಯನ್ನು ದೊಡ್ಡದಾಗಿ ತೋರಿಸಿದರೆ ಮೋದಿ ಸರ್ಕಾರದ ವಿರುದ್ಧದ ಜನರ ಆಕ್ರೋಶ ಕಡಿಮೆಯಾಗುತ್ತದೆ ಎಂದು ಬಿಜೆಪಿ ಭಾವಿಸಿದ್ದಾರೆ. ಮೋದಿಜಿ, ಭಾರತದ ಜನರನ್ನು ಮೂರ್ಖರೆಂದು ಭಾವಿಸುವುದನ್ನು ನಿಲ್ಲಿಸಿ. ಕಳೆದ ತಿಂಗಳು ನಡೆದಿದ್ದು ಬರಿ ‘ಟ್ರೇಲರ್’ ಮಾತ್ರ – ಮೋದಿ ಹಾಗೂ ಅವರ ಸರ್ಕಾರದ ವಿಫಲ ನೀತಿಗಳೇ ತಮ್ಮ ಭವಿಷ್ಯವನ್ನು ಹಾಳುಮಾಡಿವೆ ಎಂಬುದು ಯುವಜನರು ಮತ್ತು ವಿದ್ಯಾರ್ಥಿಗಳಿಗೆ ಚೆನ್ನಾಗಿ ತಿಳಿದಿದೆ” ಎಂದು ಅವರು ಹೇಳಿದ್ದಾರೆ.

Advertisements

“ಜಾರ್ಖಂಡ್‌ನ ಯುವಜನರ ನೆಪದಲ್ಲಿ ನಿಮ್ಮ ಸ್ವಾರ್ಥ ಹಿತಾಸಕ್ತಿಗಳನ್ನು ಈಡೇರಿಸಿಕೊಳ್ಳಲು ಯತ್ನಿಸಬೇಡಿ. ನಿಮ್ಮ ಇಂತಹ ಪಿತೂರಿಗಳಿಗೆ ಈ ದೇಶದಲ್ಲಿ ಜಾಗವಿಲ್ಲ” ಎಂದು ಮೋದಿ ಸರ್ಕಾರದ ವಿರುದ್ಧ ವೇಣುಗೋಪಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾರ್ಖಂಡ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗ ಮಾಡಿದ್ದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡಿಸಿದ ಬೆನ್ನಲ್ಲೇ ಈ ಹೇಳಿಕೆಗಳು ಹೊರಬಿದ್ದಿವೆ. ಜಾರ್ಖಂಡ್‌ ಸರ್ಕಾರವು ಪ್ರತಿಭಟನಾಕಾರರ ಕುಂದುಕೊರತೆಗಳನ್ನು ಆಲಿಸಿ, ತಕ್ಷಣವೇ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಜಾರ್ಖಂಡ್‌ನಲ್ಲಿ ಹೇಮಂತ್ ಸೊರೆನ್ ನೇತೃತ್ವದ ಸರ್ಕಾರದಲ್ಲಿ ಕಾಂಗ್ರೆಸ್ ಕೂಡ ಮಿತ್ರ ಪಕ್ಷವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ | ಮಳೆಯ ಕೊರತೆಯಷ್ಟೇ ಅಲ್ಲ, ಬದುಕಿನ ಮೇಲಿನ ಬರೆ

ಶತ ಶತಮಾನಗಳಿಂದಲೂ ಮಾನವ ಬದುಕನ್ನು ಕಾಡುತ್ತಿರುವ ಪ್ರಕೃತಿಯ ಕಠಿಣ ಸವಾಲುಗಳಲ್ಲಿ ...

ಕೂಡಲೇ ಸೌಜನ್ಯ ಎಸ್‌ಐಟಿ ಪುನರಚಿಸಿ: ರಾಜ್ಯ ಸರ್ಕಾರಕ್ಕೆ ‘ಕೊಂದವರು ಯಾರು?’ ಆಂದೋಲನ ಬಹಿರಂಗ ಪತ್ರ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಈಗ ರಚನೆಯಾಗಿರುವ...

ವಿಜಯಪುರ | ಬೋಧಕರ ಕೊರತೆ: ಪಿಎಚ್‌ಡಿ ವಿದ್ಯಾರ್ಥಿನಿಯರಿಂದಲೇ ಪಿಜಿ ಪಾಠ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ (ಪಿಜಿ) ತರಗತಿಗಳಿಗೆ...

ಧಾಂದಲೆ ನಡೆಯುವ ಚುನಾವಣೆಗಳನ್ನು ಬಹಿಷ್ಕರಿಸಿ: ವಿಪಕ್ಷಗಳಿಗೆ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಕರೆ

ದೇಶದ ವಿರೋಧ ಪಕ್ಷಗಳಿಗೆ 'ಅಕ್ರಮ/ಧಾಂದಲೆ ನಡೆಯುತ್ತಿರುವ' ಚುನಾವಣೆಗಳಲ್ಲಿ ಭಾಗವಹಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ...