ಕೇರಳದ ವಯನಾಡಿನಲ್ಲಿ ಜೀಪು ನಿಯಂತ್ರಣ ತಪ್ಪಿ, ಹಳ್ಳಕ್ಕೆ ಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಶುಕ್ರವಾರ ಸಂಜೆ ನಡೆದಿದೆ.
ತಲಪುಳ ಕಣೋಟ್ ಗುಡ್ಡದಲ್ಲಿ ಈ ದುರ್ಘಟನೆ ನಡೆದಿದ್ದು, ಜೀಪು ನಿಯಂತ್ರಣ ತಪ್ಪಿ, ಹಳ್ಳಕ್ಕೆ ಬಿದ್ದು ಈ ಘಟನೆ ನಡೆದಿದೆ.
ತೋಟದಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದ 12 ಜನರು ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದ್ದು, ಒಂಭತ್ತು ಮಂದಿ ಮೃತಪಟ್ಟಿದ್ದಾರೆ. ಬದುಕಿ ಉಳಿದವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಇಂದು ಮಧ್ಯಾಹ್ನ 3.45ಕ್ಕೆ ಈ ಘಟನೆ ನಡೆದಿದ್ದು, ಖಾಸಗಿ ಟೀ ತೋಟಗಳಿಗೆ ಕೆಲಸಕ್ಕೆ ಹೋಗುತ್ತಿದ್ದ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಇದಾಗಿತ್ತು. ತಲಪುಳ ಕಡೆಯಿಂದ ವಣ್ಮಣಿ ಕಡೆಯಿಂದ ಬರುತ್ತಿದ್ದ ಜೀಪ್ ಕಣೋತ್ ಪರ್ವತ ಹತ್ತುವಾಗ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಗಾಯಾಳುಗಳನ್ನು ಸ್ಥಳೀಯರು ಕೂಡಲೇ ವಯನಾಡ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ ಎಂದು ಮಲಯಾಳಂ ಮಾಧ್ಯಮಗಳು ವರದಿ ಮಾಡಿದೆ.