ಜಾರ್ಖಂಡ್‌ | ಹಳಿ ತಪ್ಪಿದ ಮುಂಬೈ-ಹೌರಾ ರೈಲಿನ 18 ಭೋಗಿಗಳು; ಇಬ್ಬರು ಮೃತ್ಯು

Date:

ಮಂಗಳವಾರ ಮುಂಜಾನೆ ಜಾರ್ಖಂಡ್‌ನ ಸೆರೈಕೆಲಾ-ಖಾರ್ಸಾವಾನ್ ಜಿಲ್ಲೆಯಲ್ಲಿ ಮುಂಬೈ-ಹೌರಾ ರೈಲಿನ 18 ಭೋಗಿಗಳು ಹಳಿತಪ್ಪಿದ್ದು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ದಿ ಮಿಂಟ್ ವರದಿ ಮಾಡಿದೆ.

- Advertisement -

ಮುಂಜಾನೆ ಸುಮಾರು 3.45 ಗಂಟೆಗೆ ಈ ಘಟನೆ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಎಸ್‌ಇಆರ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಇನ್ನು ಸಮೀಪಿದಲ್ಲೇ ಸರಕು ಸಾಗಣೆ ರೈಲು ಕೂಡಾ ಹಳಿತಪ್ಪಿದೆ ಎಂದು ರೈಲ್ವೆಯ ಹಿರಿಯ ಅಧಿಕಾರಿ ಓಂ ಪ್ರಕಾಶ್ ಚರಣ್ ಹೇಳಿದ್ದಾರೆ. ಆದರೆ ಈ ಎರಡೂ ಅಪಘಾತಗಳು ಏಕಕಾಲದಲ್ಲಿಯೇ ಸಂಭವಿಸಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ಪಾಲ್ಘರ್‌ನಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು

ಹಳಿತಪ್ಪಿದ 18 ಬೋಗಿಗಳಲ್ಲಿ 16 ಪ್ಯಾಸೆಂಜರ್ ಬೋಗಿಗಳು, ಒಂದು ಪವರ್ ಭೋಗಿ ಮತ್ತು ಒಂದು ಪ್ಯಾಂಟ್ರಿ ಭೋಗಿಯಾಗಿದೆ. ಹಳಿ ತಪ್ಪಲು ನಿಖರವಾದ ಕಾರಣವನ್ನು ಪತ್ತೆ ಮಾಡಲಾಗುತ್ತಿದೆ ಎಂದು ಓಂ ಪ್ರಕಾಶ್ ಚರಣ್ ತಿಳಿಸಿದ್ದಾರೆ.

ಗಾಯಾಳುಗಳಿಗೆ ರೈಲ್ವೇಯ ವೈದ್ಯಕೀಯ ತಂಡ ಪ್ರಥಮ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗೆ ಚಕ್ರಧರಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸದ್ಯ ಗಾಯಾಳುಗಳ ನಿಖರ ಸಂಖ್ಯೆ ತಿಳಿದುಬಂದಿಲ್ಲ. ಕೆಲವು ಮಾಧ್ಯಮಗಳು ಕನಿಷ್ಠ 60 ಮಂದಿ ಗಾಯಗೊಂಡಿರುವುದಾಗಿ ವರದಿ ಮಾಡಿದೆ.

ಇನ್ನು ಇತ್ತೀಚೆಗೆ ಹಲವಾರು ರೈಲುಗಳು ಹಳಿ ತಪ್ಪಿರುವ ಘಟನೆಗಳು ನಡೆದಿದೆ. ಇತ್ತೀಚೆಗೆ ಮಹಾರಾಷ್ಟ್ರದ ಪಾಲ್ಘಾರ್‌ನಲ್ಲಿ ಗೂಡ್ಸ್‌ ರೈಲೊಂದು ಹಳಿತಪ್ಪಿತ್ತು.

ಭಾರತೀಯ ರೈಲ್ವೇ ಕೂಡ ಪ್ರಯಾಣಿಕರಿಗೆ ಸಹಾಯ ಮಾಡಲು ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.

ಟಾಟಾನಗರ: 06572290324
ಚಕ್ರಧರಪುರ: 06587 238072
ರೂರ್ಕೆಲಾ: 06612501072, 06612500244
ಹೌರಾ: 9433357920, 03326382217
ರಾಂಚಿ: 0651-27-87115
ಮುಂಬೈ: 022-22694040

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ ಎಸಿಪಿ ವಿವೇಕ್ ಭಗತ್ FIR!

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ...

ಕಾಶಿ ವಿಶ್ವನಾಥ ದೇವಾಲಯದಲ್ಲಿ ಚಿನ್ನ ಕಣ್ಮರೆ ಆರೋಪ: ಪಿಎಂಒಗೆ ವಕೀಲರ ಪತ್ರ

ಅಯೋಧ್ಯೆಯ ರಾಮ ಮಂದಿರದ ಕಾಣಿಕೆಯಲ್ಲಿ ದುರ್ನಡೆಯಾಗಿದೆ ಎಂಬ ಆರೋಪದ ಮೇಲೆ ನ್ಯಾಯಾಲಯ...

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...