ಜಾರ್ಖಂಡ್ ಬಿಜೆಪಿ ಶಾಸಕ ಜೈ ಪ್ರಕಾಶ್ ಕಾಂಗ್ರೆಸ್ ಸೇರ್ಪಡೆ

Date:

ಲೋಕಸಭೆ ಚುನಾವಣೆಗೂ ಮುನ್ನ ಜಾರ್ಖಂಡ್‌ನ ಬಿಜೆಪಿ ಶಾಸಕ ಜೈ ಪ್ರಕಾಶ್ ಭಾಯ್ ಪಟೇಲ್ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ಜಾರ್ಖಂಡ್‌ನ ಎಐಸಿಸಿ ಉಸ್ತುವಾರಿ ಗುಲಾಂ ಅಹ್ಮದ್ ಮಿರ್, ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರ ಸಮ್ಮುಖದಲ್ಲಿ ಪಟೇಲ್ ಕಾಂಗ್ರೆಸ್‌ಗೆ ಸೇರಿದ್ದಾರೆ.

ಜೈ ಪ್ರಕಾಶ್ ಭಾಯ್ ಪಟೇಲ್ ಜಾರ್ಖಂಡ್‌ನ ಹಜಾರಿಬಾಗ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮಾಂಡು ವಿಧಾನಸಭೆ ಕ್ಷೇತ್ರದ ಶಾಸಕರಾಗಿದ್ದು ಈ ಹಿಂದೆ ಜಾರ್ಖಂಡ್ ಮುಕ್ತಿ ಮೋರ್ಚಾದ ಶಾಸಕರಾಗಿದ್ದರು. “ಎನ್‌ಡಿಎಯಲ್ಲಿ ನನ್ನ ತಂದೆಯ ಸಿದ್ಧಾಂತ ಕಾಣುತ್ತಿಲ್ಲ” ಎಂದು ಬಿಜೆಪಿ ತೊರೆದು ಕಾಂಗ್ರೆಸ್‌ ತೆಕ್ಕೆ ಸೇರಿದ್ದಾರೆ.

“ಮಾಜಿ ಸಂಸದ, ನನ್ನ ತಂದೆ ತೆಕ್ ಲಾಲ್ ಮಹ್ತೊ ಕನಸುಗಳನ್ನು ನನಸು ಮಾಡಲು ನಾನು ಈ ನಿರ್ಧಾರವನ್ನು ಮಾಡಿದೆ. ನನ್ನ ತಂದೆ ಮೆಚ್ಚುವ ಸಿದ್ಧಾಂತ ಎನ್‌ಡಿಎಯಲ್ಲಿ ಕಾಣುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ‘ಇಂಡಿಯಾ’ ಮೈತ್ರಿಕೂಟವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಕಾಂಗ್ರೆಸ್‌ಗೆ ಸೇರುತ್ತಿದ್ದೇನೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇನ್ನು ಇದೇ ಸಂದರ್ಭದಲ್ಲಿ ಜಾರ್ಖಂಡ್‌ನ ಎಲ್ಲ 14 ಲೋಕಸಭಾ ಕ್ಷೇತ್ರಗಳಲ್ಲಿ ‘ಇಂಡಿಯಾ’ ಮೈತ್ರಿಕೂಟ ಜಯ ಕಾಣಲಿದೆ ಎಂದು ಜೈ ಪ್ರಕಾಶ್ ಭಾಯ್ ಪಟೇಲ್ ವಿಶ್ವಾಸ ವ್ಯಕ್ತಪಡಿಸಿದರು. ಹಜಾರಿಬಾಗ್ ಲೋಕಸಭಾ ಕ್ಷೇತ್ರದಿಂದ ಪಟೇಲ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರೀಕ್ಷೆಯಿದೆ.

ಜಾರ್ಖಂಡ್ ಲೋಕಸಭೆ ಚುನಾವಣೆ

ಜಾರ್ಖಂಡ್‌ನಲ್ಲಿ ಲೋಕಸಭೆ ಚುನಾವಣೆಯು ನಾಲ್ಕು ಹಂತಗಳಲ್ಲಿ ಮೇ 13ರಿಂದ ಜೂನ್ 1ರವರೆಗೆ ನಡೆಯಲಿದೆ. ಲೋಕಸಭೆ ಚುನಾವಣೆಯ ಮತ ಎಣಿಕೆಯು ಜೂನ್ 4ರಂದು ನಡೆಯಲಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ...

ಅರವಿಂದ್ ಕೇಜ್ರಿವಾಲ್ ಆರೋಗ್ಯವಾಗಿದ್ದಾರೆ, ಆದರೆ ದಿನಕ್ಕೆ ಎರಡು ಡೋಸ್ ಇನ್ಸುಲಿನ್ ನೀಡಲಾಗುತ್ತಿದೆ: ವೈದ್ಯರು

ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...

Fact Check | ಹಿಮಾಚಲದಲ್ಲಿ ಪ್ರಿಯಾಂಕಾ ಗಾಂಧಿ ಅಕ್ರಮವಾಗಿ ಬಂಗಲೆ ಖರೀದಿಸಿಲ್ಲ!

ಲೋಕಸಭಾ ಚುನಾವಣೆಯ ಸಮಯದಲ್ಲಿ ಹಿಮಾಚಲ ಪ್ರದೇಶದ ಛರಾಬ್ರಾದಲ್ಲಿರುವ ಪ್ರಿಯಾಂಕಾ ಗಾಂಧಿ ಅವರ...

ಹೆಲಿಕಾಪ್ಟರ್ ಹತ್ತುವಾಗ ಎಡವಿ ಬಿದ್ದು ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಗಾಯ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಪ್ರಚಾರದ...