ಜಾರ್ಖಂಡ್‌ | ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಬೆಂಬಲ: ಹೆಚ್ಚುತ್ತಾ ಜೆಎಂಎಂ-ಕೈ ಮೈತ್ರಿ ಬಿರುಕು?

Date:

ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಸರ್ಕಾರದ ಭಾಗವಾಗಿರುವ ಕಾಂಗ್ರೆಸ್, ಗುರುವಾರ ರಾಂಚಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಬೆಂಬಲ ಘೋಷಿಸಿದೆ. ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸುವುದು ನಮ್ಮ ಪ್ರಮುಖ ಆದ್ಯತೆ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಭೇಟಿ ಮಾಡಿ ಪತ್ರ ನೀಡಲಾಗಿದೆ ಎಂದು ಜಾರ್ಖಂಡ್‌ನ ಉಸ್ತುವಾರಿ ಕೆ. ರಾಜು ಹೇಳಿದ್ದಾರೆ. ಇವೆಲ್ಲವುದರ ನಡುವೆ ಈಗಾಗಲೇ ಕೊಂಚ ಬಿಗಡಾಯಿಸುತ್ತಿರುವ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ನಂಟು ಇನ್ನಷ್ಟೂ ಬಿರುಕು ಕಾಣುತ್ತಾ ಎಂಬ ಪ್ರಶ್ನೆಗಳು ಎದ್ದಿವೆ.

- Advertisement -

ಜಾರ್ಖಂಡ್‌ನಲ್ಲಿ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆದ ಐತಿಹಾಸಿಕ ಜೆನ್‌-ಝೀ ಪ್ರತಿಭಟನೆಗೆ ಬೆಂಬಲ ನೀಡಿದ್ದ ಕಾಂಗ್ರೆಸ್ ತನ್ನ ಮೈತ್ರಿ ಸರ್ಕಾರವಿರುವೆಡೆ ವಿದ್ಯಾರ್ಥಿಗಳ ಪರವಾಗಿ ನಿಲ್ಲದಿದ್ದರೆ ಹೇಗೆ? ಈ ಬೆಳವಣಿಗೆಯು ಕಾಂಗ್ರೆಸ್ ಅನ್ನು ರಾಜಕೀಯವಾಗಿ ಇಕ್ಕಟ್ಟಿಗೆ ಸಿಲುಕಿಸಿತ್ತು. ಆದರೆ ಕೊನೆಗೂ ವಿದ್ಯಾರ್ಥಿಗಳ ಪರವಾಗಿಯೇ ನಿಲ್ಲುವ ನಿರ್ಧಾರಕ್ಕೆ ಬದ್ಧವಾಗಿರುವ ಕಾಂಗ್ರೆಸ್ ರಾಂಚಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಬೆಂಬಲ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಇದನ್ನೂ ಓದಿ: ಜಾರ್ಖಂಡ್‌ನಲ್ಲಿ ತೀವ್ರಗೊಂಡ ಯುವ ಪ್ರತಿಭಟನೆ; ಇಕ್ಕಟ್ಟಿನಲ್ಲಿ ಜೆಎಂಎಂ-ಕಾಂಗ್ರೆಸ್!

ಈ ಬಗ್ಗೆ ಜಾರ್ಖಂಡ್‌ನ ಕಾಂಗ್ರೆಸ್ ಉಸ್ತುವಾರಿ ಕೆ. ರಾಜು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಸಮಾಲೋಚಿಸಲು ಮತ್ತು ಪರಿಹಾರಗಳನ್ನು ಶಿಫಾರಸು ಮಾಡಲು ಸಚಿವರ ಸಮಿತಿಯನ್ನು ರಚಿಸಿದ್ದಕ್ಕಾಗಿ ಸಿಎಂ ಅವರಿಗೆ ಧನ್ಯವಾದ ಅರ್ಪಿಸಿದ್ದೇವೆ” ಎಂದೂ ತಿಳಿಸಿದ್ದಾರೆ. ಹಾಗೆಯೇ ರಾಂಚಿಯಲ್ಲಿ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗೆ ಕಾಂಗ್ರೆಸ್ ಬೆಂಬಲವಾಗಿ ನಿಂತಿದೆ ಎಂದು ಪ್ರತಿಪಾದಿಸಿದ್ದಾರೆ.

ಕಳೆದ ತಿಂಗಳು ಜಾರ್ಖಂಡ್ ರಾಜ್ಯಸಭೆ ಚುನಾವಣೆ ನಡೆದಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಜೆಎಂಎಂ ನಡುವೆ ಕೊಂಚ ಭಿನ್ನಾಭಿಪ್ರಾಯ ಆರಂಭವಾಗಿದೆ. ಜೆಎಂಎಂ ಸ್ಪರ್ಧಿಸಬೇಕು ಎಂದು ಹೇಳಿದ್ದ ಸ್ಥಾನದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದೇ ಈ ಭಿನ್ನಾಭಿಪ್ರಾಯಕ್ಕೆ ಕಾರಣ. ಉಭಯ ಪಕ್ಷಗಳ ಮೈತ್ರಿ ಗೊಂದಲದಿಂದಾಗಿ ಜೆಎಂಎಂನ ಕೆಲವು ಶಾಸಕರು ಅಡ್ಡಮತದಾನ ಮಾಡಿ ಕಾಂಗ್ರೆಸ್‌ ಸೋಲು ಕಂಡಿತು. ಸುಲಭವಾಗಿ ಗೆಲ್ಲಬಹುದಾಗಿದ್ದ ಎರಡೂ ಸ್ಥಾನಗಳನ್ನೂ ಕಳೆದುಕೊಂಡಿತು. ಈ ಅಸಮಾಧಾನವು ಇನ್ನೂ ಕಾದಕೆಂಡದಂತಿದೆ. ಇದೀಗ ಕಾಂಗ್ರೆಸ್ ಬಹಿರಂಗವಾಗಿ ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತಿರುವುದು ಮೈತ್ರಿಯಲ್ಲಿ ಇನ್ನಷ್ಟೂ ಬಿರುಕು ತರುತ್ತಾ ಅಥವಾ ಕಾಂಗ್ರೆಸ್ ಮಾತುಕತೆ ಮೂಲಕ ನಿಲುವನ್ನೂ ಸ್ಪಷ್ಟವಾಗಿ ತಿಳಿಸುವಲ್ಲಿ ಸಫಲವಾಗುತ್ತಾ ಕಾದುನೋಡಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...