ಜಾರ್ಖಂಡ್ | 3 ಪರೀಕ್ಷೆಗಳ ರದ್ದತಿಗೆ ಸರ್ಕಾರ ಒಪ್ಪಿಗೆ; ಉದ್ಯೋಗ ಸಮಿತಿ ಮೂವರು ಸದಸ್ಯರ ರಾಜೀನಾಮೆ

Date:

ಪರೀಕ್ಷಾ ಅಕ್ರಮಗಳ ವಿರುದ್ಧ ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಮಹತ್ವದ ಗೆಲುವು ದೊರೆತಿದೆ. ಸತತ 16 ದಿನಗಳ ಪ್ರತಿಭಟನೆಯ ಬಳಿಕ ವಿದ್ಯಾರ್ಥಿ ಸಂಘಟನೆಗಳೊಂದಿಗೆ ಸುಮಾರು ಆರು ಗಂಟೆಗಳ ಕಾಲ ಜಾರ್ಖಂಡ್ ಸರ್ಕಾರ ಮಾತುಕತೆ ನಡೆಸಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ನಡಸಿದ 14ನೇ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಸೇರಿದಂತೆ ಮೂರು ಪರೀಕ್ಷೆಗಳನ್ನು ರದ್ದುಗೊಳಿಸಲು ಒಪ್ಪಿಕೊಂಡಿದೆ. JPSC ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳು ಮತ್ತು ಅವುಗಳಲ್ಲಿ ಆರ್ಥಿಕ ಆಯಾಮದ ತನಿಖೆಗೆ ಜಾರಿ ನಿರ್ದೇಶನಾಲಯವನ್ನು (ED) ಒಳಗೊಳ್ಳಬೇಕೆಂಬ ವಿದ್ಯಾರ್ಥಿಗಳ ಬೇಡಿಕೆಗೂ ಸರ್ಕಾರ ಸಮ್ಮತಿಸಿದೆ.

- Advertisement -

ಅಲ್ಲದೆ, ಅಲ್ಲದೆ, ಜೆಪಿಎಸ್‌ಸಿಯ ಮೂವರು ಸದಸ್ಯರು ರಾಜೀನಾಮೆ ನೀಡಿದ್ದಾರೆ. JPSC ಸದಸ್ಯರಾದ ಅಜೀತಾ ಭಟ್ಟಾಚಾರ್ಯ, ಅನಿಮಾ ಹನ್ಸ್ಡಾ ಮತ್ತು ಜಮಾಲ್ ಅಹ್ಮದ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರು ಅವುಗಳನ್ನು ಅಂಗೀಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಆದರೆ, ಸರ್ಕಾರದ ಈ ನಿರ್ಧಾರಗಳ ಹೊರತಾಗಿಯೂ ವಿದ್ಯಾರ್ಥಿಗಳ ಹೋರಾಟ ಅಂತ್ಯಗೊಂಡಿಲ್ಲ. JSSC-CGL ಪರೀಕ್ಷೆಯ ಫಲಿತಾಂಶ ರದ್ದುಗೊಳಿಸಬೇಕು ಮತ್ತು ಪರೀಕ್ಷಾ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಆದೇಶಿಸಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿರುವ ಪ್ರತಿಭಟನಾಕಾರರು, ಆಗಸ್ಟ್ 10ರಂದು ನಿಗದಿಯಾಗಿರುವ ಜಾರ್ಖಂಡ್ ವಿಧಾನಸಭೆ ಚಲೋ ಕಾರ್ಯಕ್ರಮವನ್ನು ಮುಂದುವರಿಸುವುದಾಗಿ ಘೋಷಿಸಿದ್ದಾರೆ.

ರಾಂಚಿಯ ರಾಜ್ಯ ಅತಿಥಿಗೃಹದಲ್ಲಿ ನಡೆದ ಮಾತುಕತೆಯಲ್ಲಿ ಸಚಿವರಾದ ದೀಪಿಕಾ ಪಾಂಡೆ ಸಿಂಗ್, ಸಂಜಯ್ ಪ್ರಸಾದ್ ಯಾದವ್, ಚಮ್ರಾ ಲಿಂಡಾ ಮತ್ತು ತಾಂತ್ರಿಕ ಹಾಗೂ ಉನ್ನತ ಶಿಕ್ಷಣ ಸಚಿವ ಸುದಿವ್ಯ ಕುಮಾರ್ ಸೋನು ಅವರನ್ನೊಳಗೊಂಡ ಸರ್ಕಾರಿ ಸಮಿತಿ ಭಾಗವಹಿಸಿತ್ತು. ಎಐಎಸ್‌ಎ, JPSC-JSSC ಸುಧಾರಣಾ ಮಂಚ್ ಹಾಗೂ JPSC-JSSC ಅಭ್ಯರ್ಥಿ ನ್ಯಾಯ ಮಂಚ್ ಸೇರಿದಂತೆ ಪ್ರತಿಭಟನಾನಿರತ ವಿದ್ಯಾರ್ಥಿ ಸಂಘಟನೆಗಳ ಎರಡು ನಿಯೋಗಗಳೊಂದಿಗೆ ಸರ್ಕಾರ ಚರ್ಚೆ ನಡೆಸಿತು. ವಿದ್ಯಾರ್ಥಿಗಳು ಮುಂದಿಟ್ಟ ಬೇಡಿಕೆಗಳಲ್ಲಿ ಶೇ.98ರಷ್ಟನ್ನು ಸರ್ಕಾರ ಒಪ್ಪಿಕೊಂಡಿದೆ ಎಂದು ಸಚಿವ ಸುದಿವ್ಯ ಕುಮಾರ್ ಸೋನು ತಿಳಿಸಿದ್ದಾರೆ.

ಮಾತುಕತೆಯ ಪರಿಣಾಮವಾಗಿ JPSC ಬ್ಯಾಕ್‌ಲಾಗ್ 2023, JPSC ಬ್ಯಾಕ್‌ಲಾಗ್ 2025 ಹಾಗೂ 14ನೇ JPSC ಸಂಯೋಜಿತ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ರದ್ದುಗೊಳಿಸಲು ಸರ್ಕಾರ ಒಪ್ಪಿಕೊಂಡಿದೆ.

ಈ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಅಪರಾಧ ಆಯಾಮದ ತನಿಖೆಯನ್ನು ಸಿಐಡಿ ನಡೆಸಲಿದ್ದು, ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ಅಂಶಗಳನ್ನು ED ತನಿಖೆ ನಡೆಸಲಿದೆ ಎಂದು ಸರ್ಕಾರ ತಿಳಿಸಿದೆ. JPSC ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದಂತೆ ಇದುವರೆಗೆ 19 ಮಂದಿಯನ್ನು ಬಂಧಿಸಲಾಗಿದೆ.

CGL ಪರೀಕ್ಷೆ – ಮುಂದುವರಿದ ಬಿಕ್ಕಟ್ಟು

ಪ್ರತಿಭಟನಾನಿರತರ ಬಹುತೇಕ ಬೇಡಿಕೆಗಳನ್ನು ಸರ್ಕಾರ ಒಪ್ಪಿಕೊಂಡಿದ್ದರೂ, JSSC-CGL ಪರೀಕ್ಷೆಯ ವಿಷಯದಲ್ಲಿ ಬಿಕ್ಕಟ್ಟು ಮುಂದುವರಿದಿದೆ. CGL ಪರೀಕ್ಷೆಯ ಫಲಿತಾಂಶವನ್ನು ರದ್ದುಗೊಳಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ. ಆದರೆ, ಪರೀಕ್ಷೆಗೆ ಸಂಬಂಧಿಸಿದ ಪ್ರಕ್ರಿಯೆ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ನಡೆದಿರುವುದರಿಂದ ಸರ್ಕಾರ ಏಕಪಕ್ಷೀಯವಾಗಿ ಫಲಿತಾಂಶವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಈಗಾಗಲೇ ಈ ಪರೀಕ್ಷೆಯ ಆಧಾರದಲ್ಲಿ ಹಲವು ಅಭ್ಯರ್ಥಿಗಳು ಉದ್ಯೋಗಕ್ಕೆ ಸೇರಿಕೊಂಡಿದ್ದಾರೆ. ಯಾವುದೇ ಸೂಕ್ತ ಕಾನೂನಾತ್ಮಕ ಆಧಾರವಿಲ್ಲದೆ ಪರೀಕ್ಷೆಯನ್ನು ರದ್ದುಗೊಳಿಸಿದರೆ ಸರ್ಕಾರದ ನಿರ್ಧಾರವೇ ನ್ಯಾಯಾಂಗ ಪರಿಶೀಲನೆಗೆ ಒಳಗಾಗಬಹುದು ಎಂದು ಸರ್ಕಾರ ಹೇಳುತ್ತಿದೆ.

CGL ಪರೀಕ್ಷೆಯ ಕುರಿತು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ನ್ಯಾಯಾಂಗ ತನಿಖಾ ಸಮಿತಿ ರಚಿಸುವ ಪ್ರಸ್ತಾಪವನ್ನು ಸರ್ಕಾರ ಮುಂದಿಟ್ಟಿದೆ. ಆದರೆ, ಇದನ್ನು ಒಪ್ಪಿಕೊಳ್ಳದ ವಿದ್ಯಾರ್ಥಿಗಳು ಪರೀಕ್ಷೆಯನ್ನೇ ರದ್ದುಗೊಳಿಸಬೇಕು ಮತ್ತು ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಯಬೇಕು ಎಂದು ಪಟ್ಟು ಹಿಡಿದಿದ್ದಾರೆ.

‘ಲಾಠಿ-ಬಂದೂಕಿನಿಂದಲ್ಲ, ಮಾತುಕತೆಯಿಂದ ಪರಿಹಾರ’

ವಿದ್ಯಾರ್ಥಿಗಳ ಹೋರಾಟದ ನಡುವೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಹೇಮಂತ್ ಸೊರೇನ್, ಬಲಪ್ರಯೋಗದ ಬದಲಾಗಿ ಮಾತುಕತೆಯ ಮೂಲಕವೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದ್ದಾರೆ.

“ಗಡಿಯಲ್ಲಿರುವ ಶತ್ರುಗಳಿಗಾಗಿ ಆಯುಧಗಳನ್ನು ಕಾಯ್ದಿರಿಸಲಾಗಿದೆ. ಪರೀಕ್ಷಾ ಪ್ರತಿಭಟನಾಕಾರರಿಗೆ ಸಂಪೂರ್ಣ ಪಾರದರ್ಶಕತೆಯಿಂದ ನ್ಯಾಯ ದೊರಕಿಸುವ ಭರವಸೆ ನೀಡುತ್ತೇನೆ. ನ್ಯಾಯ ದೊರಕುವುದು ಮಾತ್ರವಲ್ಲ, ನ್ಯಾಯ ಸಿಕ್ಕಿದೆ ಎಂಬುದು ಕಾಣಿಸಲಿದೆ” ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳ ಚಳವಳಿಯನ್ನು ರಾಜಕೀಯಗೊಳಿಸಬಾರದು ಎಂದಿರುವ ಅವರು, “ರಾಜ್ಯದ ಸ್ವಾವಲಂಬನೆಯನ್ನು ಸಹಿಸದ ಕೆಲವು ಹಿತಾಸಕ್ತಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕದಡಲು ಪ್ರಯತ್ನಿಸುತ್ತಿವೆ” ಎಂದು ಆರೋಪಿಸಿದ್ದಾರೆ.

ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಕೂಡ ಪ್ರತಿಭಟನಾನಿರತ ವಿದ್ಯಾರ್ಥಿಗಳು ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೂ ಕ್ರಮ

ಪ್ರಸ್ತುತ ವಿವಾದಗಳನ್ನು ಬಗೆಹರಿಸುವುದರ ಜೊತೆಗೆ ಭವಿಷ್ಯದಲ್ಲಿ ನೇಮಕಾತಿ ಪರೀಕ್ಷೆಗಳನ್ನು ಹೆಚ್ಚು ಪಾರದರ್ಶಕಗೊಳಿಸಲು ಹಲವು ಕ್ರಮಗಳನ್ನು ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದೆ.

ಪರೀಕ್ಷಾ ವ್ಯವಸ್ಥೆಯ ಸುಧಾರಣೆ ಕುರಿತು ವಿದ್ಯಾರ್ಥಿಗಳು ಮತ್ತು ಅಭ್ಯರ್ಥಿಗಳಿಂದ ಸಲಹೆಗಳನ್ನು ಪಡೆಯಲು ಪ್ರತ್ಯೇಕ ಪೋರ್ಟಲ್ ಆರಂಭಿಸಲಾಗುವುದು. ದೀರ್ಘಕಾಲೀನ ಸುಧಾರಣೆಗಾಗಿ IIM ಮತ್ತು XLRIಯಂತಹ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ತಜ್ಞರ ನೆರವು ಪಡೆಯುವುದಾಗಿಯೂ ಸರ್ಕಾರ ತಿಳಿಸಿದೆ.

ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳ ವ್ಯವಸ್ಥೆ ರೂಪಿಸುವ ಮತ್ತು ನಿಗದಿತ ಅವಧಿಯೊಳಗೆ ತನಿಖಾ ವರದಿ ಪಡೆಯುವ ಪ್ರಸ್ತಾಪಕ್ಕೂ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಆದರೆ ಇಷ್ಟೆಲ್ಲ ಭರವಸೆಗಳ ಹೊರತಾಗಿಯೂ ವಿದ್ಯಾರ್ಥಿಗಳು ಹೋರಾಟವನ್ನು ಹಿಂಪಡೆಯಲು ಸಿದ್ಧರಿಲ್ಲ. “14ನೇ JPSC ಪರೀಕ್ಷೆ ರದ್ದುಪಡಿಸುವುದು ಸೇರಿದಂತೆ ನಮ್ಮ ಬಹುತೇಕ ಬೇಡಿಕೆಗಳನ್ನು ಸರ್ಕಾರ ಒಪ್ಪಿಕೊಂಡಿದೆ. ಆದರೆ ಸಿಬಿಐ ತನಿಖೆಯ ಬೇಡಿಕೆ ಈಡೇರುವವರೆಗೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ” ಎಂದು ವಿದ್ಯಾರ್ಥಿ ನಾಯಕ ರವೀಂದ್ರ ಪಾಸ್ವಾನ್ ಹೇಳಿದ್ದಾರೆ.

ಆಗಸ್ಟ್ 10ರಂದು ನಿಗದಿಯಾಗಿರುವ ಝಾರ್ಖಂಡ್ ವಿಧಾನಸಭೆಗೆ ಚಲೋ ಕೂಡ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ರದ್ದು, ಲೀಸ್‌ಗೆ ನೀಡಲು ಸಿಎಂ ಭರವಸೆ : ಶ್ರೀಮಂತ ಬಿರಾದರ್

ಬೀದರ್ ಜಿಲ್ಲೆಯ ರೈತರು‌, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ...

‘ದೇವರೇ ಈ ದೇಶವನ್ನು ಕಾಪಾಡಬೇಕು’: ರೈಲು ಪ್ರಯಾಣದ ಗದ್ದಲಕ್ಕೆ ಬೇಸತ್ತ ತೇಜಸ್ವಿ ಸೂರ್ಯ ಪತ್ನಿ

ರೈಲು ಪ್ರಯಾಣದ ವೇಳೆ ಸಹಪ್ರಯಾಣಿಕರ ಗದ್ದಲದಿಂದ ತೀವ್ರ ಕಿರಿಕಿರಿ ಅನುಭವಿಸಿರುವುದಾಗಿ ಬಿಜೆಪಿ...

ಬೀದರ್ | ಬರ ಪರಿಸ್ಥಿತಿ : ವಿಶೇಷ ಪ್ಯಾಕೇಜ್ ಘೋಷಿಸಲು ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ಬೆಳೆ...