ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಗೆ ಮಣಿದ ಜಾರ್ಖಂಡ್ ಸರ್ಕಾರ: JSSC-CGL ರದ್ದು; ತನಿಖೆಗೆ ಆದೇಶ

Date:

ಜಾರ್ಖಂಡ್ ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದ ಉದ್ಯೋಗಾಕಾಂಕ್ಷಿಗಳ ಮತ್ತು ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಗೆ ಕೊನೆಗೂ ಸರ್ಕಾರ ಮಣಿದಿದೆ. ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗದ ಪದವಿ ಹಂತದ ಸಂಯೋಜಿತ ಪರೀಕ್ಷೆ (JSSC-CGL) ಹಾಗೂ ಖಾಸಗಿ ಏಜೆನ್ಸಿಯಾದ TSR ಡೇಟಾ ಪ್ರೊಸೆಸಿಂಗ್ ಪ್ರೈವೇಟ್ ಲಿಮಿಟೆಡ್ (TDPL) ಮೂಲಕ ನಡೆಸಲಾದ ಎಲ್ಲಾ ಪರೀಕ್ಷೆಗಳು, ಅವುಗಳ ಫಲಿತಾಂಶಗಳು ಮತ್ತು ನೇಮಕಾತಿಗಳನ್ನು ರದ್ದುಗೊಳಿಸಲಾಗಿದೆ.

- Advertisement -

ರಾಜ್ಯ ಸಂಪುಟ ಸಭೆಯಲ್ಲಿ ಈ ಪ್ರಮುಖ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸುದೀರ್ಘ ಸಂಪುಟ ಸಭೆಯ ಬಳಿಕ ಈ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ವ್ಯಾಪಕ ಅಕ್ರಮಗಳು ಹಿನ್ನೆಲೆಯಲ್ಲಿ JSSC-CGL ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನೂ ಓದಿ: ಜಾರ್ಖಂಡ್ ವಿದ್ಯಾರ್ಥಿ ಪ್ರತಿಭಟನೆಗೆ ಬಂಗಾಳದಿಂದ ಬಿಜೆಪಿ ಕಾರ್ಯಕರ್ತರನ್ನು ಕಳಿಸಿದೆ; ಕಾಂಗ್ರೆಸ್ ಆರೋಪ

ಕಪ್ಪುಪಟ್ಟಿಗೆ ಸೇರಿಸಲ್ಪಟ್ಟ TDPL (TSR Data Processing Pvt Ltd) ಏಜೆನ್ಸಿ ಮೂಲಕ ನಡೆಸಲಾದ ಪ್ರತಿಯೊಂದು ಪರೀಕ್ಷೆ, ಪ್ರಕಟಿತ ಫಲಿತಾಂಶ ಹಾಗೂ ಮಾಡಲಾದ ನೇಮಕಾತಿಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. 2014ರಿಂದ ರಾಜ್ಯದಲ್ಲಿ ನಡೆದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿರುವ ಲೋಪದೋಷಗಳು ಹಾಗೂ ಅಕ್ರಮಗಳ ಕುರಿತು ವಿಶೇಷ ತನಿಖಾ ತಂಡ (SIT) ಮತ್ತು ಸಿಐಡಿ ಮೂಲಕ ಸಮಗ್ರ ತನಿಖೆ ನಡೆಸಲು ಮುಖ್ಯಮಂತ್ರಿ ಆದೇಶಿಸಿದ್ದಾರೆ.

ಭವಿಷ್ಯದಲ್ಲಿ ಪರೀಕ್ಷೆಗಳು ಪಾರದರ್ಶಕವಾಗಿ ನಡೆಯಲು ಹಿರಿಯ ಐಎಎಸ್ ಅಧಿಕಾರಿ ಅಮಿತಾಭ್ ಕೌಶಲ್ ಅವರ ನೇತೃತ್ವದಲ್ಲಿ ಪರೀಕ್ಷಾ ಸುಧಾರಣಾ ಸಮಿತಿಯನ್ನು ರಚಿಸಲಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ಸಲಹೆ ನೀಡಲು ಪ್ರತ್ಯೇಕ ವೆಬ್ ಪೋರ್ಟಲ್ ಅನ್ನೂ ತೆರೆಯಲಾಗಿದೆ.

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಡಿಜಿಟಲ್ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ಕಳೆದ 24 ದಿನಗಳಿಂದ ನಿರಂತರವಾಗಿ ನಡೆಸುತ್ತಿದ್ದ ಹೋರಾಟವು ರಾಜ್ಯಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗಸ್ಟ್ 20 ರಂದು ಮುಖ್ಯಮಂತ್ರಿಗಳ ನಿವಾಸ ಮುತ್ತಿಗೆ ಹಾಕಲು ಹಾಗೂ ಉಪವಾಸ ಸತ್ಯಾಗ್ರಹ ನಡೆಸಲು ಕರೆ ನೀಡಿದ್ದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಹ ಸಿಎಂ ಹೇಮಂತ್ ಸೊರೆನ್ ಅವರಿಗೆ ಪತ್ರ ಬರೆದು ವಿದ್ಯಾರ್ಥಿಗಳ ಬೇಡಿಕೆಗಳನ್ನು ಆಲಿಸುವಂತೆ ಮನವಿ ಮಾಡಿದ್ದರು.

ಸರ್ಕಾರದ ಈ ನಿರ್ಧಾರದಿಂದಾಗಿ ಪ್ರತಿಭಟನಾನಿರತ ಸಾವಿರಾರು ಆಕಾಂಕ್ಷಿಗಳು ಹಾಗೂ ವಿದ್ಯಾರ್ಥಿ ನಾಯಕರು ಸಂಭ್ರಮಾಚರಣೆ ನಡೆಸಿದ್ದಾರೆ. ಆದರೆ, ಸಿಬಿಐ ತನಿಖೆಗೆ ಆದೇಶಿಸದ ಕಾರಣ ಹಲವು ವಿದ್ಯಾರ್ಥಿ ನಾಯಕರು ತಮ್ಮ ಹೋರಾಟದ ಮುಂದಿನ ನಡೆ ಕುರಿತು ಚರ್ಚಿಸುತ್ತಿದ್ದಾರೆ. ಇನ್ನೊಂದೆಡೆ, ಈಗಾಗಲೇ ಆಯ್ಕೆಯಾಗಿ ಉದ್ಯೋಗಕ್ಕೆ ಸೇರಿದ್ದ ಅಭ್ಯರ್ಥಿಗಳು ಸರ್ಕಾರದ ಈ ದಿಢೀರ್ ನಿರ್ಧಾರದಿಂದ ಆಘಾತಕ್ಕೊಳಗಾಗಿದ್ದು, ನ್ಯಾಯಾಲಯದ ಬಾಗಿಲು ತಟ್ಟಲು ಸಿದ್ಧತೆ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...