ಜಾರ್ಖಂಡ್‌ | 16ನೇ ದಿನಕ್ಕೆ ಕಾಲಿಟ್ಟ ವಿದ್ಯಾರ್ಥಿಗಳ ಪ್ರತಿಭಟನೆ; ಮತ್ತೆ ಮಾತುಕತೆಗೆ ಮುಂದಾದ ಸರ್ಕಾರ

Date:

ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಹಾಗೂ ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (JSSC) ನಡೆಸಿದ ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಳೆದ 16 ದಿನಗಳಿಂದ ತೀವ್ರ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿ ಹೇಮಂತ್ ಸೊರೇನ್ ನೇತೃತ್ವದ ಸರ್ಕಾರ ಮತ್ತೆ ಮಾತುಕತೆ ನಡೆಸಲು ಮುಂದಾಗಿದೆ.

- Advertisement -

ಶುಕ್ರವಾರ ಮತ್ತು ಶನಿವಾರ ಸರ್ಕಾರದ ಐವರು ಸಚಿವರ ತಂಡ ಹಾಗೂ ವಿವಿಧ ವಿದ್ಯಾರ್ಥಿ ಸಂಘಟನೆಗಳ ನಡುವೆ ನಡೆದ ಐದಕ್ಕೂ ಹೆಚ್ಚು ಸುತ್ತಿನ ಸಂಧಾನ ಸಭೆಗಳು ಯಾವುದೇ ಅಂತಿಮ ನಿರ್ಧಾರವಿಲ್ಲದೆ ಅಂತ್ಯಗೊಂಡ ಹಿನ್ನೆಲೆಯಲ್ಲಿ, ಸಂಘರ್ಷ ಶಮನಕ್ಕಾಗಿ ಹೆಚ್ಚುವರಿ ಮಾತುಕತೆ ಆಯೋಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಇದನ್ನೂ ಓದಿ: ಜಾರ್ಖಂಡ್ ನೇಮಕಾತಿ ಅಕ್ರಮ: ಮಾತುಕತೆ ಮತ್ತೆ ವಿಫಲ, ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿಕೆ

ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದಲ್ಲಿ ಜುಲೈ 25ರಿಂದ ಸಾವಿರಾರು ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದಾರೆ. ಪ್ರತಿಭಟನೆಯ ನೇತೃತ್ವ ವಹಿಸಿರುವ ವಿದ್ಯಾರ್ಥಿ ನಾಯಕ ದೇವೇಂದ್ರ ನಾಥ್ ಮಹತೋ ಅವರ ಆಮರಣಾಂತ ಉಪವಾಸ ಸತ್ಯಾಗ್ರಹ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಅವರ ಆರೋಗ್ಯ ಸ್ಥಿತಿ ಏರುಪೇರಾಗಿದೆ.

ಅಕ್ರಮಗಳ ಆರೋಪಕ್ಕೊಳಗಾಗಿರುವ 14ನೇ ಜೆಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆ ಹಾಗೂ ಜೆಎಸ್‌ಎಸ್‌ಸಿ ಸಿಜಿಎಲ್ (JSSC-CGL) ಪರೀಕ್ಷೆಗಳನ್ನು ತಕ್ಷಣವೇ ರದ್ದುಗೊಳಿಸಬೇಕು. ಸಿಬಿಐ ಅಥವಾ ಜಾರ್ಖಂಡ್ ಹೊರಗಿನ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖೆ ನಡೆಸಬೇಕು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಮಾದರಿಯಲ್ಲಿ ‘ಜಾರ್ಖಂಡ್ ಪರೀಕ್ಷಾ ಸಂಸ್ಥೆ’ ರೂಪಿಸಬೇಕು ಮತ್ತು ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಬೇಕು. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಓಎಂಆರ್ ಶೀಟ್, ಉತ್ತರ ಪತ್ರಿಕೆ ಹಾಗೂ ಕಟ್-ಆಫ್ ಅಂಕಗಳನ್ನು ಬಹಿರಂಗಪಡಿಸಬೇಕು ಎಂಬುದು ವಿದ್ಯಾರ್ಥಿಗಳ ಆಗ್ರಹವಾಗಿದೆ.

ವಿದ್ಯಾರ್ಥಿಗಳ ಆಕ್ರೋಶಕ್ಕೆ ಸ್ಪಂದಿಸಿರುವ ಸರ್ಕಾರ, ತನಿಖೆಯನ್ನು ಚುರುಕುಗೊಳಿಸಿದ್ದು ಈವರೆಗೆ 19 ಮಂದಿಯನ್ನು ಬಂಧಿಸಿದೆ. ಜೊತೆಗೆ ಸುಧಾರಣೆಗಳ ಕುರಿತು ಸಲಹೆ ನೀಡಲು ಪ್ರತ್ಯೇಕ ಇಮೇಲ್ ಐಡಿಯನ್ನು ([email protected]) ಆರಂಭಿಸಿದೆ.

ಈ ನಡುವೆ ಜಿಪಿಎಸ್‌ಸಿ-ಜೆಎಸ್‌ಎಸ್‌ಸಿ ಸುಧಾರಣಾ ಮಂಚದ ನಾಯಕರು ಸರ್ಕಾರದ ಮಾತುಕತೆಯ ನಡೆಗಳನ್ನು “ವಿದ್ಯಾರ್ಥಿ ಒಕ್ಕೂಟವನ್ನು ಒಡೆಯುವ ಮತ್ತು ಹೋರಾಟದ ಹಾದಿ ತಪ್ಪಿಸುವ ರಾಜಕೀಯ ತಂತ್ರ” ಎಂದು ಆರೋಪಿಸಿದ್ದು, ಬೇಡಿಕೆಗಳು ಈಡೇರುವವರೆಗೂ ಹೋರಾಟ ಹಿಂಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸರ್ಕಾರದೊಂದಿಗೆ ನಡೆಯುವ ಸಂಧಾನ ಸಭೆಯಲ್ಲಿ ಸೂಕ್ತ ತೀರ್ಮಾನ ಹೊರಬಾರದಿದ್ದರೆ, ಆಗಸ್ಟ್ 10ರಂದು ಜಾರ್ಖಂಡ್ ವಿಧಾನಸೌಧಕ್ಕೆ ಬೃಹತ್ ಮುತ್ತಿಗೆ ಚಳವಳಿ ನಡೆಸುವುದಾಗಿ ವಿದ್ಯಾರ್ಥಿ ಸಂಘಟನೆಗಳು ಎಚ್ಚರಿಕೆ ನೀಡಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಗ್ರಾಮೀಣದಲ್ಲಿ ಕುಡಿಯುವ ನೀರಿನ ಸಮಸ್ಯೆಯೇ? ಹಾಗಾದ್ರೆ ಈ ನಂಬರ್‌ಗೆ ಕರೆ ಮಾಡಿ

ಬೀದರ್ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಸಂಬಂಧಿಸಿದ ಸಮಸ್ಯೆಗಳು...

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ ಹಾಕಿದ ಮಾಧ್ಯಮಗಳು

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ...

ಕಲಬುರಗಿಯಲ್ಲಿ ಸೆ.27ರಂದು ಬಸವಾದಿ ಶರಣರ ಹಿಂದೂ ಸಮಾವೇಶ : ಕನೇರಿ ಸ್ವಾಮೀಜಿಗೆ ಅನುಮತಿ ಬೇಡ

ಕಲಬುರಗಿಯಲ್ಲಿ ಸೆ. 27ರಂದು ಹಮ್ಮಿಕೊಳ್ಳಲಾಗಿರುವ ಕನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ...