ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಇಂದು ಸಂಜೆ 5 ಗಂಟೆಗೆ ಪ್ರಮಾಣ ವಚನ

Date:

ಜಾರ್ಖಂಡ್‌ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್‌ ಅವರು ಚಂಪೈ ಸೊರೇನ್‌ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ಅವರನ್ನು ಸರ್ಕಾರ ರಚಿಸಲು ಆಹ್ವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೇಮಂತ್‌ ಸೊರೇನ್‌ ಅವರು ಇಂದು ಸಂಜೆ 5 ಗಂಟೆಗೆ ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿಯಾದ ಸುಪ್ರಿಯೊ ಬಟ್ಟಾಚಾರ್ಯ ತಿಳಿಸಿದ್ದಾರೆ.

- Advertisement -

“ರಾಜ್ಯಪಾಲರು ನಮಗೆ ಸರ್ಕಾರ ರಚಿಸಲು ಹಾಗೂ ಪ್ರಮಾಣ ವಚನ ಸ್ವೀಕರಿಸಲು ಆಹ್ವಾನಿಸಿದ್ದಾರೆ.ಇದೇ ಸಂಪುಟದ ಜೊತೆ ಮುಖ್ಯಮಂತ್ರಿಯವರು ಇಂದು ಸಂಜೆ 5 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲು ನಿರ್ಧರಿಸಿದ್ದೇವೆ” ಎಂದು ಬಟ್ಟಾಚಾರ್ಯ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಐದು ತಿಂಗಳ ಹಿಂದಷ್ಟೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಚಂಪೈ ಸೊರೇನ್‌, ಹೇಮಂತ್‌ ಸೊರೇನ್‌ ಅವರಿಗೆ ಸಿಎಂ ಆಗಲು ಪುನಃ ಅವಕಾಶ ನೀಡುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ಮಳೆ ಹೊಯ್ಯುತಿದೆ, ಡೆಂಘೀ ಹರಡುತಿದೆ- ಆರೋಗ್ಯ ಇಲಾಖೆ ಏನು ಮಾಡುತ್ತಿದೆ?

ಜಾರ್ಖಂಡ್‌ ಮುಕ್ತಿ ಮೋರ್ಚಾದ ಕಾರ್ಯಕಾರಿ ಅಧ್ಯಕ್ಷರಾದ ಹೇಮಂತ್ ಸೊರೇನ್‌ ಭೂ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಜನವರಿಯಲ್ಲಿ ಬಂಧನಕ್ಕೊಳಗಾಗಿದ್ದರು. ಬಂಧನಕ್ಕೊಳಗಾಗುವ ಮುನ್ನ ಸಿಎಂ ಹುದ್ದೆಗೆ ಹೇಮಂತ್ ರಾಜೀನಾಮೆ ನೀಡಿದ್ದರು. ಜಾರ್ಖಂಡ್‌ ಹೈಕೋರ್ಟ್ ಜೂನ್‌ 28 ರಂದು ಹೇಮಂತ್‌ ಸೊರೇನ್‌ ಅವರಿಗೆ ಜಾಮೀನು ನೀಡಿತ್ತು.

ಪ್ರಕರಣದ ಒಟ್ಟಾರೆ ದೃಷ್ಟಿಕೋನದಲ್ಲಿ ನಿರ್ದಿಷ್ಟವಾಗಿ ಅಥವಾ ಪರೋಕ್ಷವಾಗಿ ಆರೋಪಿಯಾಗಿರುವವರು ಭೂಹಗರಣದಲ್ಲಿ ಭಾಗಿಯಾಗಿರುವಂತೆ ಕಂಡುಬಂದಿಲ್ಲ ಎಂದು ನ್ಯಾಯಾಧೀಶರು ಜಾಮೀನು ನೀಡುವ ಸಂದರ್ಭದಲ್ಲಿ ತಿಳಿಸಿದ್ದರು.

ಹೇಮಂತ್‌ ಸೊರೇನ್‌ ಮತ್ತೆ ಮುಖ್ಯಮಂತ್ರಿಯಾಗುತ್ತಿರುವ ಕ್ರಮವನ್ನು ಖಂಡಿಸಿರುವ ಬಿಜೆಪಿ ಇಂಡಿಯಾ ಒಕ್ಕೂಟದ ನಾಯಕರಿಗೆ ಅಧಿಕಾರದ ದಾಹ ಹೆಚ್ಚಾಗಿದೆ ಎಂದು ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...