ಜಾರ್ಖಂಡ್ | ಮುಂದಿನ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನ 26,000 ಶಾಲಾ ಶಿಕ್ಷಕರ ನೇಮಕಾತಿ ಪೂರ್ಣಗೊಳಿಸಲು ಹೈಕೋರ್ಟ್‌ ಆದೇಶ

Date:

ಶಾಲಾ ಶಿಕ್ಷಕರ ನೇಮಕಾತಿ ವಿಳಂಬದ ಬಗ್ಗೆ ರಾಜ್ಯ ಸರ್ಕಾರವನ್ನು ಜಾರ್ಖಂಡ್‌ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಮುಂಬರುವ ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲು 26,000 ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯನ್ನು ಪೂರ್ಣಗೊಳಿಸಲು ಆದೇಶಿಸಿದೆ.

- Advertisement -

ಕಳೆದ ವರ್ಷ ಜೂನ್‌ನಲ್ಲಿ ಅರ್ಥಶಾಸ್ತ್ರಜ್ಞ ಡಾ. ಜೀನ್ ಡ್ರೇಜ್, ಸಹ-ಅರ್ಜಿದಾರ ಪರನ್ ಅಮಿತಾವ ಅವರು ಸಲ್ಲಿಸಿದ್ದ ಪಿಐಎಲ್‌ಅನ್ನು ಹೈಕೋರ್ಟ್‌ ವಿಚಾರಣೆ ನಡೆಸಿದೆ. ಜಾರ್ಖಂಡ್‌ನ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ಗುರುತಿಸಿದೆ. ನೇಮಕಾತಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಪಿಐಎಲ್‌ನ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಎಂ.ಎಸ್ ರಾಮಚಂದ್ರ ರಾವ್, ಸರ್ಕಾರಿ ಶಾಲೆಗಳಲ್ಲಿ 26,000 ಬೋಧನಾ ಹುದ್ದೆಗಳು ಖಾಲಿ ಇವೆ. ಅವುಗಳಿಗೆ ನೇಮಕಾತಿಯನ್ನು ತ್ವರಿತಗೊಳಿಸಬೇಕು. ನೇಮಕಾತಿ ಪ್ರಕ್ರಿಯೆಯು ನ್ಯಾಯಯುತ, ಪಾರದರ್ಶಕ ಹಾಗೂ ಸೂಕ್ತ ಸಮಯದಲ್ಲಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ‘ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ’ (ಜೆಎಸ್‌ಎಸ್‌ಸಿ) ಮತ್ತು ಇತರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಈ ವರದಿ ಓದಿದ್ದೀರಾ?: ಜಾತಿಗಣತಿ ವರದಿ ವಿರೋಧಿಸುತ್ತಿರುವ ಜಾತಿವಾದಿ ಲಿಂಗಾಯತರು

ಹಿಂದಿನ ವಿಚಾರಣೆ ವೇಳೆ ಜೆಎಸ್‌ಎಸ್‌ಸಿ ಪ್ರತಿ-ಅಫಿಡವಿಟ್‌ ಸಲ್ಲಿಸಿತ್ತು. ಒಂದು ವರ್ಷದ ಕಾಲಮಿತಿ ಕೋರಿತ್ತು. JSSC ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಸಹಾಯಕ್ ಆಚಾರ್ಯ (6 ರಿಂದ 8ನೇ ತರಗತಿಗಳಿಗೆ ಪದವಿ ತರಬೇತಿ ಪಡೆದ ಶಿಕ್ಷಕರು ಮತ್ತು 1 ರಿಂದ 5ನೇ ತರಗತಿಗಳಿಗೆ ಮಧ್ಯಂತರ ತರಬೇತಿ ಪಡೆದ ಶಿಕ್ಷಕರು) ಪರೀಕ್ಷೆಗಳನ್ನು ನಡೆಸಿದ್ದರೂ, ಉರ್ದು, ಕುರ್ಮಾಲಿ, ಪಂಚ ಪರ್ಗಾನಿಯಾ ಹಾಗೂ ಹೋ ವಿಷಯಗಳಿಗೆ ಮರು-ಪರೀಕ್ಷೆಗಳನ್ನು ನಡೆಸಬೇಕಾಗಿದೆ. ಈ ಎಲ್ಲ ಕಾರಣಗಳಿಂದಾಗಿ 11,000 ಮಧ್ಯಂತರ ತರಬೇತಿ ಪಡೆದ ಮತ್ತು 15,001 ಪದವಿ ತರಬೇತಿ ಪಡೆದ ಶಿಕ್ಷಕರ ನೇಮಕಾತಿಗಳನ್ನು ಪೂರ್ಣಗೊಳಿಸಲು ನಿರೀಕ್ಷಿತ ಕಾಲಮಿತಿ 2026ರ ಜನವರಿಯಾಗಿದೆ ಎಂದು ಅಫಿಡವಿಟ್‌ನಲ್ಲಿ ಹೇಳಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ಭುಗಿಲೆದ್ದ ಆಕ್ರೋಶ; ತೀವ್ರಗೊಂಡ ಮೋಶಾ ದಮನ ಕ್ರಮಗಳು

ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌...

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...