ಭಾರತೀಯ ನ್ಯಾಯ ಸಂಹಿತೆಯ ಮುದ್ರಿತ ಆವೃತ್ತಿಯಲ್ಲಿ ‘ದೋಷ’ ಗುರುತಿಸಿದ ಜಾರ್ಖಂಡ್ ಹೈಕೋರ್ಟ್

Date:

ನೂತನವಾಗಿ ಜಾರಿಯಾದ ಮೂರು ಕ್ರಿಮಿನಲ್ ಕಾನೂನುಗಳಲ್ಲಿ ಒಂದಾದ ಭಾರತೀಯ ನ್ಯಾಯ ಸಂಹಿತೆಯಲ್ಲಿ (ಬಿಎನ್‌ಎಸ್‌) ಇರುವ ದೋಷವನ್ನು ಜಾರ್ಖಂಡ್ ಹೈಕೋರ್ಟ್ ಬೊಟ್ಟು ಮಾಡಿದೆ. ಯುನಿವರ್ಸಲ್ ಲೆಕ್ಸಿಸ್‌ನೆಕ್ಸಿಸ್ ಆವೃತ್ತಿಯಲ್ಲಿನ ದೋಷವನ್ನು ಸ್ವಯಂ ಪ್ರೇರಿತವಾಗಿ ಗ್ರಹಿಸಿದೆ.

- Advertisement -

ಜಾರ್ಖಂಡ್ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಆನಂದ ಸೇನ್ ಮತ್ತು ಸುಭಾಷ್ ಚಂದ್ ಅವರ ಪೀಠವು ಭಾರತೀಯ ನ್ಯಾಯ ಸಂಹಿತೆಯ ಒಂದು ಆವೃತ್ತಿಯಲ್ಲಿ ಗುಂಪು ಹತ್ಯೆ (lynching) ಸಂಬಂಧಿಸಿದ ನಿಬಂಧನೆ ಸೆಕ್ಷನ್ 103 (2) ಅನ್ನು ತಪ್ಪಾಗಿ ಉಲ್ಲೇಖಿಸಲಾಗಿದೆ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಹೊಸ ಕಾನೂನಿನ ಪರಿಚ್ಛೇದ 103 (2) ರಲ್ಲಿ “ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳ ಗುಂಪು ಜನಾಂಗ, ಜಾತಿ ಅಥವಾ ಸಮುದಾಯ, ಲಿಂಗ, ಹುಟ್ಟಿದ ಸ್ಥಳ, ಭಾಷೆ, ವೈಯಕ್ತಿಕ ನಂಬಿಕೆ ಅಥವಾ ಯಾವುದೇ ಇತರೆ ಈ ರೀತಿಯ ಆಧಾರದ ಮೇಲೆ ಕೊಲೆ ಮಾಡಿದಾಗ ಅಂತಹ ಗುಂಪಿನ ಪ್ರತಿಯೊಬ್ಬ ಸದಸ್ಯನಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗುತ್ತದೆ ಮತ್ತು ದಂಡಕ್ಕೆ ಸಹ ಹೊಣೆಗಾರನಾಗಿರುತ್ತಾರೆ” ಎಂದು ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ?  ಬಲವಂತವಾಗಿ ಕ್ರಿಮಿನಲ್ ಕಾನೂನುಗಳ ಜಾರಿ, ‘ಬುಲ್ಡೋಜರ್ ನ್ಯಾಯ’ ಒಪ್ಪಲ್ಲ: ಖರ್ಗೆ

ಆದರೆ ಯುನಿವರ್ಸಲ್ ಲೆಕ್ಸಿಸ್‌ನೆಕ್ಸಿಸ್ ಆವೃತ್ತಿಯಲ್ಲಿ, ‘ಯಾವುದೇ ಇತರೆ ಈ ರೀತಿಯ ಆಧಾರದ ಮೇಲೆ’ (any other similar ground) ಬದಲಿಗೆ ‘ಇತರೆ ರೀತಿಯ ಆಧಾರದ ಮೇಲೆ’ (any other ground) ಎಂದು ಬಳಸಲಾಗಿದೆ. ದೋಷವು ‘ಗಂಭೀರ ಪರಿಣಾಮಗಳನ್ನು’ ಉಂಟುಮಾಡಬಹುದು ಎಂದು ಹೇಳಿದ ಪೀಠವು ರಾಷ್ಟ್ರೀಯ ಮತ್ತು ಪ್ರಾದೇಶಿಕ ಪತ್ರಿಕೆಗಳಲ್ಲಿ ಕಾರಿಜೆಂಡಮ್ (ತಿದ್ದೋಲೆ) ಅನ್ನು ಪ್ರಕಟಿಸಲು ಪ್ರಕಾಶಕರಿಗೆ ನಿರ್ದೇಶಿಸಿದೆ.

ಜಾರ್ಖಂಡ್ ಹೈಕೋರ್ಟ್

ಈ ಹಿಂದಿನ ಕ್ರಿಮಿನಲ್ ಕಾನೂನುಗಳಾದ ಭಾರತೀಯ ದಂಡ ಸಂಹಿತೆ (ಐಪಿಸಿ), ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ), ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಯ ಬದಲಿಗೆ ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ 2023 ಎಂಬ ಹೊಸ ಕಾನೂನುಗಳನ್ನು ಜಾರಿ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...