ಬಾಲಕಿ ಅತ್ಯಾಚಾರ, ಕೊಲೆ: ಸುವೋ ಮೋಟೋ ದೂರು ದಾಖಲಿಸಿಕೊಂಡ ಜಾರ್ಖಂಡ್ ಹೈಕೋರ್ಟ್

Date:

ಹಜಾರಿಬಾಗ್‌ನಲ್ಲಿ ನಡೆದ ಬಾಲಕಿ ಅತ್ಯಾಚಾರ, ಕೊಲೆ ಸಂಬಂಧಿಸಿ ಜಾರ್ಖಂಡ್ ಹೈಕೋರ್ಟ್ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದೆ. ಸೋಮವಾರ ಸ್ವಯಂಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಂಡ ಹೈಕೋರ್ಟ್, ರಾಜ್ಯ ಗೃಹ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಮತ್ತು ಹಜಾರಿಬಾಗ್ ಪೊಲೀಸ್ ವರಿಷ್ಠಾಧಿಕಾರಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.

- Advertisement -

ಹಾಗೆಯೇ ಆರೋಪಿಗಳನ್ನು ಬಂಧಿಸುವಲ್ಲಿನ ವಿಳಂಬದ ಬಗ್ಗೆಯೂ ನ್ಯಾಯಾಲಯವು ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಸಂತ್ರಸ್ತೆಯ ಭದ್ರತೆ ನೀಡುವಂತೆ ಅಧಿಕಾರಿಳಿಗೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಪ್ರಚೋದನಾಕಾರಿ ಪೋಸ್ಟ್​ ಹಂಚಿಕೆ: ಪೊಲೀಸರ ವಶಕ್ಕೆ ವಿಎಚ್‌ಪಿ ಮುಖಂಡ ಶರಣ್​ ಪಂಪ್​ವೆಲ್

ಇದಕ್ಕೂ ಮೊದಲು, ವಕೀಲ ಹೇಮಂತ್ ಶಿಕಾರ್ವಾರ್ ಅವರು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಘಟನೆಯನ್ನು ದೆಹಲಿ ‘ನಿರ್ಭಯಾ’ ಪ್ರಕರಣಕ್ಕೆ ಹೋಲಿಸಿದ್ದರು. ಅಪರಾಧಿಗಳು ಕ್ರೌರ್ಯದ ಎಲ್ಲಾ ಮಿತಿಗಳನ್ನು ದಾಟಿದ್ದಾರೆ ಎಂದು ವಾದಿಸಿದರು. ಈ ವೇಳೆ ಅಪರಾಧವನ್ನು ಮಾನವೀಯತೆಯನ್ನು ನಾಚಿಕೆಪಡಿಸುವ ಘೋರ ಕೃತ್ಯ ಎಂದು ಕರೆದ ನ್ಯಾಯಾಲಯವು ತನಿಖೆಯ ಬಗ್ಗೆ ವಿವರವಾದ ವರದಿಯನ್ನು ನೀಡುವಂತೆ ಹಜಾರಿಬಾಗ್ ಎಸ್‌ಪಿಗೆ ಆದೇಶಿಸಿದೆ.

ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ, ವಿಧಿವಿಜ್ಞಾನ ತಂಡ ಮತ್ತು ಶ್ವಾನ ದಳದ ಸಹಾಯದಿಂದ ಪ್ರಮುಖ ಸಾಕ್ಷ್ಯಗಳನ್ನು ಸಂಗ್ರಹಿಸಿವೆ ಎಂದು ಎಸ್‌ಪಿ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ಡಿಜಿಪಿ ತದಾಶ ಮಿಶ್ರಾ ಅವರ ನಿರ್ದೇಶನದ ಮೇರೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದ್ದು, ಪ್ರಕರಣವನ್ನು ಸಕ್ರಿಯವಾಗಿ ತನಿಖೆ ನಡೆಸುತ್ತಿದೆ. ಆರೋಪಿಗಳನ್ನು ಶೀಘ್ರದಲ್ಲೇ ಗುರುತಿಸಿ ಬಂಧಿಸಲಾಗುವುದು ಎಂದೂ ಹೇಳಿದ್ದಾರೆ.

ಆದರೆ ಘಟನೆ ನಡೆದು ಆರು ದಿನಗಳಾದರೂ ಅಪರಾಧಿಗಳನ್ನು ಬಂಧಿಸದಿರುವುದು ಗಂಭೀರ ಕಳವಳಕಾರಿ ವಿಷಯ ಎಂದು ಕೋರ್ಟ್ ಅಭಿಪ್ರಾಯಿಸಿದೆ.

ರಾಮ ನವಮಿಯ ಸಂಜೆ ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಮಂಗಳ ಶೋಭಾಯಾತ್ರೆ ನಡೆಯುತ್ತಿತ್ತು. ಈ ಮೆರವಣಿಗೆಯನ್ನು ವೀಕ್ಷಿಸಲು ಹೋದ ಬಾಲಕಿ ಹಿಂತಿರುಗಿ ಬಂದಿರಲಿಲ್ಲ. ರಾತ್ರಿಯಿಡೀ ಹುಡುಕಾಟದ ನಂತರ, ಮರುದಿನ ಗ್ರಾಮದ ಬಳಿಯ ಪೊದೆಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು.

ತನಿಖೆಯ ವೇಳೆ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ತಿಳಿದುಬಂದಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಯಿತು. ಸ್ಥಳೀಯರು ಪ್ರತಿಭಟನೆ ನಡೆಸಿದರು. ಬಿಜೆಪಿ ಸೋಮವಾರ ಹಜಾರಿಬಾಗ್‌ನಲ್ಲಿ ಬಂದ್‌ಗೆ ಕರೆ ನೀಡಿದೆ. ಜನರು ಸ್ವಯಂಪ್ರೇರಿತ ಪ್ರತಿಭಟನೆಗೆ ಬೆಂಬಲ ನೀಡಿದ್ದರಿಂದ ಮಾರುಕಟ್ಟೆಗಳು ಮುಚ್ಚಿದ್ದವು ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...