ಜಾರ್ಖಂಡ್‌ ಪ್ರತಿಭಟನೆ | ಪೊಲೀಸರ ಮೇಲೆ ಕಲ್ಲು ತೂರಿದ್ದು ಬಿಜೆಪಿ ಕಾರ್ಯಕರ್ತರೇ?; ಕಾಂಗ್ರೆಸ್‌ ಆರೋಪವೇನು?

Date:

ಜಾರ್ಖಂಡ್‌ನ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ 17ನೇ ದಿನಕ್ಕೆ ಕಾಲಿಟ್ಟಿದ್ದು, ಸೋಮವಾರ ವಿಧಾನಸಭೆ ಮುತ್ತಿಗೆ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಜಲಫಿರಂಗಿ, ಅಶ್ರುವಾಯು ಹಾಗೂ ಲಾಠಿಚಾರ್ಜ್ ಪ್ರಯೋಗಿಸಿದ್ದಾರೆ. ಇದೇ ವೇಳೆ, ಪ್ರತಿಭಟನೆಯ ವೇಳೆ ಕಲ್ಲು ತೂರಾಟ ನಡೆಸಿ ಗದ್ದಲಕ್ಕೆ ಕಾರಣರಾದವರನ್ನು ಗುರುತಿಸಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

- Advertisement -

ಇದೇ ವೇಳೆ, ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ನುಸುಳಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪಶ್ಚಿಮ ಬಂಗಾಳದಿಂದ ಬಿಜೆಪಿ ಯುವ ಮೋರ್ಚಾ ಸದಸ್ಯರನ್ನು ಸುಮಾರು 15 ಟೆಂಪೋ ಟ್ರಕ್‌ಗಳಲ್ಲಿ ರಾಂಚಿಗೆ ಕರೆತಂದು ವಿದ್ಯಾರ್ಥಿಗಳ ಪ್ರತಿಭಟನೆಯೊಳಗೆ ನುಸುಳಿಸಲಾಗಿದೆ ಮತ್ತು ಶಾಂತಿಯುತ ಹೋರಾಟವನ್ನು ಹಿಂಸಾತ್ಮಕಗೊಳಿಸಲು ಪ್ರಯತ್ನಿಸಲಾಗಿದೆ ಎಂಬ ಆರೋಪವನ್ನೂ ಕಾಂಗ್ರೆಸ್ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಈ ಆರೋಪಕ್ಕೆ ಸಂಬಂಧಿಸಿದ ಕೆಲವು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಕಲ್ಲು ತೂರಾಟ ಹಾಗೂ ಗದ್ದಲಕ್ಕೆ ಕಾರಣರಾದವರನ್ನು ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಗುರುತಿಸುವುದಾಗಿ ಪೊಲೀಸರು ಹೇಳಿದ್ದಾರೆ.

ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (JSSC) ನಡೆಸಿದ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಸೋಮವಾರ ಸಾವಿರಾರು ವಿದ್ಯಾರ್ಥಿಗಳು ‘ವಿಧಾನಸಭೆ ಮುತ್ತಿಗೆ’ ಪ್ರತಿಭಟನೆಯ ಭಾಗವಾಗಿ ವಿಧಾನಸಭೆಯತ್ತ ಮೆರವಣಿಗೆ ನಡೆಸಿದರು. ಪ್ರತಿಭಟನಾಕಾರರು ಹಲವು ಬ್ಯಾರಿಕೇಡ್‌ಗಳನ್ನು ದಾಟಿ ಮುಂದೆ ಸಾಗಿದ ಬಳಿಕ ಪೊಲೀಸರು ಅವರನ್ನು ತಡೆಯಲು ಮುಂದಾದರು.

ರಾಂಚಿ ಎಸ್‌ಎಸ್‌ಪಿ ರಾಕೇಶ್ ರಂಜನ್ ಪ್ರಕಾರ, ಪ್ರತಿಭಟನಾಕಾರರು ಮಾರ್ಗ ತೆರವುಗೊಳಿಸುವಂತೆ ಪೊಲೀಸರು ಮತ್ತು ಮ್ಯಾಜಿಸ್ಟ್ರೇಟ್‌ಗಳು ನೀಡಿದ ಮನವಿಗಳಿಗೆ ಸ್ಪಂದಿಸಲಿಲ್ಲ. ಕೆಲವರು ಬ್ಯಾರಿಕೇಡ್‌ಗಳನ್ನು ಹಾನಿಗೊಳಿಸಿ, ವಾಹನಗಳನ್ನು ತಡೆಯಲು ಪ್ರಯತ್ನಿಸಿದರು. ಪೊಲೀಸರತ್ತ ಕಲ್ಲು, ಚಪ್ಪಲಿ ಸೇರಿದಂತೆ ವಸ್ತುಗಳನ್ನು ಎಸೆದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಪ್ರತಿಭಟನೆಯ ವೇಳೆ 14 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಒಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಗತ್ಯವಿದ್ದಷ್ಟು ಕನಿಷ್ಠ ಬಲವನ್ನಷ್ಟೇ ಬಳಸಿದ್ದಾರೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ. ಪ್ರತಿಭಟನೆಯನ್ನು ಅಡ್ಡಿಪಡಿಸಿದವರನ್ನು ಗುರುತಿಸಲು ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

ರಾಂಚಿ ಜಿಲ್ಲಾಧಿಕಾರಿ ಮಂಜುನಾಥ್ ಭಜನ್ತ್ರಿ ಕೂಡ ಪೊಲೀಸ್ ಕ್ರಮವನ್ನು ಸಮರ್ಥಿಸಿದ್ದಾರೆ. ಪ್ರತಿಭಟನೆಯ ವೇಳೆ ಒಬ್ಬ ಪೊಲೀಸ್ ಸಿಬ್ಬಂದಿಯ ಮೇಲೆ ಕಲ್ಲು ಎಸೆಯಲಾಗಿದ್ದು, ಮತ್ತೊಬ್ಬ ಸಿಬ್ಬಂದಿ ಜನರ ಗುಂಪಿನಲ್ಲಿ ಸಿಲುಕಿ ಜೀವಕ್ಕೆ ಅಪಾಯ ಎದುರಿಸಿದ್ದರು. ಅವರನ್ನು ರಕ್ಷಿಸಲು ಪೊಲೀಸರು ಲಘು ಬಲ ಪ್ರಯೋಗಿಸಬೇಕಾಯಿತು ಎಂದು ಅವರು ಹೇಳಿದ್ದಾರೆ. ವಿಧಾನಸಭೆಯತ್ತ ಸಾಗುವ ಮಾರ್ಗವನ್ನು ತೆರವುಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಪ್ರತಿಭಟನಾಕಾರರು ನಿರಾಕರಿಸಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ತರಲು ಬಲಪ್ರಯೋಗ ಮಾಡಲಾಯಿತು ಎಂದು ತಿಳಿಸಿದ್ದಾರೆ.

ಆದರೆ ಪ್ರತಿಭಟನಾಕಾರರು ಪೊಲೀಸರ ಆರೋಪವನ್ನು ತಳ್ಳಿಹಾಕಿದ್ದಾರೆ. ಯಾವುದೇ ಮುನ್ನೆಚ್ಚರಿಕೆ ನೀಡದೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ ಎಂದು ಆರೋಪಿಸಿರುವ ಅವರು, ಪ್ರತಿಭಟನೆಯಲ್ಲಿ ಸುಮಾರು 100 ಯುವಕರನ್ನು ಪೊಲೀಸರು ಥಳಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ನಾಯಕರೇ ಇಲ್ಲದ ಚಳವಳಿ ಎನ್ನುವುದೂ ಒಂದು ರಾಜಕಾರಣವೇ’: ಐಸಾ ಅಧ್ಯಕ್ಷೆ ನೇಹಾ ಬೋರಾ

ಇತ್ತ ವಿದ್ಯಾರ್ಥಿಗಳು ತಮ್ಮ ಹೋರಾಟ ಯಾವುದೇ ರಾಜಕೀಯ ಪಕ್ಷಕ್ಕೆ ಸಂಬಂಧಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ಬೇಡಿಕೆಗಳನ್ನು ಬೆಂಬಲಿಸುವ ಯಾರನ್ನಾದರೂ ಸ್ವಾಗತಿಸುತ್ತೇವೆ, ಆದರೆ ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ವಿದ್ಯಾರ್ಥಿ ನಾಯಕ ಪಿಯೂಷ್ ಹೇಳಿದ್ದಾರೆ. ತಮ್ಮ ಏಕೈಕ ಉದ್ದೇಶ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳ ಕುರಿತು ಕ್ರಮ ಕೈಗೊಳ್ಳುವುದು ಮತ್ತು ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳುವುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಒಂಬತ್ತು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರತಿಭಟನಾಕಾರ ದೇವೇಂದ್ರ ನಾಥ್ ಮಹತೋ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಜಾರ್ಖಂಡ್ ಆರೋಗ್ಯ ಸಚಿವರ ಕಚೇರಿ ತಿಳಿಸಿದೆ.

ವಿದ್ಯಾರ್ಥಿಗಳ ಹೋರಾಟ ಮುಂದುವರಿದಿರುವ ಬೆನ್ನಲ್ಲೇ, ಪ್ರತಿಭಟನೆಯ ವೇಳೆ ನಡೆದ ಕಲ್ಲು ತೂರಾಟಕ್ಕೆ ಯಾರು ಕಾರಣ ಎಂಬುದನ್ನು ಸಿಸಿಟಿವಿ ಪರಿಶೀಲನೆಯ ಬಳಿಕ ಪೊಲೀಸರು ಸ್ಪಷ್ಟಪಡಿಸುವ ಸಾಧ್ಯತೆಯಿದೆ. ಮತ್ತೊಂದೆಡೆ, ಪೊಲೀಸ್ ಲಾಠಿಚಾರ್ಜ್ ಕುರಿತು ವಿದ್ಯಾರ್ಥಿಗಳ ಆರೋಪವೂ ಮುಂದುವರಿದಿದ್ದು, ಘಟನೆ ಇದೀಗ ರಾಜಕೀಯ ಆರೋಪ-ಪ್ರತ್ಯಾರೋಪಕ್ಕೂ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...