‌ಜಾರ್ಖಂಡ್‌ ನೇಮಕಾತಿ ಅಕ್ರಮ | ಮಕ್ಕಳನ್ನು ಮಡಿಲಲ್ಲಿಟ್ಟುಕೊಂಡೇ ಪ್ರತಿಭಟನೆಗೆ ಕೂತಿರುವ ಮಹಿಳೆಯರು

Date:

ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಹೋರಾಟ ರಾಷ್ಟ್ರದ ಗಮನ ಸೆಳೆದಿರುವ ಬೆನ್ನಲ್ಲೇ, ಜಾರ್ಖಂಡ್‌ನಲ್ಲೂ ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿನ ಅಕ್ರಮಗಳ ವಿರುದ್ಧ ಸಾವಿರಾರು ಉದ್ಯೋಗಾಕಾಂಕ್ಷಿಗಳು ಬೀದಿಗಿಳಿದಿದ್ದಾರೆ. ಹಸಿವಿನಿಂದ ನರಳುತ್ತಿರುವ ಪ್ರತಿಭಟನಾಕಾರರು, ಮಡಿಲಲ್ಲಿ ಮಕ್ಕಳನ್ನು ಹೊತ್ತುಕೊಂಡ ತಾಯಂದಿರು, ದಶಕದಿಂದ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಹಗಲು ರಾತ್ರಿ ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ.

- Advertisement -

ಲೋಹಾರ್ಡಗಾದ 40 ವರ್ಷದ ಆನಂದಿ ಕುಮಾರಿ ತಮ್ಮ ಎರಡೂವರೆ ವರ್ಷದ ಮಗಳನ್ನು ಕರೆದುಕೊಂಡೇ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಬಾಲಕಿ ಆಗಾಗ “ಮಮ್ಮಿ, ಮನೆಗೆ ಹೋಗೋಣ” ಎಂದು ಕೇಳುತ್ತಿದ್ದರೂ, “ನ್ಯಾಯ ಸಿಗುವವರೆಗೆ ಇಲ್ಲಿಂದ ಹೋಗುವುದಿಲ್ಲ” ಎಂದು ಆನಂದಿ ದೃಢವಾಗಿ ಹೇಳಿದ್ದಾರೆ. “ಹತ್ತು ವರ್ಷ ಕಳೆದಿವೆ. ಈಗ ಬೇರೆ ಯಾವುದೇ ಸರ್ಕಾರಿ ಉದ್ಯೋಗ ಪರೀಕ್ಷೆ ಬರೆಯುವ ವಯಸ್ಸನ್ನೂ ದಾಟಿದ್ದೇನೆ. ಆದರೂ ನ್ಯಾಯಕ್ಕಾಗಿ ಹೋರಾಟ ನಿಲ್ಲಿಸುವುದಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದ ಆವರಣದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಏಳು ಮಂದಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರಲ್ಲಿ ರಾಮಗಢದ 30 ವರ್ಷದ ಬ್ರಹ್ಮಾನಂದ್ ಕುಮಾರ್ ಮಹತೋ ಪ್ರಮುಖರು. ಬಿಳಿ ಅಂಗಿ ಧರಿಸಿ ಮಳೆಯಲ್ಲಿ ನೆನೆಯುತ್ತಾ, ನೆಲದ ಮೇಲೆ ಚಾಪೆ ಹಾಕಿಕೊಂಡು ಮಲಗಿರುವ ಮಹತೋ ಅವರ ಆರೋಗ್ಯವನ್ನು ವೈದ್ಯರು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ. “ಜೀವನದಲ್ಲಿ ಮೊದಲ ಬಾರಿಗೆ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದೇನೆ. ನ್ಯಾಯ ಸಿಗುವವರೆಗೂ ಇಲ್ಲಿಂದ ಎದ್ದೇಳುವುದಿಲ್ಲ” ಎಂದು ಹೇಳಿದ್ದಾರೆ.

ಜಾರ್ಖಂಡ್ ಲೋಕಸೇವಾ ಆಯೋಗ (JPSC) ನಡೆಸಿದ 14ನೇ ಸಂಯುಕ್ತ ನಾಗರಿಕ ಸೇವಾ ಪೂರ್ವ ಪರೀಕ್ಷೆಯಲ್ಲಿ ಸುಮಾರು 3.5 ಲಕ್ಷ ಅಭ್ಯರ್ಥಿಗಳು ಭಾಗವಹಿಸಿದ್ದರು. 103 ಹುದ್ದೆಗಳಿಗೆ 2,204 ಮಂದಿಯನ್ನು ಮುಖ್ಯ ಪರೀಕ್ಷೆಗೆ ಆಯ್ಕೆ ಮಾಡಲಾಗಿತ್ತು. ಆದರೆ ಫಲಿತಾಂಶ ಪ್ರಕಟವಾದ ಕೆಲವೇ ದಿನಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದವು.

ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆಗಳು ಆರಂಭವಾಗಿದ್ದು, ಸರ್ಕಾರ ಈಗಾಗಲೇ 16 ಮಂದಿಯನ್ನು ಬಂಧಿಸಿದೆ. ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿದ್ಯಾರ್ಥಿಗಳ ಪರ ಸರ್ಕಾರ ನಿಂತಿದೆ ಎಂದು ಭರವಸೆ ನೀಡಿದ್ದಾರೆ. ಪ್ರತಿಭಟನಾಕಾರರ ನಿಯೋಗದೊಂದಿಗೆ ಮಾತುಕತೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಬ್ರಹ್ಮಾನಂದ್ ಮಹತೋ ಸಸ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದಾರೆ. 2023ರಲ್ಲಿ ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (JSSC) ನಡೆಸಿದ ಕೀಟ್‌ಪಾಲಕ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದ 150 ಮಂದಿಯ ಪೈಕಿ ಇವರೂ ಒಬ್ಬರು. ಆದರೆ 30 ಅಭ್ಯರ್ಥಿಗಳ ನೇಮಕಾತಿಯನ್ನು ಯಾವುದೇ ಸ್ಪಷ್ಟ ಕಾರಣವಿಲ್ಲದೆ ತಡೆಹಿಡಿಯಲಾಗಿದೆ.

WhatsApp Image 2026 08 06 at 1.02.17 PM

ಈ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಅಲ್ಲದೆ ಕೇಂದ್ರ ಸಿಲ್ಕ್ ಬೋರ್ಡ್‌ನಲ್ಲಿದ್ದ ಗುತ್ತಿಗೆ ಉದ್ಯೋಗಕ್ಕೂ ರಾಜೀನಾಮೆ ನೀಡಿ ಪ್ರತಿಭಟನೆಗೆ ಧುಮುಕಿದ್ದಾರೆ.

ಧನಬಾದ್‌ನ 37 ವರ್ಷದ ಮೊಹಮ್ಮದ್ ಶಂಶೇರ್ ಆಲಂ ಕಳೆದ ಹತ್ತು ವರ್ಷಗಳಿಂದ ಶಿಕ್ಷಕರ ನೇಮಕಾತಿಗಾಗಿ ಕಾಯುತ್ತಿದ್ದಾರೆ. 2016ರಲ್ಲಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರೂ, ಸಾವಿರಾರು ಹುದ್ದೆಗಳ ನೇಮಕಾತಿ ಇನ್ನೂ ಪೂರ್ಣಗೊಂಡಿಲ್ಲ.

ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಮನೆಯಲ್ಲಿ ಬಿಟ್ಟು ಕಳೆದ 12 ದಿನಗಳಿಂದ ಪ್ರತಿಭಟನಾ ಸ್ಥಳದಲ್ಲೇ ತಂಗಿರುವ ಅವರು, “ನನಗಿಂತ ಕಡಿಮೆ ಅಂಕ ಪಡೆದವರು ಉದ್ಯೋಗ ಪಡೆದಿದ್ದಾರೆ. ನಾನು ಮಾತ್ರ ಹತ್ತು ವರ್ಷಗಳಿಂದ ಕಾಯುತ್ತಿದ್ದೇನೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ದೇವಘರ್‌ನ 27 ವರ್ಷದ ರೋಷನ್ ಜಮೀರ್ ಮೂರು ಬಾರಿ JPSC ಪೂರ್ವ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಎರಡು ಬಾರಿ ಮುಖ್ಯ ಪರೀಕ್ಷೆ ಬರೆದಿದ್ದಾರೆ. ಈ ವರ್ಷ ಮೂರನೇ ಬಾರಿ ಮುಖ್ಯ ಪರೀಕ್ಷೆ ಎದುರಿಸುತ್ತಿದ್ದಾರೆ. “ನಾನು ಪರೀಕ್ಷೆಯಲ್ಲಿ ಉತ್ತೀರ್ಣನಾಗುವ ವಿಶ್ವಾಸವಿದೆ. ಆದರೆ ನೇಮಕಾತಿ ಪ್ರಕ್ರಿಯೆಯೇ ಪಾರದರ್ಶಕವಾಗಿಲ್ಲದಿದ್ದರೆ ಪ್ರಾಮಾಣಿಕ ಅಭ್ಯರ್ಥಿಗಳ ಭವಿಷ್ಯವೇ ಅಪಾಯಕ್ಕೆ ಸಿಲುಕುತ್ತದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್‌ | ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಬೆಂಬಲ: ಹೆಚ್ಚುತ್ತಾ ಜೆಎಂಎಂ-ಕೈ ಮೈತ್ರಿ ಬಿರುಕು?

ಪ್ರತಿಭಟನೆಗೆ ವಿರೋಧ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ ಭೇಟಿ ನೀಡಿ, 14ನೇ JPSC ಪರೀಕ್ಷೆಯನ್ನು ರದ್ದುಪಡಿಸಿ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ. ಆದರೆ ಮುಖ್ಯಮಂತ್ರಿ ಹೇಮಂತ್ ಸೊರೆನ್, “ಸರ್ಕಾರ ಅತ್ಯಂತ ಗಂಭೀರವಾಗಿ ತನಿಖೆ ನಡೆಸುತ್ತಿದೆ. ತಪ್ಪಿತಸ್ಥರನ್ನು ಬಂಧಿಸಲಾಗುತ್ತಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

 ಪ್ರತಿಭಟನಾ ಸ್ಥಳದಲ್ಲಿ ನೂರಾರು ಅಭ್ಯರ್ಥಿಗಳಿಗೆ ಆಹಾರ ವಿತರಿಸುತ್ತಿರುವ ಕಾನೂನು ಪದವೀಧರೆ ಹಾಗೂ ನಾಗರಿಕ ಸೇವಾ ಅಭ್ಯರ್ಥಿ ಅರ್ಚನಾ ಕುಮಾರಿ ಭಾವುಕರಾಗಿದ್ದಾರೆ. “ಕೆಲವರು ಒಂದು ಹೊತ್ತಿನ ಊಟಕ್ಕೂ ಹಣವಿಲ್ಲದಿದ್ದರೂ, ಈ ಹೋರಾಟ ತಮ್ಮ ವೈಯಕ್ತಿಕ ಬದುಕಿಗಿಂತ ದೊಡ್ಡದು ಎಂಬ ನಂಬಿಕೆಯಿಂದ ಇಲ್ಲಿದ್ದಾರೆ. ಅವರ ಪರಿಸ್ಥಿತಿ ನೋಡಿದಾಗ ಮನಸ್ಸೇ ಒಡೆದು ಹೋಗುತ್ತದೆ” ಎಂದು ಕಣ್ಣೀರಿಟ್ಟಿದ್ದಾರೆ.

ಸಣ್ಣ ಪ್ರತಿಭಟನೆಯಾಗಿ ಆರಂಭವಾದ ಈ ಚಳವಳಿ ಈಗ ವಿದ್ಯಾರ್ಥಿಗಳು, ನಾಗರಿಕ ಸಮಾಜ, ವಿವಿಧ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳ ಬೆಂಬಲದೊಂದಿಗೆ ಬೃಹತ್ ಜನಾಂದೋಲನವಾಗಿ ರೂಪುಗೊಂಡಿದೆ. ಉದ್ಯೋಗ ನೇಮಕಾತಿಯಲ್ಲಿ ಪಾರದರ್ಶಕತೆ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಸಮಗ್ರ ತನಿಖೆ ಹಾಗೂ ಬಾಕಿ ನೇಮಕಾತಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದು, ಸರ್ಕಾರದ ಮುಂದಿನ ಕ್ರಮದತ್ತ ಎಲ್ಲರ ಚಿತ್ತ ನೆಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...