ಜಾರ್ಖಂಡ್‌ನ ಧನ್‌ಬಾದ್‌ನಲ್ಲಿರುವ ಪ್ರತಿಷ್ಠಿತ ಶಾಲೆಯ ಪ್ರಾಂಶುಪಾಲನೊಬ್ಬ ವಿದ್ಯಾರ್ಥಿನಿಯರ ಶರ್ಟ್ ಬಿಚ್ಚಿಸಿ ಬ್ಲೇಸರ್‌ನಲ್ಲೇ ಮನೆಗೆ ಕಳುಹಿಸಿರುವ ಅಮಾನವೀಯ ಘಟನೆ ನಡೆದಿದೆ.
ವಿದ್ಯಾರ್ಥಿನಿಯರು ಶರ್ಟ್ ಮೇಲೆ ಪೆನ್ನಿನಿಂದ ಬರೆದುಕೊಂಡಿದ್ದರು. ಇದರಿಂದ ಆಕ್ರೋಶಗೊಂಡ ಪ್ರಾಂಶುಪಾಲರು ಅವರ ಶರ್ಟ್ ಬಿಚ್ಚಿಸಿ, ಬರೀ ಬ್ಲೇಸರ್‌ನಲ್ಲೇ ಮನೆಗೆ ಕಳುಹಿಸಿದ್ದಾರೆ. ಪ್ರಾಂಶುಪಾಲರ ಈ ನಡೆಗೆ ಪೋಷಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಜಿಲ್ಲಾಧಿಕಾರಿ ಮಾಧವಿ ಮಿಶ್ರಾ ಅವರು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
80 ವಿದ್ಯಾರ್ಥಿನಿಯರು ಶಾಲೆಯಲ್ಲಿ ʻಪೆನ್ ಡೇʼ ಆಚರಿಸಿ, ಶರ್ಟ್ ಮೇಲೆ ಪೆನ್ನಿನಿಂದ ಬರೆದುಕೊಂಡಿದ್ದರು. ಇದರಿಂದ ಸಿಟ್ಟಾದ ಪ್ರಾಂಶುಪಾಲರು ಶರ್ಟ್ ಬಿಚ್ಚಿ ಮನೆಗೆ ಕಳಿದ್ದಾರೆ ಎಂದು ವರದಿಯಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಬಗ್ಗೆ ಕೇಜ್ರಿವಾಲ್‌ಗೆ ಇರಲಿ ಎಚ್ಚರ
ಪ್ರಾಂಶುಪಾಲರು ಪೆನ್ ಡೇ ಆಚರಣೆಯನ್ನು ವಿರೋಧಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಕ್ಷಮೆಯಾಚಿಸಿದರೂ ಅವರ ಶರ್ಟ್ ತೆಗೆಯುವಂತೆ ಹೇಳಿದ್ದಾರೆ. ಎಲ್ಲ ವಿದ್ಯಾರ್ಥಿನಿಯರನ್ನು ಶರ್ಟ್ ಇಲ್ಲದೆ ಬ್ಲೇಜರ್‌ಗಳಲ್ಲಿ ಮನೆಗೆ ಕಳುಹಿಸಲಾಯಿತು. ಪ್ರಾಂಶುಪಾಲರ ವಿರುದ್ಧ ಹಲವು ಪೋಷಕರು ದೂರು ದಾಖಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಮಿಶ್ರಾ ಹೇಳಿದ್ದಾರೆ.
ಸಂತ್ರಸ್ತ ವಿದ್ಯಾರ್ಥಿನಿಯರೊದಿಗೆ ಮಾತುಕತೆ ನಡೆಸಿದ್ದೇವೆ. ಜಿಲ್ಲಾಡಳಿತ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ. ಈ ಸಮಿತಿಯು ಉಪವಿಭಾಗಾಧಿಕಾರಿ , ಜಿಲ್ಲಾ ಶಿಕ್ಷಣಾಧಿಕಾರಿ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಒಳಗೊಂಡಿರುತ್ತದೆ. ತನಿಖಾ ಸಮಿತಿಯ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಝರಿಯಾ ಶಾಸಕಿ ರಾಗಿಣಿ ಸಿಂಗ್ ಕೂಡ ಶನಿವಾರ ಶಾಲೆಯ ಪೋಷಕರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪ್ರಾಂಶುಪಾಲರ ವಿರುದ್ಧ ದೂರು ದಾಖಲಿಸಿದ್ದಾರೆ.
