ಜಾರ್ಖಂಡ್‌ | ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಿದ್ಯಾರ್ಥಿ ನಾಯಕ ದೇವೇಂದ್ರ ಮಹತೊ ಆರೋಗ್ಯ ಗಂಭೀರ

Date:

ಜಾರ್ಖಂಡ್‌ನಲ್ಲಿ ಪರೀಕ್ಷಾ ಅಕ್ರಮಗಳ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ, ಜಾರ್ಖಂಡ್‌ ಲೋಕತಾಂತ್ರಿಕ ಕ್ರಾಂತಿಕಾರಿ ಮೋರ್ಚಾದ (ಜೆಎಲ್‌ಕೆಎಂ) ದೇವೇಂದ್ರ ಮಹತೊ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಅವರನ್ನು ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಗಿದೆ. ಚಿಕಿತ್ಸೆ ನೀಡಲಾಗುತ್ತಿದೆ. ಅವರು ಜಾರ್ಖಂಡ್‌ನಲ್ಲಿನ ಸರ್ಕಾರಿ ನೇಮಕಾತಿ ಪರೀಕ್ಷೆಗಳ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಕಳೆದ 9 ದಿನಗಳಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

- Advertisement -

ಸತತ ಉಪವಾಸದಿಂದಾಗಿ ಅವರ ರಕ್ತದಲ್ಲಿನ ಸಕ್ಕರೆ ಮಟ್ಟವು ಅಪಾಯಕಾರಿ ಮಟ್ಟಕ್ಕೆ ಕುಸಿದಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನ್ಯಾನ್ಸಿ ಪ್ರಿಯಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಆರೋಗ್ಯ ಭಾರೀ ಪ್ರಮಾಣದಲ್ಲಿ ಕ್ಷೀಣಿಸಿದ್ದರೂ ಲೆಕ್ಕಿಸದ ಮಹತೊ, ಸೋಮವಾರ ನಡೆದ ಬೃಹತ್ ‘ವಿಧಾನಸೌಧ ಚಲೊ’ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ಭಾವಚಿತ್ರ ಹಿಡಿದು ಆ್ಯಂಬುಲೆನ್ಸ್‌ನಲ್ಲೇ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ಅವರು, ಸ್ಟ್ರೆಚರ್ ಮೇಲೆ ನಿಂತುಕೊಂಡೇ ನೆರೆದಿದ್ದ ಸಾವಿರಾರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ತಾವು ಜುಲೈ 25ರಿಂದ ಶಾಂತಿಯುತವಾಗಿ ಸತ್ಯಾಗ್ರಹ ನಡೆಸುತ್ತಿದ್ದರೂ, ಪೊಲೀಸರು ತಳ್ಳಾಟ ನಡೆಸಿ ಬಲವಂತವಾಗಿ ಆ್ಯಂಬುಲೆನ್ಸ್‌ ಒಳಗೆ ತುರಕಿ ಕಿರುಕುಳ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದರು. ಪ್ರಾಣ ಹೋದರೂ ಈ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಘೋಷಿಸಿದ್ದರು.

ಸೋಮವಾರ ರಾತ್ರಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಡಿದ್ದ ಮಹತೊ, “ರಾಜ್ಯದ ನಾನಾ ಮೂಲೆಗಳಿಂದ ಬಂದ ವಿದ್ಯಾರ್ಥಿಗಳನ್ನು ತಡೆಯಲು ಸರ್ಕಾರ ಟಿಯರ್ ಗ್ಯಾಸ್, ಜಲಫಿರಂಗಿ, ಮುಳ್ಳುತಂತಿಯ ಬ್ಯಾರಿಕೇಡ್ ಹಾಗೂ ಭಾರೀ ಲಾಠಿ ಪ್ರಹಾರ ನಡೆಸಿದ್ದಾರೆ. ವಿದ್ಯಾರ್ಥಿಗಳು ಯಾವುದೇ ಹಿಂಸೆಗೆ ಇಳಿಯದೆ ಶಾಂತಿಯುತವಾಗಿಯೇ ಹೋರಾಟ ನಡೆಸಿದ್ದಾರೆ” ಎಂದು ಹೇಳಿದ್ದಾರೆ.

ಲಕ್ಷಾಂತರ ನಿರುದ್ಯೋಗಿ ಯುವಜನರ ಭವಿಷ್ಯಕ್ಕಾಗಿ ನಡೆಯುತ್ತಿರುವ ಈ ಹೋರಾಟ ಸಂಪೂರ್ಣ ರಾಜಕೀಯರಹಿತವಾಗಿದೆ. ಸರ್ಕಾರ ತಮ್ಮ ಬೇಡಿಕೆಗಳಿಗೆ ಸರಿಯಾಗಿ ಸ್ಪಂದಿಸದಿದ್ದರೆ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರೇ ಈ ಅಕ್ರಮದ ರೂವಾರಿಯೆಂದು ಭಾವಿಸಿ ಅವರ ರಾಜೀನಾಮೆಗೆ ಆಗ್ರಹಿಸಲಾಗುವುದು” ಎಂದು ಗುಡುಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ...

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ ‘ಮಹಾಭಿಯೋಗ’ ನಡೆದಿದೆಯೇ?

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ...

‘ವೀರಮಣಿ ಅತ್ಯಾಚಾರ ಪ್ರಕರಣ ಮುಚ್ಚುವುದರ ಹಿಂದೆ ಯಾವ ಒಪ್ಪಂದವಿತ್ತು’?; ಡಿಎಂಕೆ ವಿರುದ್ಧ ಸಿಎಂ ವಿಜಯ್‌ ವಾಗ್ದಾಳಿ

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ತಮಿಳುನಾಡಿನ ಆರ್‌....

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ...