ಜಾರ್ಖಂಡ್ | ಸಿಎಂ ಹೇಮಂತ್ ಸೊರೆನ್ ರಾಜೀನಾಮೆಗೆ ವಿದ್ಯಾರ್ಥಿಗಳ ಆಗ್ರಹ; ಆ. 20ಕ್ಕೆ ಸಿಎಂ ನಿವಾಸ ಮುತ್ತಿಗೆ ಎಚ್ಚರಿಕೆ

Date:

ಜಾರ್ಖಂಡ್ ರಾಜ್ಯ ಸೇವಾ ಆಯೋಗ (JPSC) ಮತ್ತು ಜಾರ್ಖಂಡ್ ಸಿಬ್ಬಂದಿ ನೇಮಕಾತಿ ಆಯೋಗ (JSSC) ನಡೆಸಿದ ಪರೀಕ್ಷೆಗಳಲ್ಲಿ ಅಕ್ರಮ ಮತ್ತು ಅನ್ಯಾಯ ನಡೆದಿದೆ ಎಂದು ಆರೋಪಿಸಿ ಕಳೆದ 20ಕ್ಕೂ ಹೆಚ್ಚು ದಿನಗಳಿಂದ ಹೋರಾಟ ನಡೆಸುತ್ತಿರುವ ಸಾವಿರಾರು ಅಭ್ಯರ್ಥಿಗಳು ಮತ್ತು ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.

- Advertisement -

ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿರುವ ವಿದ್ಯಾರ್ಥಿ ಒಕ್ಕೂಟಗಳು, ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ರಾಜೀನಾಮೆಗೆ ಆಗ್ರಹಿಸಿದೆ. ಆಗಸ್ಟ್ 20 ರಂದು ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ (ಘೇರಾವ್) ಬಹಿರಂಗ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಇದನ್ನೂ ಓದಿ: ಜಾರ್ಖಂಡ್ ವಿದ್ಯಾರ್ಥಿ ಪ್ರತಿಭಟನೆಗೆ ಬಂಗಾಳದಿಂದ ಬಿಜೆಪಿ ಕಾರ್ಯಕರ್ತರನ್ನು ಕಳಿಸಿದೆ; ಕಾಂಗ್ರೆಸ್ ಆರೋಪ

‘JPSC-JSSC ಸುಧಾರಣಾ ಮಂಚ್’ ಬ್ಯಾನರ್ ಅಡಿಯಲ್ಲಿ ಶನಿವಾರ ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದಿಂದ ಆಲ್ಬರ್ಟ್ ಎಕ್ಕಾ ಚೌಕ್‌ವರೆಗೆ ಸಾವಿರಾರು ವಿದ್ಯಾರ್ಥಿಗಳು ರಾಷ್ಟ್ರಧ್ವಜ ಹಿಡಿದು ಬೃಹತ್ ‘ತಿರಂಗಾ ಯಾತ್ರೆ’ ನಡೆಸಿದರು. ಗಾಲಿಕುರ್ಚಿಯಲ್ಲಿ ಕುಳಿತಿದ್ದ ಹಾಗೂ ಉಪವಾಸ ಸತ್ಯಾಗ್ರಹದಲ್ಲಿರುವ ವಿದ್ಯಾರ್ಥಿಗಳು ಕೂಡ ಈ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ ಮಾತನಾಡಿದ ವಿದ್ಯಾರ್ಥಿ ಮುಖಂಡರು, ಗಾಂಧಿವಾದಿ ಮಾರ್ಗದಲ್ಲಿ ಶಾಂತಿಯುತವಾಗಿ ಮನವಿ ಮಾಡಿದರೂ ಸರ್ಕಾರ ಕಿವಿಗೊಡುತ್ತಿಲ್ಲ. ಹೀಗಾಗಿ ನಾವು ಹೋರಾಟದ ಹಾದಿಯನ್ನು ಬದಲಾಯಿಸುತ್ತಿದ್ದೇವೆ ಎಂದು ಕಿಡಿಕಾರಿದರು.

ಜೆಎಸ್ಎಸ್‌ಸಿ-ಸಿಜಿಎಲ್ ಮತ್ತು ವಿವಾದಾಸ್ಪದ ಜೆಪಿಎಸ್‌ಸಿ ಪರೀಕ್ಷೆಗಳನ್ನು ತಕ್ಷಣವೇ ರದ್ದುಗೊಳಿಸಬೇಕು. ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಸಿಬಿಐ ಅಥವಾ ಜಾರ್ಖಂಡ್ ಹೊರಗಿನ ನಿವೃತ್ತ ನ್ಯಾಯಮೂರ್ತಿಗಳ ಉನ್ನತ ಮಟ್ಟದ ಸಮಿತಿಯಿಂದ ಸ್ವತಂತ್ರ ತನಿಖೆಗೆ ಒಳಪಡಿಸಬೇಕು. ಮುಖ್ಯಮಂತ್ರಿ ಹೇಮಂತ್ ಸೊರೆನ್ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮೈತ್ರಿಕೂಟದ ಆಡಳಿತದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಿದ್ಯಾರ್ಥಿಗಳ ಪರವಾಗಿದ್ದರೆ, ಸೊರೆನ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆಯಬೇಕು ಎಂಬುದು ಸದ್ಯ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಯಾಗಿದೆ.

ಇದನ್ನೂ ಓದಿ: ಜಾರ್ಖಂಡ್, ದೆಹಲಿ ಎಲ್ಲೇ ಆದರೂ, ಕಾಂಗ್ರೆಸ್ ವಿದ್ಯಾರ್ಥಿಗಳ ಪರ: ಮಲ್ಲಿಕಾರ್ಜುನ ಖರ್ಗೆ

ಮತ್ತೊಂದೆಡೆ, ಪರೀಕ್ಷೆಗಳಲ್ಲಿ ಸುಧಾರಣೆ ತರಲು ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಮಂತ್ ಸೊರೆನ್ ತಿಳಿಸಿದ್ದಾರೆ.

ತಪ್ಪು ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿರುವ ಅವರು, ವಾರ್ಷಿಕ ಪರೀಕ್ಷಾ ಕ್ಯಾಲೆಂಡರ್ ಹಾಗೂ ತಂತ್ರಜ್ಞಾನ ಆಧಾರಿತ ಭದ್ರತಾ ವ್ಯವಸ್ಥೆಗಳನ್ನು ಜಾರಿಗೆ ತರುವುದಾಗಿ ಭರವಸೆ ನೀಡಿದ್ದಾರೆ. ಆದರೆ, ಸರ್ಕಾರದ ಈ ಭರವಸೆಗಳಿಂದ ತೃಪ್ತರಾಗದ ವಿದ್ಯಾರ್ಥಿಗಳು ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಹಿಂಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಲ್ ನಿನೋ ತಾಪಮಾನ: ಹೊರಾಂಗಣ ಕಾರ್ಮಿಕರ ರಕ್ಷಣೆಗೆ ತುರ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ

ಎಲ್ ನಿನೋ ಹವಾಮಾನ ಬದಲಾವಣೆಯ ತೀವ್ರ ಪರಿಣಾಮಗಳಿಂದ ಹೊರಾಂಗಣ ಹಾಗೂ ದಿನಗೂಲಿ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಕಾರ ಆರೋಪ; ರಸ್ತೆ ಬದಿಯಲ್ಲೇ ಮಗುವಿಗೆ ಜನ್ಮ ನೀಡಿದ ದಲಿತ ಮಹಿಳೆ

ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದರಿಂದ 20 ವರ್ಷದ ಬುಡಕಟ್ಟು (ದಲಿತ) ಮಹಿಳೆಯೊಬ್ಬರು...