ಜಾರ್ಖಂಡ್‌ ವಿದ್ಯಾರ್ಥಿಗಳ ಉಪವಾಸ ಸತ್ಯಾಗ್ರಹ ಅಂತ್ಯ: ಸರ್ಕಾರದ ಸಂಧಾನ ಸ್ವಾಗತಿಸಿದ ರಾಹುಲ್ ಗಾಂಧಿ

Date:

ಜಾರ್ಖಂಡ್‌ ಸರ್ಕಾರ ಹಾಗೂ ಉದ್ಯೋಗಾಕಾಂಕ್ಷಿ ವಿದ್ಯಾರ್ಥಿಗಳ ನಡುವೆ ಒಮ್ಮತ ಮೂಡಿ, ವಿದ್ಯಾರ್ಥಿಗಳು ತಮ್ಮ ಉಪವಾಸ ಸತ್ಯಾಗ್ರಹವನ್ನು ಹಿಂಪಡೆದಿರುವುದನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸ್ವಾಗತಿಸಿದ್ದಾರೆ. “ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಎತ್ತಿದಾಗ ಅವರಿಗೆ ಸೂಕ್ತ ಉತ್ತರಗಳು ಸಿಗಬೇಕು, ಇದು ಅತ್ಯಂತ ಸರಿಯಾದ ಮಾರ್ಗ” ಎಂದು ಅವರು ಹೇಳಿದ್ದಾರೆ.

- Advertisement -

​ಮುಖ್ಯಮಂತ್ರಿ ಹೇಮಂತ್ ಸೊರೇನ್ ನೇತೃತ್ವದ ರಾಜ್ಯ ಸರ್ಕಾರವು ಸಂವಾದದ ಹಾದಿ ಹಿಡಿದು ಸಮಸ್ಯೆಗೆ ಪರಿಹಾರ ಕಂಡುಕೊಂಡಿದೆ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಸಂಯಮದಿಂದಲೇ ತಮ್ಮ ಧ್ವನಿಯನ್ನು ಸರ್ಕಾರಕ್ಕೆ ಮುಟ್ಟಿಸಿದ್ದಾರೆ ಎಂದು ರಾಹುಲ್ ಗಾಂಧಿ ಪ್ರಶಂಸಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

​”ನಾವು ದೇಶದ ಪ್ರತಿಯೊಬ್ಬ ವಿದ್ಯಾರ್ಥಿಯ ಪರವಾಗಿ ನಿಲ್ಲುತ್ತೇವೆ. ವಿದ್ಯಾರ್ಥಿಗಳ ಕಠಿಣ ಪರಿಶ್ರಮಕ್ಕೆ ಸೂಕ್ತ ಪ್ರತಿಫಲ ಹಾಗೂ ನ್ಯಾಯಯುತ ಸ್ಪರ್ಧೆಯ ಹಕ್ಕು ಸಿಗುವಂತೆ ಮಾಡಲು ಈ ಅಕ್ರಮ ವ್ಯವಸ್ಥೆಯನ್ನು ಬುಡಸಮೇತ ಕಿತ್ತೊಗೆದು ಬದಲಾವಣೆ ತರಲಾಗುವುದು. ವಿದ್ಯಾರ್ಥಿಗಳನ್ನು ಹಿಂದಕ್ಕೆ ತಳ್ಳುವ ಬದಲು ಅವರನ್ನು ಮುನ್ನಡೆಸುವ ಹೊಸ ವ್ಯವಸ್ಥೆಯನ್ನು ದೇಶಾದ್ಯಂತ ರೂಪಿಸಲಾಗುವುದು” ಎಂದು ರಾಹುಲ್ ‘ಎಕ್ಸ್‌’ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

​ನೇಮಕಾತಿ ಪರೀಕ್ಷೆಗಳ ಅಕ್ರಮ ವಿರೋಧಿಸಿ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಿದ್ಯಾರ್ಥಿ ಮುಖಂಡ ದೇವೇಂದ್ರ ನಾಥ್ ಮಹತೋ, ಸೋಮವಾರ ತಡರಾತ್ರಿ ತಮ್ಮ ಮುಷ್ಕರವನ್ನು ಕೊನೆಗೊಳಿಸಿದರು. ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸಿದ ರಾಜ್ಯ ಸರ್ಕಾರವು ಜೆಎಸ್‌ಎಸ್‌ಸಿ-ಸಿಜಿಎಲ್‌ (JSSC-CGL) ಪರೀಕ್ಷೆ ಸೇರಿದಂತೆ ‘ಟಿಡಿಪಿಎಲ್‌’ (TDPL) ಸಂಸ್ಥೆ ನಡೆಸಿದ್ದ ಎಲ್ಲಾ ಪರೀಕ್ಷೆಗಳು ಹಾಗೂ ಪ್ರಕಟಿಸಿದ್ದ ಫಲಿತಾಂಶಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಈ ನಿರ್ಧಾರವನ್ನು “ಜಾರ್ಖಂಡ್‌ಗೆ ಸಂದ ಮಹಾನ್ ಗೆಲುವು” ಎಂದು ವಿದ್ಯಾರ್ಥಿ ಮುಖಂಡರು ಬಣ್ಣಿಸಿದ್ದಾರೆ.

​ರಾಂಚಿಯಲ್ಲಿ ರಾಜ್ಯ ಸಚಿವರಾದ ದೀಪಿಕಾ ಪಾಂಡೆ ಸಿಂಗ್ ಹಾಗೂ ಇರ್ಫಾನ್ ಅನ್ಸಾರಿ ಅವರ ಸಮ್ಮುಖದಲ್ಲಿ ಮಹತೋ ಉಪವಾಸ ಅಂತ್ಯಗೊಳಿಸಿ, ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ಬೆಂಬಲ ನೀಡಿದ ರಾಹುಲ್ ಗಾಂಧಿ ಅವರಿಗೆ ಧನ್ಯವಾದ ಅರ್ಪಿಸಿದರು. ವಿಶೇಷ ಸಚಿವ ಸಂಪುಟ ಸಭೆ ನಡೆಸಿ, ಟಿಡಿಪಿಎಲ್ ಸಂಸ್ಥೆ ನಡೆಸಿದ ಎಲ್ಲಾ ಪರೀಕ್ಷಾ ಪ್ರಕ್ರಿಯೆಗಳು ಹಾಗೂ ಅಭ್ಯರ್ಥಿಗಳ ಆಯ್ಕೆಯನ್ನು ರದ್ದುಪಡಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹೇಮಂತ್ ಸೊರೇನ್ ಸ್ಪಷ್ಟಪಡಿಸಿದ್ದಾರೆ.

​ಇದಕ್ಕೂ ಮುನ್ನ, ಆಗಸ್ಟ್ 14ರಂದು ಮುಖ್ಯಮಂತ್ರಿ ಸೊರೇನ್ ಅವರಿಗೆ ಪತ್ರ ಬರೆದಿದ್ದ ರಾಹುಲ್ ಗಾಂಧಿ, ಪ್ರತಿಭಟನಾನಿರತ ವಿದ್ಯಾರ್ಥಿ ನಿಯೋಗವನ್ನು ಖುದ್ದು ಭೇಟಿಯಾಗಿ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿದ್ದರು. ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ನೇಮಕಾತಿ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ಬೆಂಬಲಿಸುವುದಾಗಿ ರಾಹುಲ್ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಸ್ತರಣೆ: ಬಸ್ ಕಂಡಕ್ಟರ್ ಆಗಿ ಟಿಕೆಟ್ ನೀಡಿದ ಸಿಎಂ ವಿಜಯ್

ತಮಿಳುನಾಡು ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣ ಯೋಜನೆಯನ್ನು...

‘Instagram ಹೆಣ್ಮಕ್ಕಳಿಗೆ ಮಾತ್ರ’; ಎಲಾನ್ ಮಸ್ಕ್ ಹೀಗ್ಯಾಕಂದ್ರು?

ಟೆಕ್ ಜೈಂಟ್ ಎಲಾನ್ ಮಸ್ಕ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಗಳ...

ಜಂತರ್‌ ಮಂತರ್‌ನಲ್ಲಿ 500ಕ್ಕೂ ಅಧಿಕ ಮಂದಿ ಅರೆಸ್ಟ್: ‘ಗ್ಯಾನೇಶ್ ಕುಮಾರ್ ಬಂಧನವಾಗಲಿ’ ಎಂದ ನಾಯಕರು

ಎಸ್‌ಐಆರ್ ಮೊದಲಾದ ಪ್ರಕ್ರಿಯೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ...