ಜಾರ್ಖಂಡ್ ವಿದ್ಯಾರ್ಥಿಗಳ ‘ವಿಧಾನಸೌಧ ಚಲೋ’ ಪ್ರತಿಭಟನೆ; ಲೋಕಸೇವಾ ಆಯೋಗದ ಮುಖ್ಯಸ್ಥರ ಬಂಧನ

Date:

ಪರೀಕ್ಷಾ ಅಕ್ರಮ ಮತ್ತು ಬೃಹತ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಸಾವಿರಾರು ವಿದ್ಯಾರ್ಥಿ-ಯುವಜನರು ಜಾರ್ಖಂಡ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು (ಸೋಮವಾರ) ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದರ ನಡುವೆಯೇ, ಜಾರ್ಖಂಡ್ ಲೋಕಸೇವಾ ಆಯೋಗದ (ಜೆಪಿಎಸ್‌ಸಿ) ಮಾಜಿ ಅಧ್ಯಕ್ಷ ಎಲ್. ಖಿಯಾಂಗ್ಟೆ ಅವರನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಬಂಧಿಸಿದೆ. ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ.

- Advertisement -

ಕಪ್ಪುಪಟ್ಟಿಗೆ ಸೇರಿಸಲ್ಪಟ್ಟಿದ್ದ ‘ಟಿಎಸ್‌ಆರ್ ಡೇಟಾ ಪ್ರೊಸೆಸಿಂಗ್ ಪ್ರೈವೇಟ್ ಲಿಮಿಟೆಡ್’ ಎಂಬ ಖಾಸಗಿ ಸಂಸ್ಥೆಗೆ ಪರೀಕ್ಷಾ ನಿರ್ವಹಣೆಯ ಜವಾಬ್ದಾರಿಯನ್ನು ಅಕ್ರಮವಾಗಿ ನೀಡಿದ್ದ ಆರೋಪದ ಮೇಲೆ ಖಿಯಾಂಗ್ವೆ ಅವರನ್ನು ಬಂಧಿಸಲಾಗಿದೆ. ಅವರ ಬಂಧನವು ಜಾರ್ಖಂಡ್‌ನ ರಾಜಕಾರಣ ಮತ್ತು ಶೈಕ್ಷಣಿಕ ವಲಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಕಳೆದ 9 ದಿನಗಳಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಿದ್ಯಾರ್ಥಿ ನಾಯಕ ದೇವೇಂದ್ರ ನಾಥ್ ಮಹತೋ ನೇತೃತ್ವದಲ್ಲಿ, ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಯುವಜನರು ಸೋಮವಾರ ರಾಜಧಾನಿ ರಾಂಚಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಕಪ್ಪುಪಟ್ಟಿಗೆ ಸೇರಿದ ಸಂಸ್ಥೆಯನ್ನು ಪರೀಕ್ಷೆಗೆ ಬಳಸಿಕೊಂಡಿರುವುದು, ಒಎಂಆರ್ ಶೀಟ್ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧಕ್ಕೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹಲವು ಹಂತದ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದರೂ, ಆಕ್ರೋಶಗೊಂಡ ಯುವಜನರು ಅವುಗಳನ್ನು ಮುರಿದು ಮುನ್ನುಗ್ಗಿದರು. ಈ ವೇಳೆ, ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಟಿಯರ್ ಗ್ಯಾಸ್, ಜಲಫಿರಂಗಿ ಹಾಗೂ ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ವಿದ್ಯಾರ್ಥಿಗಳ ಸುದೀರ್ಘ ಹೋರಾಟ ಹಾಗೂ ಜನಕ್ರೋಶಕ್ಕೆ ಮಣಿದಿರುವ ಹೇಮಂತ್ ಸೊರೇನ್ ನೇತೃತ್ವದ ಸರ್ಕಾರ, 14ನೇ ಜೆಪಿಎಸ್‌ಸಿ ಪ್ರಿಲಿಮ್ಸ್ ಸೇರಿದಂತೆ ಮೂರು ಪರೀಕ್ಷೆಗಳನ್ನು ರದ್ದುಗೊಳಿಸಲು ಸಮ್ಮತಿಸಿದೆ. ಪರೀಕ್ಷಾ ಅಕ್ರಮ ಪ್ರಕರಣವನ್ನು ಸಿಐಡಿ ತನಿಖೆ ಆದೇಶಿಸಿದೆ. ಜೆಪಿಎಸ್‌ಸಿಯ ಮೂವರು ಮಂಡಳಿ ಸದಸ್ಯರು ಈಗಾಗಲೇ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಸಿಜಿಎಲ್ ಸೇರಿದಂತೆ ವಿವಿಧ ಪರೀಕ್ಷಾ ಅಕ್ರಮಗಳ ಕುರಿತು ಜಾರಿ ನಿರ್ದೇಶನಾಲಯದಿಂದಲೂ (ಇಡಿ) ತನಿಖೆ ನಡೆಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಆದರೆ, ಉಚ್ಚ ನ್ಯಾಯಾಲಯ ಮತ್ತು ಸರ್ವೋಚ್ಚ ನ್ಯಾಯಾಲಯದ ಉಸ್ತುವಾರಿಯಲ್ಲಿ ನಡೆದಿದ್ದ ಸಿಜಿಎಲ್ ಪರೀಕ್ಷೆಯನ್ನು ರದ್ದುಗೊಳಿಸಬೇಕು ಮತ್ತು ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ. ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ರದ್ದು, ಲೀಸ್‌ಗೆ ನೀಡಲು ಸಿಎಂ ಭರವಸೆ : ಶ್ರೀಮಂತ ಬಿರಾದರ್

ಬೀದರ್ ಜಿಲ್ಲೆಯ ರೈತರು‌, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ...

‘ದೇವರೇ ಈ ದೇಶವನ್ನು ಕಾಪಾಡಬೇಕು’: ರೈಲು ಪ್ರಯಾಣದ ಗದ್ದಲಕ್ಕೆ ಬೇಸತ್ತ ತೇಜಸ್ವಿ ಸೂರ್ಯ ಪತ್ನಿ

ರೈಲು ಪ್ರಯಾಣದ ವೇಳೆ ಸಹಪ್ರಯಾಣಿಕರ ಗದ್ದಲದಿಂದ ತೀವ್ರ ಕಿರಿಕಿರಿ ಅನುಭವಿಸಿರುವುದಾಗಿ ಬಿಜೆಪಿ...

ಬೀದರ್ | ಬರ ಪರಿಸ್ಥಿತಿ : ವಿಶೇಷ ಪ್ಯಾಕೇಜ್ ಘೋಷಿಸಲು ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ಬೆಳೆ...