ಇನ್‌ಸ್ಟಾಗ್ರಾಂ ರೀಲ್ಸ್ ಮಾಡಲು ಹೋಗಿ ಯುವಕನೋರ್ವ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಜಾರ್ಖಂಡ್‌ನ ಸಾಹಿಬ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ.
18 ವರ್ಷದ ಯುವಕ ತೌಸಿಫ್ ಇನ್‌ಸ್ಟಾಗ್ರಾಮ್ ರೀಲ್ ಮಾಡಲು ಎತ್ತರದಿಂದ ಆಳವಾದ ನೀರಿಗೆ ಹಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತೌಸಿಫ್ ಸೋಮವಾರ ಸಂಜೆ ಸುಮಾರು 100 ಅಡಿ ಎತ್ತರದಿಂದ ಕ್ವಾರಿ ಕೆರೆಗೆ ಹಾರಿದ್ದಾನೆ. ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ಆತನ ಸ್ನೇಹಿತರು ಆತನನ್ನು ರಕ್ಷಿಸಲು ಯತ್ನಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? 1 ಗಂಟೆ ಕೈಕೊಟ್ಟ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಸರ್ವರ್: 3 ಬಿಲಿಯನ್ ಡಾಲರ್ ಕಳೆದುಕೊಂಡ ಝುಕರ್ ಬರ್ಗ್!
ಸ್ಥಳೀಯರು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿ ಯುವಕನ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಯುವಕ ನೀರಿಗೆ ಜಿಗಿದಿರುವುದನ್ನು ಆತನ ಸ್ನೇಹಿತ ರೆಕಾರ್ಡ್ ಮಾಡಿದ್ದಾರೆ. ಆದರೆ, ನೀರಿಗೆ ಬಿದ್ದ ಕೂಡಲೇ ಈಜಲು ಆರಂಭಿಸಿದ ಯುವಕ ನೀರಿನಲ್ಲಿ ಮುಳುಗಿದ್ದಾನೆ.
ಪೊಲೀಸ್ ಉಪಾಧೀಕ್ಷಕ ವಿಜಯ್ ಕುಮಾರ್ ಕುಶ್ವಾಹ, “ಸುಮಾರು ಅಡಿ ಆಳದ ನೀರಿಗೆ ಹಾರಿದ ಕಾರಣ ಯುವಕ ತನ್ನನ್ನು ನಿಯಂತ್ರಿಸಲು ಸಾಧ್ಯವಾಗದೆ ಮುಳುಗಿದ್ದಾನೆ” ಎಂದು ಮಾಹಿತಿ ನೀಡಿದ್ದಾರೆ.