ಜೆಎನ್‌ಯು ವಿವಿ ವಿದ್ಯಾರ್ಥಿ ಘಟಕದ ಚುನಾವಣೆ: ಎಡ ಸಂಘಟನೆಗಳ ಮೇಲುಗೈ; ಎಬಿವಿಪಿಗೆ ತೀವ್ರ ಮುಖಭಂಗ

Date:

ದೇಶದ ಪ್ರಖ್ಯಾತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ದೆಹಲಿಯ ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದ(ಜೆಎನ್‌ಯು) ವಿದ್ಯಾರ್ಥಿ ಘಟಕದ ಚುನಾವಣೆಯಲ್ಲಿ ಎಡ-ವಿದ್ಯಾರ್ಥಿ ಸಂಘಟನೆಗಳು ಈ ಬಾರಿ ಮೇಲುಗೈ ಸಾಧಿಸಿದೆ. ಆ ಮೂಲಕ ಆರ್‌ಎಸ್‌ಎಸ್‌ನ ವಿದ್ಯಾರ್ಥಿ ಘಟಕ ಎಬಿವಿಪಿಗೆ ಭಾರೀ ಮುಖಭಂಗವಾಗಿದೆ.

ಎಡ-ವಿದ್ಯಾರ್ಥಿ ಸಂಘಟನೆಗಳು ಒಕ್ಕೂಟ (AISA, SFI, DSF ಮತ್ತು AISF) ಮತ್ತು BAPSA ವಿದ್ಯಾರ್ಥಿ ಸಂಘಟನೆ ವಿಜಯಶಾಲಿಯಾಗಿವೆ.

ಅಧ್ಯಕ್ಷ ‌ಸ್ಥಾನ‌ದಲ್ಲಿ ಎಡ ವಿದ್ಯಾರ್ಥಿ ಒಕ್ಕೂಟದಿಂದ AISA ಸಂಘಟನೆಯ ಧನಂಜಯ ವಿಜಯಶಾಲಿಯಾಗಿದ್ದಾನೆ. ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿ BAPSA ಸಂಘಟನೆಯ ಪ್ರಿಯಾಂಶಿ ಆರ್ಯಾ ವಿಜಯಶಾಲಿಯಾಗಿದ್ದಾಳೆ. ಎಡ ವಿದ್ಯಾರ್ಥಿ ಒಕ್ಕೂಟದಿಂದ ಉಪಾಧ್ಯಕ್ಷ ‌ಸ್ಥಾನದಲ್ಲಿ‌ ಸ್ಪರ್ಧಿಸಿರುವ SFI ವಿದ್ಯಾರ್ಥಿ ಸಂಘಟನೆಯ ಅವಿಜಿತ್ ಘೋಷ್‌ ವಿಜಯಶಾಲಿಯಾಗಿದ್ದಾನೆ ಮತ್ತು ಸಹಕಾರ್ಯದರ್ಶಿಯ ಸ್ಥಾನಕ್ಕೆ ಎಡ‌ ಒಕ್ಕೂಟದ ‌AISF ಸಂಘಟನೆಯ ‌ಅಭ್ಯರ್ಥಿ ಮೊಹಮದ್ ಸಾಜಿದ್ ಜಯಗಳಿಸಿದ್ದಾನೆ ಎಂದು ಜೆಎನ್‌ಯು ವಿದ್ಯಾರ್ಥಿ ಸಂಘಟನೆ AISA ಸೋಷಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೋವಿಡ್ ಕಾರಣದಿಂದ ಕಳೆದ ನಾಲ್ಕು ವರ್ಷಗಳಿಂದ ಜೆನ್‌ಯುನಲ್ಲಿ ಚುನಾವಣೆ ನಡೆದಿರಿಲ್ಲ. ಸುದೀರ್ಘ ವರ್ಷಗಳ ಬಳಿಕ ನಡೆಯುತ್ತಿರುವ ಈ ಚುನಾವಣೆ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಎಡಪಂಥೀಯ ವಿದ್ಯಾರ್ಥಿ ಘಟಕಗಳಾದ ಆಲ್ ಇಂಡಿಯಾ ಸ್ಟುಡೆಂಟ್ ಆಸೋಸಿಯೇಶನ್(AISA) ಡೆಮಾಕ್ರಟಿಕ್ ಸ್ಟುಡೆಂಟ್ ಫೆಡರೇಶನ್(DSF), ಸ್ಟುಡೆಂಟ್ ಫೆಡರೇಶನ್ ಆಫ್ ಇಂಡಿಯಾ(SFI) ಆಲ್ ಇಂಡಿಯಾ ಸ್ಟುಡೆಂಟ್ ಫೆಡರೇಶನ್(AISF) ವಿದ್ಯಾರ್ಥಿ ಸಂಘಟನೆಗಳು ಜಂಟಿಯಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ವಿರುದ್ದ ಸ್ಪರ್ಧಿಸಿತ್ತು.

4 ವರ್ಷಗಳ ಬಳಿಕ ನಡೆದ ಜವಾಹರ್‌ಲಾಲ್ ನೆಹರೂ ವಿದ್ಯಾರ್ಥಿ ಘಟಕ ಚುನಾವಣೆಯಲ್ಲಿ ಶೇಕಡಾ 73ರಷ್ಟು ಮತದಾನವಾಗಿತ್ತು. 12 ವರ್ಷಗಳಲ್ಲೇ ಗರಿಷ್ಠ ಮತದಾನ ದಾಖಲಾಗಿತ್ತು. 7,700 ವಿದ್ಯಾರ್ಥಿಗಳು ತಮ್ಮ ಹಕ್ಕು ಚಲಾಯಿಸಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಲಿಕಾಪ್ಟರ್ ಹತ್ತುವಾಗ ಎಡವಿ ಬಿದ್ದು ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಗಾಯ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಪ್ರಚಾರದ...

ಲೋಕಸಭೆ ಚುನಾವಣೆ | ಇನ್ನುಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು...

‘ತಾರಕ್ ಮೆಹ್ತಾ’ ನಟ ಗುರುಚರಣ್ ಸಿಂಗ್ ನಾಪತ್ತೆ; ಅಪಹರಣ ಪ್ರಕರಣ ದಾಖಲು

ಅತ್ಯಂತ ಜನಪ್ರಿಯ ಭಾರತೀಯ ಟಿವಿ ಶೋ ಆದ 'ತಾರಕ್ ಮೆಹ್ತಾ ಕಾ...

2ನೇ ಹಂತದ ಚುನಾವಣೆ | ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು; ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಗಿದಿದೆ. 13 ರಾಜ್ಯಗಳ...