16ನೇ ದಿನಕ್ಕೆ JNU ವಿದ್ಯಾರ್ಥಿಗಳ ಅನಿರ್ದಿಷ್ಟಾವಧಿ ಉಪವಾಸ; ರಾಷ್ಟ್ರಪತಿಗೆ ಪತ್ರ ಬರೆದ ಸಿಪಿಐ(ಎಂ) ಸಂಸದ ಜಾನ್ ಬ್ರಿಟಾಸ್

Date:

ಕ್ಯಾಂಪಸ್‌ನಿಂದ ತಮ್ಮನ್ನು ಉಚ್ಛಾಟಿಸಿರುವುದೂ ಸೇರಿದಂತೆ ಪ್ರಮುಖ 13 ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ಒಕ್ಕೂಟದ (ಜೆಎನ್‌ಯುಎಸ್‌ಯು) ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಉಪವಾಸವು ಸೋಮವಾರ 16ನೇ ದಿನಕ್ಕೆ ಕಾಲಿಟ್ಟಿದೆ. ಈ ಗಂಭೀರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸಿಪಿಐ(ಎಂ) ರಾಜ್ಯಸಭಾ ಸದಸ್ಯ ಜಾನ್ ಬ್ರಿಟಾಸ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತುರ್ತು ಪತ್ರ ಬರೆದಿದ್ದು, ತಕ್ಷಣದ ಆಡಳಿತಾತ್ಮಕ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದಾರೆ.

- Advertisement -

ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ರಾಷ್ಟ್ರಪತಿಗಳಿಗೆ ಅಕ್ಟೋಬರ್ 18 ರಂದು ಬರೆದಿರುವ ಪತ್ರದಲ್ಲಿ; ಜಾಗತಿಕ ಮಟ್ಟದ ಶೈಕ್ಷಣಿಕ ಸಂಸ್ಥೆಯೊಂದರಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದ್ದರೂ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಅವರ ನ್ಯಾಯಯುತ ಕಳಕಳಿಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದೆ ಎಂದು ಕಟುವಾಗಿ ವಿಮರ್ಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿದ್ದರಾಮಯ್ಯ ನಿರ್ಗಮನ ‘ಅಹಿಂದ’ ಮರಕ್ಕೆ ಕೊಡಲಿ ಏಟು: ಸಮುದಾಯದ...

ಒಂದು ಕಾಲದಲ್ಲಿ ರಾಜ್ಯದ ರಾಜಕಾರಣದ ಗತಿಯನ್ನೇ ಬದಲಿಸಿದ್ದ 'ಅಹಿಂದ' ಚಳವಳಿ ಇಂದು ನಾವಿಕನಿಲ್ಲದ ದೋಣಿಯಾಗಿದೆ. ಸಿದ್ದರಾಮಯ್ಯ ನಿರ್ಗಮನ, ಸ್ಟಿಂಗ್ ಆಪರೇಷನ್ ಆರೋಪ, ಸತೀಶ್ ಜಾರಕಿಹೊಳಿ ಹಿಂದಕ್ಕೆ ಮತ್ತು ಕೆ.ಎನ್. ರಾಜಣ್ಣನವರ ಅನಿಶ್ಚಿತತೆ… ಈ...

ಅಲ್ಬೇನಿಯಾದಲ್ಲೇಕೆ ಜನಾಕ್ರೋಶ ಭುಗಿಲೆದ್ದಿದೆ? ಸುಪ್ರೀಂ ಕೋರ್ಟ್, ಪಾರ್ಲಿಮೆಂಟನ್ನು ಸುಟ್ಟದ್ದು...

ಅಲ್ಬೇನಿಯಾ ರಾಜಧಾನಿ ತಿರಾನಾದ ಬೀದಿಗಳಿಂದ ಜಾಗತಿಕ ರಾಜಧಾನಿಗಳವರೆಗೆ… ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ಶಿಕ್ಷಣದ ಬಿಕ್ಕಟ್ಟಿನ ವಿರುದ್ಧ ಯುವ ಸಮೂಹ ಬೀದಿಗಿಳಿದಿದೆ. ಪ್ರಧಾನಿ ಎಡಿ ರಾಮಾ ಸರ್ಕಾರದ ವಿರುದ್ಧ ಅಲ್ಬೇನಿಯಾದಲ್ಲಿ ಭುಗಿಲೆದ್ದ ಜನಾಕ್ರೋಶ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

“ವಿದ್ಯಾರ್ಥಿ ಒಕ್ಕೂಟದ ಪದಾಧಿಕಾರಿಗಳ ವಿರುದ್ಧ ಹೊರಡಿಸಲಾಗಿರುವ ಉಚ್ಚಾಟನೆ ಆದೇಶಗಳನ್ನು ತಕ್ಷಣವೇ ರದ್ದುಗೊಳಿಸಬೇಕು. ಲೈಂಗಿಕ ಕಿರುಕುಳ ವಿರುದ್ಧದ ಪ್ರಮುಖ ಲಿಂಗ ಸಂವೇದನಾ ಸಮಿತಿ (ಜಿಎಸ್‌ಸಿಎಎಸ್‌ಎಚ್‌) ಮತ್ತು ಸಾಂಪ್ರದಾಯಿಕ ಜೆಎನ್‌ಯು ಪ್ರವೇಶ ಪರೀಕ್ಷಾ ವ್ಯವಸ್ಥೆಯನ್ನು ಪುನರಾರಂಭಿಸುವುದು ಸೇರಿದಂತೆ ಅಮಾನತಿನಲ್ಲಿರುವ ವಿದ್ಯಾರ್ಥಿಗಳ ಪ್ರಮುಖ ಕುಂದುಕೊರತೆಗಳನ್ನು ಶೀಘ್ರವಾಗಿ ಬಗೆಹರಿಸಲು ಕ್ರಮಕೈಗೊಳ್ಳಬೇಕು” ಎಂದು ಅವರು ಕೋರಿದ್ದಾರೆ.

ಈ ಲೇಖನ ಓದಿದ್ದೀರಾ?: ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ; ಸುಪ್ರೀಂನದ್ದು ದ್ವಂದ್ವ ನಿಲುವಲ್ಲವೇ?

ಇದೇ ವಿಷಯವಾಗಿ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರಿಗೂ ಪ್ರತ್ಯೇಕ ಪತ್ರ ಬರೆದಿರುವ ಸಂಸದರು, “ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳನ್ನು ಕ್ಯಾಂಪಸ್‌ನಿಂದ ಹೊರಗಿಡುತ್ತಿರುವುದು ವಿದ್ಯಾರ್ಥಿ ಒಕ್ಕೂಟದ ಸ್ವತಂತ್ರ ಕಾರ್ಯಾಚರಣೆಯನ್ನೇ ದುರ್ಬಲಗೊಳಿಸುತ್ತಿದೆ. ಸಾಮೂಹಿಕ ಧ್ವನಿಯನ್ನು ಹತ್ತಿಕ್ಕುವ ಯತ್ನವಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ವಿಶ್ವವಿದ್ಯಾಲಯ ಜಾರಿಗೆ ತಂದಿರುವ ‘ಚೀಫ್ ಪ್ರೊಕ್ಟಾರ್ ಆಫೀಸ್ ಮ್ಯಾನುಯಲ್’ ನಿಯಮಗಳನ್ನು ತೀವ್ರವಾಗಿ ಟೀಕಿಸಿರುವ ಬ್ರಿಟಾಸ್, “ಈ ಕಠಿಣ ನಿಯಮಾವಳಿಗಳು ಪ್ರತಿಭಟನೆ ಮತ್ತು ವೈಚಾರಿಕ ಸಭೆಗಳ ಮೇಲೆ ಅತಿಯಾದ ದಂಡ ಮತ್ತು ವಿಪರೀತ ಶಿಸ್ತಿನ ಕ್ರಮಗಳನ್ನು ಹೇರಲು ಅವಕಾಶ ಮಾಡಿಕೊಡುತ್ತಿವೆ. ಇದು ಜೆಎನ್‌ಯುವಿನ ಪ್ರಜಾಸತ್ತಾತ್ಮಕ ಮತ್ತು ಸ್ವತಂತ್ರ ಅಭಿವ್ಯಕ್ತಿಯ ಪರಂಪರೆಗೆ ಆತಂಕಕಾರಿ ಬೆದರಿಕೆಯಾಗಿದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ತಮ್ಮದೇ ವಿದ್ಯಾರ್ಥಿ ಜೀವನದ ದಿನಗಳನ್ನು ಸ್ಮರಿಸಿಕೊಂಡಿರುವ ಬ್ರಿಟಾಸ್, “ಜೆಎನ್‌ಯು ಕ್ಯಾಂಪಸ್ ಎಂದರೆ ಕೇವಲ ತರಗತಿಗಳಲ್ಲ, ಅದು ಸಂವಾದ, ಮುಕ್ತ ಚರ್ಚೆ ಹಾಗೂ ನಿರಂಕುಶ ನಿರ್ಧಾರಗಳನ್ನು ಪ್ರಶ್ನಿಸುವ ಪ್ರಜಾಸತ್ತಾತ್ಮಕ ಚಟುವಟಿಕೆಗಳ ತವರಾಗಿದೆ. ಅಂತಹ ಆರೋಗ್ಯಕರ ವಾತಾವರಣವನ್ನು ಉಳಿಸಲು ಕೇಂದ್ರ ಸರ್ಕಾರ ಮತ್ತು ರಾಷ್ಟ್ರಪತಿಗಳು ತಕ್ಷಣ ಸ್ಪಂದಿಸಿ ಬಿಕ್ಕಟ್ಟನ್ನು ಶಮನಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲ್ಬೇನಿಯಾದಲ್ಲೇಕೆ ಜನಾಕ್ರೋಶ ಭುಗಿಲೆದ್ದಿದೆ? ಸುಪ್ರೀಂ ಕೋರ್ಟ್, ಪಾರ್ಲಿಮೆಂಟನ್ನು ಸುಟ್ಟದ್ದು ಸರಿಯೇ?

ಅಲ್ಬೇನಿಯಾ ರಾಜಧಾನಿ ತಿರಾನಾದ ಬೀದಿಗಳಿಂದ ಜಾಗತಿಕ ರಾಜಧಾನಿಗಳವರೆಗೆ… ಬೆಲೆ ಏರಿಕೆ, ಭ್ರಷ್ಟಾಚಾರ...

SIR ಅಕ್ರಮ | ‘ನಾವೇ ಸತ್ತಿದ್ದೇವೆ’ ಎಂದು 37 ಮಂದಿ ಹೆಸರಿನಲ್ಲಿ ಫಾರ್ಮ್‌-7 ಸಲ್ಲಿಕೆ; ಪರಸ್ಪರರು ಸತ್ತಿದ್ದಾರೆಂದು ಘೋಷಿಸಿಕೊಂಡಿವೆ 334 ಜೋಡಿಗಳು!

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ (SIR) ಪ್ರಕ್ರಿಯೆಯಲ್ಲಿ ಮತ್ತೊಂದು ಆಘಾತಕಾರಿ ಮತ್ತು ಬೆಚ್ಚಿಬೀಳಿಸುವ...

ಮುಂಬೈ | ಸಾಹಿಲ್ ವಾಕೋಡೆ ಸಾವು: ಮಗನ ತಿಥಿಯಂದೇ ಪೋಷಕರು, ವಿದ್ಯಾರ್ಥಿಗಳ ಬಂಧನ

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ನಿಧನವಾಗಿ ಒಂದು ತಿಂಗಳ...