ಜೆಎನ್‌ಯು ವಿವಿಯಲ್ಲಿ ಎಡ ಪಂಥೀಯ – ಎಬಿವಿಪಿ ವಿದ್ಯಾರ್ಥಿಗಳ ನಡುವೆ ಗಲಭೆ: ಹಲವರಿಗೆ ಗಾಯ

Date:

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡ ಪಂಥೀಯ ಬೆಂಬಲಿತ ಗುಂಪುಗಳ ನಡುವಿನ ಘರ್ಷಣೆಯಲ್ಲಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

- Advertisement -

ಗುರುವಾರ ರಾತ್ರಿ (ಫೆ.29) ಸ್ಕೂಲ್ ಆಫ್ ಲ್ಯಾಂಗ್ವೇಜಸ್‌ ವಿಭಾಗದಲ್ಲಿ ಚುನಾವಣಾ ಸಮಿತಿಯ ಸದಸ್ಯರ ಆಯ್ಕೆಯ ವಿವಾದಗಳಿಂದ ವಾಗ್ವಾದ ಪ್ರಾರಂಭವಾಯಿತು. ವಾಗ್ವಾದ ಹಿಂಸಾಚಾರಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಗಾಯಗೊಂಡ ಕೆಲವು ವಿದ್ಯಾರ್ಥಿಗಳನ್ನು ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಜೆಎನ್‌ಯು ವಿದ್ಯಾರ್ಥಿ ಸಂಘ ಚುನಾವಣಾ ಸಮಿತಿ ಸದಸ್ಯರ ಆಯ್ಕೆಗಾಗಿ ವಿಭಾಗ ಮಟ್ಟದ ಸಾಮಾನ್ಯ ಸಭೆಗಳನ್ನು ನಡೆಸುತ್ತಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್‌ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ

ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ವ್ಯಾಪಕವಾಗಿ ಹರಡಿರುವ ವಿಡಿಯೋದಲ್ಲಿ, ವ್ಯಕ್ತಿಯೊಬ್ಬ ವಿದ್ಯಾರ್ಥಿಗಳನ್ನು ಕೋಲಿನಿಂದ ಥಳಿಸುತ್ತಿರುವುದನ್ನು ಕಾಣಬಹುದು. ಮತ್ತೊಂದು ವಿಡಿಯೋದಲ್ಲಿ, ವ್ಯಕ್ತಿಯೊಬ್ಬ ವಿದ್ಯಾರ್ಥಿಗಳ ಮೇಲೆ ಸೈಕಲ್ ಎಸೆಯುತ್ತಿರುವುದನ್ನು ಕಾಣಬಹುದು.

ಘಟನೆಯ ಇತರ ವಿಡಿಯೋಗಳು ವಿವಿಯ ಭದ್ರತಾ ಸಿಬ್ಬಂದಿ ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವಾಗಲೂ ಗುಂಪು ಗುಂಪಾಗಿ ವ್ಯಕ್ತಿಗಳನ್ನು ಥಳಿಸುತ್ತಿರುವುದನ್ನು ತೋರಿಸಿದೆ.

ಘಟನೆಯ ಕುರಿತು ವಿಶ್ವವಿದ್ಯಾನಿಲಯ ಆಡಳಿತವು ಇನ್ನೂ ಹೇಳಿಕೆಯನ್ನು ನೀಡದಿದ್ದರೂ, ವಿದ್ಯಾರ್ಥಿ ಗುಂಪುಗಳು ಘರ್ಷಣೆಗೆ ಪರಸ್ಪರ ಆರೋಪಿಸಿದ್ದಾರೆ. ಆದರೆ, ಈ ಕುರಿತು ಯಾವುದೇ ದೂರುಗಳು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...