ದಲಿತರ ಬಗ್ಗೆ ಜೆಎನ್‌ಯು ಕುಲಪತಿ ವಿವಾದಾತ್ಮಕ ಹೇಳಿಕೆ: ರಾಜೀನಾಮೆಗೆ ಆಗ್ರಹಿಸಿ ದೇಶವ್ಯಾಪಿ ಪ್ರತಿಭಟನೆಗೆ ಕರೆ

Date:

ದಲಿತರ ಹಕ್ಕುಗಳ ಪ್ರತಿಪಾದನೆಯನ್ನು “ಸಂತ್ರಸ್ತ ಮನೋಭಾವದ ನಶೆ” (Drugged by victimhood) ಎಂದು ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು ಹೇಳಿರುವುದನ್ನು ತೀವ್ರವಾಗಿ ಖಂಡಿಸಿರುವ ಜೆಎನ್‌ಯು ವಿದ್ಯಾರ್ಥಿ ಸಂಘಟನೆಯು ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಅಲ್ಲದೆ, “ಬಹಿರಂಗ ಜಾತಿವಾದಿ” ಹೇಳಿಕೆ ನೀಡಿರುವ ಕುಲಪತಿಯವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದೆ.

- Advertisement -

​ಫೆಬ್ರವರಿ 16 ರಂದು ಬಿಡುಗಡೆಯಾದ ಪಾಡ್‌ಕಾಸ್ಟ್‌ವೊಂದರಲ್ಲಿ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯದ ಕುರಿತು ಮಾತನಾಡುವಾಗ ಕುಲಪತಿಗಳು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದನ್ನು ಕೇಳಿ ತಾವು “ಆಘಾತಕ್ಕೊಳಗಾಗಿದ್ದೇವೆ ಮತ್ತು ನಾಚಿಕೆಪಡುತ್ತೇವೆ” ಎಂದು ವಿದ್ಯಾರ್ಥಿ ಸಂಘಟನೆ ಶುಕ್ರವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಜೆಎನ್‌ಯುಎಸ್‌ಯು ಹೇಳಿಕೆಯ ಪ್ರಕಾರ, ಕುಲಪತಿಯವರು ಮೊದಲು ಆರ್‌ಎಸ್‌ಎಸ್‌ನ ಮಹಿಳಾ ವಿಭಾಗವಾದ ‘ರಾಷ್ಟ್ರೀಯ ಸೇವಿಕಾ ಸಮಿತಿ’ಯೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿಕೊಂಡಿದ್ದು, ಆ ಸಂಘಟನೆಯೇ ತಮ್ಮ ಪ್ರಪಂಚದ ದೃಷ್ಟಿಕೋನವನ್ನು ರೂಪಿಸಿದೆ ಎಂದು ಹೇಳಿದ್ದಾರೆ. ತದನಂತರ, ಹೊಸದಾಗಿ ಪರಿಚಯಿಸಲಾದ ಯುಜಿಸಿ ನಿಯಮಾವಳಿಗಳನ್ನು “ಅನಗತ್ಯ” ಮತ್ತು “ತರ್ಕಹೀನ” ಎಂದು ಜರೆದಿರುವ ಅವರು, ಐತಿಹಾಸಿಕವಾಗಿ ನಡೆದುಬಂದಿರುವ ಜಾತಿ ಆಧಾರಿತ ತಾರತಮ್ಯವನ್ನು ಸರಿಪಡಿಸುವ ನೀತಿಗಳನ್ನು “ಒಂದು ರೀತಿಯ ಮಾದಕವಸ್ತು (ಡ್ರಗ್ಸ್)” ಎಂದು ಕರೆದಿದ್ದಾರೆ.

ಇದನ್ನು ಓದಿದ್ದೀರಾ? 2026 ಅಸ್ಸಾಂ ಮಹಾಸಮರ: ಕಾಗದದಲ್ಲೇ ಉಳಿದ ಬಿಜೆಪಿ ಸರ್ಕಾರದ ಕಲ್ಯಾಣ

“ನೀವು ಶಾಶ್ವತವಾಗಿ ಸಂತ್ರಸ್ತರಾಗಿ ಅಥವಾ ಬಲಿಪಶು ಕಾರ್ಡ್ (Victim card) ಬಳಸಿಕೊಂಡು ಪ್ರಗತಿ ಹೊಂದಲು ಸಾಧ್ಯವಿಲ್ಲ. ಕರಿಯರಿಗಾಗಿ ಈ ವ್ಯವಸ್ಥೆಯನ್ನು ಮಾಡಲಾಗಿತ್ತು; ಇಲ್ಲಿ ದಲಿತರಿಗೂ ಅದೇ ವ್ಯವಸ್ಥೆಯನ್ನು ತರಲಾಯಿತು” ಎಂದು ಕುಲಪತಿ ಶಾಂತಿಶ್ರೀ ಅವರು ಹೇಳಿದ್ದಾರೆ ಎಂದು ಜೆಎನ್‌ಯುಎಸ್‌ಯು ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ಕುಲಪತಿಯವರ ಮಾತುಗಳನ್ನು “ಅಸಹ್ಯಕರ” ಎಂದು ಕರೆದಿರುವ ಜೆಎನ್‌ಯುಎಸ್‌ಯು, ಇಂತಹ ದೃಷ್ಟಿಕೋನವು ವಿಶ್ವವಿದ್ಯಾಲಯಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿರುವ ಜಾತಿ ಆಧಾರಿತ ತಾರತಮ್ಯ ಮತ್ತು ರಚನಾತ್ಮಕ ಅನ್ಯಾಯದ ಇತಿಹಾಸದ ಕಡೆಗಿನ ತೀವ್ರ ಸಂವೇದನಾಶೂನ್ಯತೆಯನ್ನು ಪ್ರತಿಫಲಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

​”ಇದು ಕೇವಲ ವೈಯಕ್ತಿಕ ಅಭಿಪ್ರಾಯವಲ್ಲ, ಬದಲಾಗಿ ದಲಿತರು ಮತ್ತು ಇತರ ಶೋಷಿತ ಸಮುದಾಯಗಳ ನೈಜ ಬದುಕಿನ ವಾಸ್ತವಗಳನ್ನು ನಿರಾಕರಿಸುವ ಮನಸ್ಥಿತಿಯಾಗಿದೆ. ಈ ಹೇಳಿಕೆಗಳು ತಲೆಮಾರುಗಳಿಂದ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯವನ್ನು ಅತ್ಯಂತ ಲಘುವಾಗಿ ಪರಿಗಣಿಸುತ್ತವೆ,” ಎಂದು ಯೂನಿಯನ್ ಹೇಳಿದೆ.
​

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...