ತಿರುಪತಿಯಲ್ಲಿ ಕೆಲಸ – ಹಿಂದುಗಳಿಗಷ್ಟೇ ಅವಕಾಶ, ಇತರರಿಗೆ ವಿಆರ್‌ಎಸ್‌; ಕೋಮುದ್ವೇಷಕ್ಕೆ ಬಲಿಯಾಯ್ತಾ ಟಿಟಿಡಿ?

Date:

ದಕ್ಷಿಣ ಭಾರತದ ಪ್ರಮುಖ ಮತ್ತು ಶ್ರೀಮಂತ ದೇವಾಲಯಗಳಲ್ಲಿ ಒಂದಾದ ತಿರುಪತಿಯ ತಿರುಮಲ ವೆಂಕಟೇಶ್ವರ ದೇವಸ್ಥಾನದಲ್ಲಿ ಕೆಲಸ ಮಾಡುವವ ಎಲ್ಲರೂ ಹಿಂದುಗಳೇ ಆಗಿಬೇಕು. ಹಿಂದುಯೇತರರಿಗೆ ವಿಆರ್‌ಎಸ್‌ (ವಾಲೆಂಟಿಯರ್ ರಿಟೈರ್ಮೆಂಟ್) ಕೊಟ್ಟು ನಿವೃತ್ತಿ ಹೆಸರಿನಲ್ಲಿ ಹೊರದಬ್ಬಲು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿ ತೀರ್ಮಾನಿಸಿದೆ.

- Advertisement -

ಇತ್ತೀಚೆಗಷ್ಟೇ ಟಿಟಿಡಿ ಅಧ್ಯಕ್ಷರಾಗಿ ಬಿ.ಆರ್ ನಾಯ್ಡು ನೇಮಕಗೊಂಡಿದ್ದಾರೆ ಅವರ ನೇಮಕದ ಬಳಿಕ, ತಿರುಮಲ ದೇವಾಲಯ ಪದೇ-ಪದೇ ಸುದ್ದಿಗೆ ಗ್ರಾಸವಾಗಿದೆ. ಕೆಲ ದಿನಗಳ ಹಿಂದೆ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ಲಡ್ಡು ವಿಚಾರ ಭಾರೀ ಸದ್ದು ಮಾಡಿತ್ತು. ಇದೀಗ, ಹಿಂದುಗಳಿಗೆ ಮಾತ್ರ ಕೆಲಸವೆಂಬ ನೀತಿ-ನಿರ್ಧಾರಗಳು ಹೊರಬರುತ್ತಿದೆ. ಈ ನಿರ್ಧಾರವು ಟಿಟಿಡಿ ಕೋಮುವಾದಿ, ಕೋಮುದ್ವೇಷದ ರಾಜಕಾರಣಕ್ಕೆ ತುತ್ತಾಗಿದೆಯೇ ಎಂಬ ಅನುಮಾನವನ್ನೂ ಹುಟ್ಟುಹಾಕಿದೆ. ಆಂಧ್ರಪ್ರದೇಶದ ಆಡಳಿತಾರೂಢ ಟಿಡಿಪಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದು ಈ ಅನುಮಾನಗಳಿಗೆ ಪುಷ್ಠಿ ನೀಡುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಶುಕ್ರವಾರ, ಸುದ್ದಿಗಾರರೊಂದಿಗೆ ಮಾತನಾಡಿದ ಟಿಟಿಡಿ ಅಧ್ಯಕ್ಷ ಬಿ.ಆರ್ ನಾಯ್ದು, “ತಿತಿರುಮಲದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಹಿಂದುಗಳಾಗಿರಬೇಕು. ಇತರೆ ಧರ್ಮದ ಸಿಬ್ಬಂದಿಯನ್ನು ಹೇಗೆ ನಿಭಾಯಿಸಬೇಕು? ಅವರನ್ನು ಸರ್ಕಾರದ ಬೇರೆ ಇಲಾಖೆಗಳಿಗೆ ವರ್ಗಾಹಿಸಬೇಕೇ ಅಥವಾ ವಿಆರ್‌ಎಸ್ ನೀಡಬೇಕೇ ಎಂಬುದುರ ಬಗ್ಗೆ ಆಂಧ್ರ ಸರ್ಕಾರದೊಂದಿಗೆ ಚರ್ಚಿಸುತ್ತೇವೆ” ಎಂದಿದ್ದಾರೆ.

“ತಿರುಮಲದಲ್ಲಿ ಕೆಲಸ ಮಾಡಲು ಹಿಂದುಗಳಿಗೆ ಮಾತ್ರ ಅವಕಾಶ ಇರಬೇಕು. ಅದೇ ನನ್ನ ಮೊದಲ ಗುರಿ. ಅದಕ್ಕಾಗಿ ಪ್ರಯತ್ನಿಸುತ್ತೇನೆ” ಎಂದು ನಾಯ್ಡು ಹೇಳಿದ್ದಾರೆ.

ಬಿ ಆರ್ ನಾಯ್ಡು ಅವರು ‘ಹಿಂದು ಭಕ್ತಿ ಚಾನೆಲ್’ ಸೇರಿದಂತೆ ಹಲವು ತೆಲುಗು ವಾಹಿನಿಗಳನ್ನು ನಡೆಸುತ್ತಿದ್ದಾರೆ. ಆರ್‌ಎಸ್‌ಎಸ್‌, ಬಿಜೆಪಿ ಜೊತೆ ನಿಕಟ ಸಂಬಂಧ ಹೊಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ CEC ವಿರುದ್ಧ ಪ್ರತಿಭಟನೆ ಮುಂದುವರೆಯುತ್ತದೆ: CJP

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ರಾಜೀನಾಮೆಯಿಂದ ಅಂತ್ಯಗೊಳ್ಳುವುದಿಲ್ಲ....

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್!

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ,...