ಭಾರತೀಯ ರೈಲ್ವೇಯಲ್ಲಿ ನಾನಾ ಹುದ್ದೆಗಳಿಗೆ ನೇಮಕಾತಿ ರೈಲ್ವೇ ನೇಮಕಾತಿ ಮಂಡಳಿ (RRB) ಅಧಿಸೂಚನೆ ಹೊರಡಿಸಿದೆ. ರೈಲ್ವೇಯಲ್ಲಿ ಲೆವೆಲ್ 1ರ 32,438 ಹುದ್ದೆಗಳಿಗೆ ನೇಮಕಾತಿ ಮಾಡಲು ಮುಂದಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಫೆಬ್ರವರಿ 22 ಕೊನೆಯ ದಿನವಾಗಿದೆ. ಆರ್‌ಆರ್‌ಬಿ ಅಧಿಕೃತ ವೆಬ್‌ಸೈಟ್ rrbahmedabad.gov.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷಗಳಾಗಿರಬೇಕು. ಗರಿಷ್ಠ 36 ವರ್ಷವನ್ನು ಮೀರಿರಬಾರದು. ವಿವಿಧ ವರ್ಗಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರಲಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಉಳಿದೆಲ್ಲ ವರ್ಗಗಳ ಅಭ್ಯರ್ಥಿಗಳಿಗೆ 250 ರೂ. ಶುಲ್ಕ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸುವವರು, rrbahmedabad.gov.inಗೆ ಭೇಟಿ ನೀಡಿ, ‘ನೇಮಕಾತಿ’ ವಿಭಾಗದಲ್ಲಿ ಅಗತ್ಯ ಮಾಹಿತಿಗಳನ್ನು ಒದಗಿಸಬೇಕು. ನಂತರ, ಅರ್ಜಿ ಶುಲ್ಕವನ್ನು ಪಾವತಿಸಬೇಕು. ಬಳಿಕ, ಅರ್ಜಿ ನಮೂನೆಯನ್ನು ಸಲ್ಲಿಸಬೇಕು.
Government job’s