ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಅಂದರೆ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಮೀಪಿಸುತ್ತಿದ್ದು, ಉದ್ಯೋಗ ಹುಡುಕುತ್ತಿರುವ ಆಸಕ್ತ ಅಭ್ಯರ್ಥಿಗಳು ಸಿಐಎಸ್‌ಎಫ್‌ನ ಅಧಿಕೃತ ವೆಬ್‌ಸೈಟ್ cisfrectt.cisf.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 3(ರಾತ್ರಿ 11:59 ರವರೆಗೆ). ಈ ನೇಮಕಾತಿ ಅಭಿಯಾನದಡಿಯಲ್ಲಿ, ಸಿಐಎಸ್‌ಎಫ್‌ನಲ್ಲಿ ಒಟ್ಟು 1161 ಕಾನ್‌ಸ್ಟೆಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಅರ್ಹತಾ ಮಾನದಂಡಗಳೇನು?
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಂದು ಅಥವಾ ಅದಕ್ಕೂ ಮೊದಲು ಕೌಶಲ್ಯ ವಹಿವಾಟುಗಳಿಗೆ(ಕ್ಷೌರಿಕ, ಬೂಟ್ ತಯಾರಕ/ಚಮ್ಮಾರ, ದರ್ಜಿ, ಅಡುಗೆ, ಬಡಗಿ, ತೋಟಗಾರ, ಪೇಂಟರ್, ಚಾರ್ಜ್ ಮೆಕ್ಯಾನಿಕ್, ವಾಷರ್ ಮ್ಯಾನ್, ವೆಲ್ಡರ್, ಎಲೆಕ್ಟ್ರಿಷಿಯನ್ ಮತ್ತು ಮೋಟಾರ್ ಪಂಪ್ ಅಟೆಂಡೆಂಟ್) ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕೈಗಾರಿಕಾ ತರಬೇತಿ ಸಂಸ್ಥೆಯಿಂದ ತರಬೇತಿ ಪಡೆದ ಯುವಕರಿಗೆ ಆದ್ಯತೆ ನೀಡಲಾಗುವುದು. ಆದರೆ, ಕೌಶಲ್ಯರಹಿತ ವಹಿವಾಟುಗಳಿಗೆ(ಸ್ವೀಪರ್‌ನಂತಹ), ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು.
ವಯೋಮಿತಿ : ಅಭ್ಯರ್ಥಿಗಳ ವಯಸ್ಸು 2025ರ ಆಗಸ್ಟ್ 1ಕ್ಕೆ 18 ರಿಂದ 23 ವರ್ಷಗಳ ನಡುವೆ ಇರಬೇಕು, ಅಂದರೆ 2022ರ ಆಗಸ್ಟ್ 2ಕ್ಕಿಂತ ಮೊದಲು ಮತ್ತು 2007ರ ಆಗಸ್ಟ್ 1ರ ನಂತರ ಜನಿಸಿರಬಾರದು.
ಅರ್ಜಿ ಶುಲ್ಕ : ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳಿಗೆ ₹100 ಅರ್ಜಿ ಶುಲ್ಕ ವಿಧಿಸಲಾಗುವುದು, ಮಹಿಳಾ ಅಭ್ಯರ್ಥಿಗಳು, ಎಸ್‌ಸಿ/ಎಸ್‌ಟಿ ಮತ್ತು ಮಾಜಿ ಸೈನಿಕರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಬೆಳಗಾವಿ ಸೇರಿದಂತೆ ರಾಜ್ಯದ ಹಲವೆಡೆ ಎರಡು ದಿನಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲು ಸಿಐಎಸ್‌ಎಫ್‌ನ ಅಧಿಕೃತ ವೆಬ್‌ಸೈಟ್ cisfrectt.cisf.gov.inಗೆ ಹೋಗಿ, ಮುಖಪುಟದಲ್ಲಿ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ನೇಮಕಾತಿ 2025 ಲಿಂಕ್ ಕ್ಲಿಕ್ ಮಾಡಬೇಕು. ಬಳಿಕ ನೋಂದಣಿ ವಿವರಗಳನ್ನು ನಮೂದಿಸಿ, ಸಲ್ಲಿಸಬೇಕು. ನಂತರ ನಿಮ್ಮ ಖಾತೆಗೆ ಲಾಗಿನ್ ಮಾಡಿದ ಬಳಿಕ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅರ್ಜಿ ಶುಲ್ಕವನ್ನು ಪಾವತಿಸಿ ಮತ್ತು ಫಾರ್ಮನ್ನು ಸಲ್ಲಿಸಬೇಕು.